ಮಾಸಾಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಬಿ.ಎಸ್.ವೈ

Source: so news | Published on 28th January 2020, 12:11 AM | State News | Don't Miss |

ಹಾಸನ:ಈ ಮಾಸಾಂತ್ಯದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಸಿಂಗನಕುಪ್ಪೆ ಗ್ರಾಮದ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮ್ಮ ದಾವೋಸ್ ಭೇಟಿ ಅತ್ಯಂತ ಫಲಪ್ರದವಾಗಿದೆ. ರಾಜ್ಯದಲ್ಲಿ ಅನೇಕರು ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ ಎಂದು ಹೇಳಿದರಲ್ಲದೆ, ಹಲವು ಕೈಗಾರಿಕೋದ್ಯಮಿಗಳು ನಮ್ಮ ರಾಜ್ಯಕ್ಕೆ ಬರಲು ಒಪ್ಪಿದ್ದಾರೆ ಎಂದರು.
40ಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳನ್ನು ತಾವು ವೈಯಕ್ತಿಕವಾಗಿ ಭೇಟಿ ಮಾಡಿ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ವಿನಂತಿಸಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದರು.
ಎಸ್‍ಎಂ. ಕೃಷ್ಣ ಅವರ ನಂತರ 16 ವರ್ಷಗಳು ಕಳೆದ ಮೇಲೆ ತಾವು ದಾವೂಸ್‍ಗೆ ಹೋಗಿದ್ದು, ತುಂಬಾ ಉಪಯುಕ್ತವಾಗಿದೆ. ದೊಡ್ಡ ಪ್ರಮಾಣದಲ್ಲಿ ಕೈಗಾರಿಕೆ ಅಭಿವೃದ್ಧಿ ಮಾಡಲು ಭರವಸೆ ದೊರೆತಿದೆ ಇದರಿಂದ ಕೃಷಿ, ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಲೂ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
ಮೈಸೂರು ಜಿಲ್ಲೆಯ ದೇವಿತಂದ್ರೆ ಗ್ರಾಮದಲ್ಲಿ ದೇವಾಲಯದ ರಾಜಗೋಪುರ ಉದ್ಘಾಟನೆ ಮುಗಿಸಿ ಕೊಡಗಿಗೆ ತೆರಳುವುದಾಗಿ ಹೇಳಿದ ಅವರು ಕೊಡಗಿನಲ್ಲಿ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಡಾ|| ಅಶ್ವತ್‍ನಾರಾಯಣ್, ಸಚಿವರಾದ ವಿ.ಸೊಮಣ್ಣ, ಶಾಸಕರಾದ ಸಾ.ರಾ ಮಹೇಶ್, ಮಾಜಿ ಸಚಿವರಾದ ಎ.ಮಂಜು, ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ|| ರಾಮ್ ನಿವಾಸ್ ಸೆಪಟ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ, ವಿಭಾಗಾಧಿಕಾರಿ ನವೀನ್ ಭಟ್ ಸ್ಥಳಕ್ಕೆ ಆಗಮಿಸಿ ಹೂ ಗುಚ್ಚ ಕೊಡುವುದರ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸ್ವಾಗತಿಸಿದರು.

Read These Next

2020 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂಯೋಜನೆವಾರು ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

ವಿದ್ಯಾರ್ಥಿಗಳು “Online” ಮೂಲಕ ಸಲ್ಲಿಸಿದ ಎಲ್ಲಾ ದಾಖಲೆಗಳನ್ನು (ಮೂಲ ದಾಖಲೆಗಳ ಜೊತೆಯಲ್ಲಿ) ಪರಿಶೀಲನೆಗಾಗಿ ತಾವು ಅಧ್ಯಯನ ...

ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್‍ಗೆ ಅರ್ಜಿ ಆಹ್ವಾನ                                                         

ಬೆಂಗಳೂರು: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್‍ಗೆ (ಡಿ.ಸಿ.ಎಂ) ಬೆಂಗಳೂರು ನಗರ/ ಗ್ರಾಮಾಂತರ, ತುಮಕೂರು, ...