2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣು: ಮುಂದಿನ ತಿಂಗಳಿನಿಂದ 120 ದಿನಗಳ ಕಾಲ ದೇಶಾದ್ಯಂತ ನಡ್ಡಾ ಪ್ರವಾಸ

Source: PTI | Published on 23rd November 2020, 12:28 AM | National News |


 
ನವದೆಹಲಿ: 2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟು ಪಕ್ಷ ಸಂಘಟನೆ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಮುಂದಿನ ತಿಂಗಳಿನಿಂದ 120 ದಿನಗಳ ಕಾಲ ರಾಷ್ಟ್ರದಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.
ಡಿಸೆಂಬರ್ ಮೊದಲ ವಾರದಿಂದ ಜೆ. ಪಿ. ನಡ್ಡಾ ಪ್ರವಾಸ ಆರಂಭಿಸಲಿದ್ದು, ಉತ್ತರ್ ಖಂಡ್ ಮೊದಲ ರಾಜ್ಯವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. 
ಡಿಸೆಂಬರ್ 5ರಿಂದ ಜೆ. ಪಿ. ನಡ್ಡಾ ಪ್ರವಾಸ ಆರಂಭಿಸುವ ಸಾಧ್ಯತೆಯಿದ್ದು, ಪ್ರತಿಯೊಂದು ರಾಜ್ಯಕ್ಕೂ ಭೇಟಿ ನೀಡಿ, ಎಲ್ಲಾ ಬೂತ್ ಮಟ್ಟದ ಮುಖ್ಯಸ್ಥರೊಂದಿಗೆ ವರ್ಚುಯಲ್ ಸಭೆ ನಡೆಸಲಿದ್ದಾರೆ. ಪ್ರತಿಯೊಂದು ರಾಜ್ಯದ ಜಿಲ್ಲಾ ಮುಖ್ಯಸ್ಥರು ಸೇರಿದಂತೆ ಹಿರಿಯ ಮುಖಂಡರು ಮಾತ್ರವಲ್ಲದೇ, ಪಕ್ಷದ ಶಾಸಕರು ಹಾಗೂ ಸಂಸದರನ್ನು ಭೇಟಿ ಮಾಡಲಿದ್ದಾರೆ ಎಂದು ಅವರು ಹೇಳಿದರು.
ಪ್ರವಾಸದ ವೇಳೆಯಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸದ ಲೋಕಸಭಾ ಕ್ಷೇತ್ರಗಳು ಹಾಗೂ ವಲಯಗಳಲ್ಲಿ ಪಕ್ಷ ಸಂಘಟನೆ ನಿಟ್ಟಿನಲ್ಲಿ ಪಕ್ಷದ ಮುಖಂಡರೊಂದಿಗೆ ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ಅವರು ತಿಳಿಸಿದರು.
ಮುಂದಿನ ವರ್ಷ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಅಸ್ಸಾಂನಲ್ಲಿ ಚುನಾವಣೆಗಾಗಿ ಪಕ್ಷದ ಸಿದ್ಧತೆಯನ್ನು ಅವರು ಪರಿಶೀಲನೆ ನಡೆಸಲಿದ್ದಾರೆ ಎಂದು ಅರುಣ್ ಸಿಂಗ್ ಮಾಹಿತಿ ನೀಡಿದರು

Read These Next

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

'ದಾರಿ ತಪ್ಪಿಸುವ ಜಾಹೀರಾತು' ಸಾರ್ವಜನಿಕ ಕ್ಷಮಾಪಣೆ ಕೇಳಲು ರಾಮ್‌ದೇವ್‌ಗೆ 1 ವಾರದ ಗಡುವು

ಅಲೋಪತಿ ವೈದ್ಯಕೀಯ ಪದ್ಧತಿಯ ವಿರುದ್ಧ ಅಪಪ್ರಚಾರ ಮಾಡದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಯೋಗ ಗುರು ರಾಮ್ ದೇವ್ ಮತ್ತು ಪತಂಜಲಿ ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...