ಇವಿಎಂ - ವಿವಿಪ್ಯಾಟ್ ಮತ ಪರಿಶೀಲನೆ ತೀರ್ಪು ಕಾದಿರಿಸಿದ ಸುಪ್ರೀಂಕೋರ್ಟ್

Source: Vb | By I.G. Bhatkali | Published on 19th April 2024, 8:33 AM | National News |

ಹೊಸದಿಲ್ಲಿ: ಇಲೆಕ್ಟ್ರಾನಿಕ್ ಮತಯಂತ್ರ (ಇವಿಎಂ)ದ ಮೂಲಕ ಚಲಾಯಿತವಾದ ಮತಗಳನ್ನು ವಿವಿಪ್ಯಾಟ್ ಯಂತ್ರದಲ್ಲಿ ದಾಖಲಾದ ಸ್ಲಿಪ್‌ ಗಳ ಜೊತೆ ತಾಳೆ ಹಾಕುವ ಮೂಲಕ ಅವುಗಳ ಕಾರ್ಯನಿರ್ವಹಣೆಯ ಸಾಚಾತನವನ್ನು ರನ್ನು ದೃಢಪಡಿಸಿಕೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಮೇಲಿನ ತನ್ನ ತೀರ್ಪನ್ನು ಗುರುವಾರ ಸುಪ್ರೀಂಕೋರ್ಟ್ ಕಾದಿರಿಸಿದೆ.

ಈ ಅರ್ಜಿಗಳ ಕುರಿತು ಚುನಾವಣಾ ಆಯೋಗದ ಉತ್ತರವನ್ನು ಗುರುವಾರ ಆಲಿಸಿದ ಬಳಿಕ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು ತನ್ನ ತೀರ್ಪನ್ನು ಕಾದಿರಿಸಿತು. ಚುನಾವಣಾ ಆಯೋಗದ ಪರ ವಕೀಲರಾದ ಹಿರಿಯ ನ್ಯಾಯವಾದಿ ಮಣಿಂದರ್ ಸಿಂಗ್ ಅವರು, ಇವಿಎಂಗಳ ಕಾರ್ಯನಿರ್ವಹಣೆ ಪ್ರಕ್ರಿಯೆ ಬಗ್ಗೆ ನ್ಯಾಯಪೀಠಕ್ಕೆ ವಿವರಣೆಯನ್ನು ನೀಡಿದರು.

ಅರ್ಜಿದಾರರ ಪರವಾಗಿ ನ್ಯಾಯವಾದಿ ಪ್ರಶಾಂತ್ ಭೂಷಣ್ ಹಾಗೂ ಹಿರಿಯ ನ್ಯಾಯವಾದಿ ಗೋಪಾಲ್ ಶಂಕರ್ ನಾರಾಯಣನ್ ವಾದಿಸಿದ್ದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...