ಹೊಸದಿಲ್ಲಿ: ಸರಕಾರದ ಜೊತೆಗಿನ ಭಿನ್ನಾಭಿಪ್ರಾಯ ದೇಶದ್ರೋಹವಲ್ಲ: ಸುಪ್ರೀಂ ಕೋರ್ಟ್

Source: VB | By S O News | Published on 4th March 2021, 2:36 PM | National News |

ಹೊಸದಿಲ್ಲಿ: ಸರಕಾರಕ್ಕಿಂತ ಭಿನ್ನ ಅಭಿಪ್ರಾಯವನ್ನು ಅಭಿ ವ್ಯಕ್ತಿಸುವುದು ದೇಶದ್ರೋಹ ಎನ್ನಲಾಗದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ ಜಮ್ಮು ಹಾಗೂ ಕಾಶ್ಮೀರದ ವಿಶೇಷ ಸ್ಥಾನಮಾನಕ್ಕೆ ಸಂಬಂಧಿಸಿದ ಸಂವಿಧಾನದ 370ನೇ ವಿಧಿ ರದ್ದತಿಯ ಬಗ್ಗೆ ಭಾರತದ ವಿರುದ ಫಾರೂಕ್ ಅಬ್ದುಲ್ಲಾ ಅವರು ಚೀನಾ ಹಾಗೂ ಪಾಕಿಸ್ತಾನದ ನೆರವು ಕೋರಿದ್ದಾರೆ ಎಂಬ ಆರೋಪವನ್ನು ಸಾಬೀತುಪಡಿಸುವಲ್ಲಿ ದೂರುದಾರರು ವಿಫಲ ರಾಗಿದ್ದಾರೆ ಎಂದು ಹೇಳಿರುವ ನ್ಯಾಯಮೂರ್ತಿ ಸಂಜಯ್ ಕಿಷನ್ ಕೌಲ್ ಹಾಗೂ ಹೇಮಂತ್ ಗುಪ್ತಾ ಅವರಿದ್ದ ನ್ಯಾಯಪೀಠ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಳ್ಳಿ ಹಾಕಿದೆ. ಅಲ್ಲದೆ ದೂರು ದಾರರಿಗೆ ನ್ಯಾಯಪೀಠ 50 ಸಾವಿರ ರೂಪಾಯಿ ದಂಡ ವಿಧಿಸಿದೆ.

ದೇಶದ್ರೋಹವಲ್ಲ: ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಜಮ್ಮು ಹಾಗೂ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಕೇಂದ್ರ ಸರಕಾರದ ನಡೆಯನ್ನು ಖಂಡಿಸಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರು ನೀಡಿದ ಹೇಳಿಕೆಗೆ ದೂರುದಾರರಾದ ರಜತ್ ಶರ್ಮಾ ಹಾಗೂ ನೇಡ್ ಶ್ರೀವಾತ್ಸವ ಆಕ್ಷೇಪ ವ್ಯಕ್ತಪಡಿಸಿದ್ದರು.

ಫಾರೂಕ್ ಅಬ್ದುಲ್ಲಾ ಅವರು ದೇಶ ವಿರೋಧಿ. ಅವರನ್ನು ಸಂಸದರಾಗಿ ಮುಂದುವರಿಯಲು ಅವಕಾಶ ನೀಡಿದರೆ, ಭಾರತದಲ್ಲಿ ಇತರರಿಗೆ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಲು ಅನು ಮೋದನೆ ನೀಡಿದಂತೆ ಆಗುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...