ಪ್ರತಿಯೊಬ್ಬರು ಅರ್ಥಪೂರ್ಣವಾದ ಬದುಕು ಕಟ್ಟಿಕೊಳ್ಳಬೇಕು: ಜಿಲ್ಲಾಧಿಕಾರಿ

Source: so news | Published on 8th September 2019, 11:43 PM | State News | Don't Miss |

ಮಂಡ್ಯ: ವಿದ್ಯಾರ್ಥಿಗಳಿಗೆ ಶಿಕ್ಷಣ ಮುಗಿಸಿದ ನಂತರ ಉದ್ಯೋಗದ ಬಗ್ಗೆ ಆತಂಕವಿರುತ್ತದೆ. ಸರ್ಕಾರಿ ಕೆಲಸ ತೆಗೆದುಕೊಳ್ಳಬೇಕಾದರೆ ಸ್ಪರ್ಧಾತ್ಮಕ ಪರೀಕ್ಷೆಗೆ ಅದರದೇ ಆದ ರೀತಿನೀತಿಗಳು ಎದುರಿಸಬೇಕಾಗುತ್ತದೆ. ಹೀಗಾಗಿ ಖಾಸಗಿ ಕ್ಷೇತ್ರದಲ್ಲಿರುವ ವಿಫಲವಾದ ಅವಕಾಶವನ್ನು ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳು ಸದಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯಾದ ಡಾ. ಎಂ.ವಿ.ವೆಂಕಟೇಶ್ ಹೇಳಿದರು.
ನಗರದ ಸರ್ಕಾರಿ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತವತಿಯಿಂದ ಆಯೋಜಿಸಲಾಗಿದ್ದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಉದ್ಯೋಗ ಮೇಳವು ಉದ್ಯೋಗಕಾಂಕ್ಷಿಗಳಿಗೆ ಹಾಗೂ ಉದ್ಯೋಗದಾತರಿಗೆ ಒಂದು ವೇದಿಕೆ ನಿರ್ಮಿಸಿ ಕೊಡುವುದ ಮೂಲಕ ನಿರುದ್ಯೋಗಿಗಳು ಅವರಿಗೆ ಬೇಕಾದ ಉದ್ಯೋಗವನ್ನು ಆಯ್ಕೆಮಾಡಿಕೊಳ್ಳಲು ಸಹಕಾರಿಯಾಗಿದೆ. ಜಿಲ್ಲೆಯಲ್ಲಿರುವ ಪ್ರಧಾನ ಮಂತ್ರಿ ಕೌಶಲ್ಯ ಯೋಜನೆ ಹಾಗೂ ಮುಖ್ಯಮಂತ್ರಿ ಕೌಶಲ್ಯ ಕೇಂದ್ರಗಳ ಯೋಜನೆಯನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳಲ್ಲಿ ಮಾರುಕಟ್ಟೆಗೆ ಬೇಕಾದ ಕೌಶಲ್ಯ ಇಲ್ಲದ ಕಾರಣ ಕೆಲಸ ತೆಗೆದುಕೊಳ್ಳುವುದರಲ್ಲಿ ಹಿಂದುಳಿಯುತ್ತಾರೆ. ಹೀಗಾಗಿ ಅದಕ್ಕೆ ಪೂರಕವಾಗುವಂತೆ ವಿದ್ಯಾರ್ಥಿಗಳು ತರಬೇತಿ ಪಡೆದು ತಮ್ಮ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಪಡೆದು ಆರ್ಥಿಕವಾಗಿ ಸದೃಢರಾಗಿ ಅರ್ಥಪೂರ್ಣ ಹಾಗೂ ಸ್ವಾವಲಂಬನೆಯ ಜೀವನವನ್ನ ಕಟ್ಟಿಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಶಾಸಕರಾದ ಎಂ. ಶ್ರೀನಿವಾಸ್ ಅವರು ಮಂಡ್ಯದಲ್ಲಿ ಉದ್ಯೋಗ ಪಡೆದುಕೊಳ್ಳುವುದು ತುಂಬ ಕಷ್ಟಕರವಾಗಿದೆ. ಕೃಷಿ ಕ್ಷೇತ್ರ ಬಿಟ್ಟರೆ ಬೇರೆ ಯಾವ ಕ್ಷೇತ್ರದಲ್ಲೂ ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಉದ್ಯೋಗ ಮೇಳವನ್ನು ನಿರುದ್ಯೋಗಿಗಳು ಮತ್ತು ವಿದ್ಯಾಥಿಗಳು ಸದುಪಯೋಗಪಡೆದು ಸ್ವಾವಲಂಬಿಗಳಾಗಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಂಡ್ಯ ತಾಲ್ಲೂಕಿನ ತಹಶೀಲ್ದಾರ್ ನಾಗೇಶ್, ಕೌಶಾಲ್ಯಾಭಿವೃದ್ಧಿ ಅಧಿಕಾರಿ ನಾಗನಂದ್, ಉದ್ಯೋಗಾಧಿಕಾರಿ ಶಿವಮೂರ್ತಿ, ಕಾರ್ಮಿಕ ಅಧಿಕಾರಿ ನಾಗೇಂದ್ರ, ನಗರಸಭಾ ಪೌರಯುಕ್ತ ಲೋಕೇಶ್, ಕಾಲೇಜಿನ ಪ್ರಾಂಶುಪಾಲರಾದ ಮಹಾಲಿಂಗು ಹಾಗೂ ಇತರರು ಉಪಸ್ಥಿತರಿದ್ದರು

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...