ಮೇ 19ರವರೆಗೆ ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಟಿಸುವಂತಿಲ್ಲ ಜೆ. ಮಂಜುನಾಥ್

Source: so news | By MV Bhatkal | Published on 14th April 2019, 1:06 AM | State News | Don't Miss |

ಕೋಲಾರ:  ಲೋಕಸಭಾ ಚುನಾವಣೆ 2019ಕ್ಕೆ ಸಂಬಂಧಿಸಿದಂತೆ ಏಪ್ರಿಲ್ 11 ರಿಂದ ಮೇ 19ರ ಸಂಜೆ 6.30 ಗಂಟೆಯವರೆಗೆ ಯಾವುದೇ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಚುನಾವಣಾ ನಂತರದ ಸಮೀಕ್ಷೆ (ಎಕ್ಸಿಟ್ ಪೋಲ್) ಫಲಿತಾಂಶ ಪ್ರಕಟಿಸುವಂತಿಲ್ಲ ಎಂದು ಭಾರತ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ. 
ದೇಶದಾದ್ಯಂತ ವಿವಿಧ ಹಂತಗಳಲ್ಲಿ ಮತದಾನ ನಡೆಯುತ್ತಿರುವ ಹಿನ್ನೆಲೆ ಎಕ್ಸಿಟ್ ಪೋಲ್ ಸಮೀಕ್ಷೆ ಪ್ರಕಟಿಸುವುದು ಮತದಾರರ ಮೇಲೆ ಮತದಾನಕ್ಕೂ ಮುನ್ನ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಈ ನಿಷೇಧ ಹೇರಲಾಗಿದೆ ಎಂದು ತಿಳಿಸಿರುವ ಕ್ಷೇತ್ರ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಜೆ. ಮಂಜುನಾಥ್ ಅವರು ಈ ಸೂಚನೆಯನ್ನು ಮಾಧ್ಯಮ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದ್ದಾರೆ. 
ಅಲ್ಲದೇ, ವಿವಿಧ ಕ್ಷೇತ್ರಗಳಲ್ಲಿ ನಡೆಯುವ ಮತದಾನ ಪ್ರಕ್ರಿಯೆಯು ಮುಗಿಯುವ 48 ಗಂಟೆಗಳ ಮುನ್ನ (ಕೋಲಾರ ಕ್ಷೇತ್ರದಲ್ಲಿ 16-04-2019ರ ಸಂ. 6.00 ಗಂಟೆಯಿಂದ 18-04-2019ರ ಸಂ. 6.00 ಗಂಟೆ ವರೆಗೆ) ಆಯಾ ಕ್ಷೇತ್ರಗಳಲ್ಲಿ ಯಾವುದೇ ಅಭಿಪ್ರಾಯ ಸಮೀಕ್ಷೆ (opinion poll)ಗಳನ್ನು ನಡೆಸುವುದು ಹಾಗೂ ಪ್ರಕಟಿಸುವುದು, ಚರ್ಚೆಗಳು, ವಿಶ್ಲೇಷಣೆಗಳು, ಚಿತ್ರಗಳು ಸೇರಿದಂತೆ ಆಡಿಯೋ ಬೈಟ್‍ಗಳ ಪ್ರಕಟಣೆಯನ್ನು ನಿಷೇಧಿಸಿದೆ ಎಂದು ಅವರು ತಿಳಿಸಿದ್ದಾರೆ

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...