ಕಾರವಾರ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Source: S.O. News service | By S O News | Published on 3rd August 2021, 11:24 PM | Coastal News |

ಕಾರವಾರ: ವಿದ್ಯಾರ್ಥಿವೇತನ ಪೋರ್ಟಲ್‍ನಲ್ಲಿ ಜಿಲ್ಲೆಯ sಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ, ಕಾಲೇಜುಗಳಲ್ಲಿ ಕಲಿಯುತ್ತಿರುವ ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಧರ್ಮದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳು ಆನ್‍ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಅಗಷ್ಟ್ 31ರ ವರೆಗೆ ವಿಸ್ತರಿಸಲಾಗಿದ್ದು, ರಾಜ್ಯ ವಿದ್ಯಾರ್ಥಿವೇತನದ ಕುರಿತ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://dom.karnataka.gov.in ಅಥವಾ SSP ಪೂರ್ಟಲ್ https://ssp.karnataka.gov.in ಅಥವಾ ಆಯಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಎಸ್. ಪುರುಷೋತ್ತಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next