ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆ ಪ್ರಕರಣ: ಕಾರು ಮಾಲೀಕ ಶವವಾಗಿ ಪತ್ತೆ!

Source: S.O. News Service | By MV Bhatkal | Published on 6th March 2021, 2:24 PM | National News |

ಮುಂಬೈ: ದೇಶದ ಅಗರ್ಭ ಶ್ರೀಮಂತ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆಯಾಗಿ ಆತಂಕ ಸೃಷ್ಟಿಸಿತ್ತು. ಈ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಕಾರಿನ ಮಾಲೀಕನ ಶವ ಪತ್ತೆಯಾಗಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು. ತನಿಖೆ ವೇಳೆ ಕಾರು ಮಾಲೀಕ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಕಾರು ಮಾಲೀಕ ಮನ್ಸುಕ ಹಿರೆನ್ ಶವ ಥಾಣೆಯ ರೈಲ್ವೇ ಕ್ರಿಕ್ ಬಳಿ ಪತ್ತೆಯಾಗಿದೆ. ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾದಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಸ್ಕಾರ್ಪಿಯೋ ಕಾರನ್ನು ಮುಕೇಶ್ ಅಂಬಾನಿ ಮನೆ ಮುಂದೆ ನಿಲ್ಲಿಸಲಾಗಿತ್ತು. ಈ ಮೂಲಕ ದೊಡ್ಡ ಅನಾಹುತ ಸೃಷ್ಟಿಸಲು ಸಂಚು ರೂಪಿಸಲಾಗಿತ್ತು. ಆದರೆ ಪೊಲೀಸರು ಕಾರನ್ನು ಪತ್ತೆ ಹಚ್ಚಿ ದೊಡ್ಡ ಅನಾಹುತ ತಪ್ಪಿಸಿದ್ದರು.
ಇನ್ನು ಇದರ ಬೆನ್ನಲ್ಲೇ ಜೈಶ್ ಉಲ್ ಹಿಂದ್ ಉಗ್ರ ಸಂಘಟನೆ ಇದರ ಹೊಣೆ ಹೊತ್ತುಕೊಂಡಿದ್ದು ಪತ್ರವೊಂದನ್ನು ಪ್ರಕಟಿಸಿರುವುದಾಗಿ ವರದಿಯಾಗಿತ್ತು. ಇದರ ಬೆನ್ನತ್ತಿದ ಪೊಲೀಸರಿಗೆ ತನಿಖೆ ವೇಳೆ ಸಂಘಟನೆಯ ಪತ್ರವೇ ನಕಲಿ ಎಂದು ಗೊತ್ತಾಗಿತ್ತು. 

 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...