ಅಂಜುಮನ್ ನಿವೃತ್ತ ಪ್ರಾಧ್ಯಾಪಕ ಎ.ಡಿ.ಮುಲ್ಲಾ ನಿಧನ

Source: sonews | By Staff Correspondent | Published on 29th January 2018, 5:42 PM | Coastal News | State News | Don't Miss |

ಭಟ್ಕಳ: ಇಲ್ಲಿನ ಅಂಜುಮನ್ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೋ. ಅಬ್ದುಲ್ ಘನಿ ಡಿ. ಮುಲ್ಲಾ(70) ಸೋಮವಾರ ಬೆಳಗಾವಿಯ ತಮ್ಮ ಸ್ವಗೃಹದಲ್ಲಿ ನಿಧನರಾದರು. 

ಇವರು ಪತ್ನಿ, ನಾಲ್ವರು ಪುತ್ರರು ಹಾಗೂ ಅಪಾರ ಶಿಷ್ಯವರ್ಗವನ್ನು ಅಗಲಿದ್ದಾರೆ.
1971ರಿಂದ 2006 ವರೆಗೆ ಸುಮಾರು 35 ವರ್ಷಗಳ ಅಂಜುಮನ್ ಮಹಾವಿದ್ಯಾಲಯದಲ್ಲಿ ಭೌತವಿಜ್ಞಾನದ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 
ಅಂಜುಮನ್ ಸಂಸ್ಥೆಯ ಹಲವು ಪದಾಧಿಕಾರಿ ಇವರ ಶಿಷ್ಯವರ್ಗದಲ್ಲಿ ಸೇರಿದ್ದು ದೇಶವಿದೇಶಗಳಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ.
ಇವರ ನಿಧನಕ್ಕೆ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರಹೀಮ್ ಜುಕಾಕೊ, ಮಾಜಿ ಅಧ್ಯಕ್ಷ ಡಾ.ಎಸ್.ಎಂ.ಸೈಯ್ಯದ್ ಖಲೀಲುರ್ರಹ್ಮಾನ್, ತಂಝೀಮ್ ಅಧ್ಯಕ್ಷ ಮುಝಮ್ಮಿಲ್ ಕಾಝಿಯಾ, ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಮುಜಾಹಿದ್ ಮುಸ್ತಫಾ ಸೇರಿದಂತೆ ಸಂಸ್ಥೆಯ ಸಿಬ್ಬಂಧಿವರ್ಗ ಹಾಗೂ ಅಪಾರ ಶಿಷ್ಯವರ್ಗ ಸಂತಾಪ ವ್ಯಕ್ತಪಡಿಸಿದ್ದು ಅಲ್ಲಾಹನು ಅವರಿಗೆ ಮಗ್ಫಿರತ್ ದಯಪಾಲಿಸಲಿ ಎಂದು ಪ್ರಾರ್ಥಿಸಿದ್ದಾರೆ.
 

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...