ಕಾರವಾರ: ಅಲ್ಪಸಂಖ್ಯಾತ ಬಾಲಕರ ವಸತಿ ನಿಲಯದ ಪ್ರವೇಶಕ್ಕೆ ಅವಧಿ ವಿಸ್ತರಣೆ

Source: S O News service | By I.G. Bhatkali | Published on 25th September 2021, 6:42 PM | Coastal News | Don't Miss |

ಕಾರವಾರ: ಜಿಲ್ಲೆಯ  ಕಾರವಾರ, ಶಿರಸಿ, ಭಟ್ಕಳ ದಲ್ಲಿ ಬರುವ  ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ 2021-22 ನೇ ಸಾಲಿನ ಪ್ರವೇಶಕ್ಕೆ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು  ಅಕ್ಟೋಬರ್ 22 ರ ವರೆಗೂ ವಿಸ್ತರಿಸಲಾಗಿದೆ.

ಪಿ.ಯು.ಸಿ, ಪದವಿ ಹಾಗೂ ಇತರೇ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ   ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಶಿಖ್ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ, ತಾಲೂಕಾ ವಿಸ್ತರಣಾಧಿಕಾರಿಗಳ ಕಛೇರಿ  ಹಾಗೂ ಆಯಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರವಿಣಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...