ಕಳ್ಳಭಟ್ಟಿ ಸರಾಯಿ ಮಾರಾಟ; ಮಹಿಳೆಯ ಬಂಧನ

Source: sonews | By Staff Correspondent | Published on 24th January 2019, 11:02 PM | Coastal News | Don't Miss |

ಭಟ್ಕಳ: ಕಳ್ಳ ಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಭಟ್ಕಳ ಅಬಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಓರ್ವ ಮಹಿಳೆಯನ್ನು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಬೆಳಕೆಯಲ್ಲಿ ನಡೆದಿದೆ. 
 
ಬಂಧಿತರನ್ನು ತಾಲೂಕಿನ ಬೆಳಕೆಯ ಸೋಡಿಗದ್ದೆ ಕೋಟಿಮನೆ ನಿವಾಸಿ ಹಿರಿಯಕ್ಕ ಮಂಜು ನಾಯ್ಕ ಎಂದು ಗುರುತಿಸಲಾಗಿದೆ. ಇವರಿಂದ ರೂ.1100 ಮೌಲ್ಯದ 11ಲೀ. ಕಳ್ಳಭಟ್ಟಿ ಸಾರಾಯಿಯನ್ನು ವಶಪಡಿಸಿಕೊಳ್ಳಲಾಗಿದೆ.

ಕಾರವಾರ ಅಬಕಾರಿ ಉಪಾಯುಕ್ತ ಮಂಜುನಾಥ ಮಾರ್ಗದರ್ಶನದಲ್ಲಿ ಭಟ್ಕಳ ಅಬಕಾರಿ ಇನ್‍ಸ್ಪೆಕ್ಟರ್ ಸುಬೋಧಾ ಸಿ. ನಾಯಕ, ಪಿಎಸ್‍ಐ ಜಿ.ಎಲ್.ಬೋರ್ಕರ್, ಭಟ್ಕಳ ಗ್ರಾಮೀಣ ಠಾಣಾ ಎಸೈ ರವಿ, ಸಿಬ್ಬಂದಿಗಳಾದ ದೀಪಾ, ಗುರುಪ್ರಸಾದ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
 

Read These Next

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...