ಹಿಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಫೇಸ್ ಬುಕ್ ಬಿಜೆಪಿ ಪರ ಪ್ರಚಾರ ಮಾಡಿತ್ತು: ಟಿಎಂಸಿ ಗಂಭೀರ ಆರೋಪ

Source: PTI | Published on 2nd September 2020, 10:45 PM | National News | Don't Miss |

 

 


ನವದೆಹಲಿ: ಸೋಷಿಯಲ್ ಮೀಡಿಯಾದಲ್ಲಿ ಫೇಸ್ ಬುಕ್ ಬಿಜೆಪಿ ಪರ ಒಲವು ತೋರಿಸುತ್ತಿದೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್, ಸಿಇಒ ಮಾರ್ಕ್ ಝುಕರ್ ಬರ್ಗ್ ಗೆ ಪತ್ರ ಬರೆದಿದ್ದು ತನ್ನ ಆರೋಪವನ್ನು ಪುಷ್ಟೀಕರಿಸಲು ಉದಾಹರಣೆಗಳಿವೆ ಎಂದು ಹೇಳಿದೆ.
ಈ ಸಂಬಂಧ ಪಕ್ಷದ ಸಂಸದ ಡೆರೆಕ್ ಓಬ್ರಿಯನ್ ಮಾರ್ಕ್ ಝುಕರ್ ಬರ್ಗ್ ಗೆ ಪತ್ರ ಬರೆದಿದ್ದಾರೆ. ಬಿಜೆಪಿ ಹೊರತುಪಡಿಸಿ ಬೇರೆ ಪಕ್ಷಗಳ ಬಗ್ಗೆ ಫೇಸ್ ಬುಕ್ ನಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಈ ಸಂಬಂಧ ಈ ಹಿಂದೆ ತಮ್ಮನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಕೂಡ ಹೇಳಿದ್ದೆ. ಕಳೆದ ಜೂನ್ ನಲ್ಲಿ ಸಂಸತ್ತು ಕಲಾಪದಲ್ಲಿ ನಾವು ಪ್ರಸ್ತಾಪ ಮಾಡಿದ್ದೆವು ಎಂದು ಪತ್ರದಲ್ಲಿ ತೃಣಮೂಲ ಸಂಸದ ಹೇಳಿದ್ದಾರೆ.
2015ರಲ್ಲಿ ದೆಹಲಿಯಲ್ಲಿ ಓಬ್ರಿಯನ್ ಮಾರ್ಕ್ ಝುಕರ್ ಬರ್ಗ್ ಅವರನ್ನು ಭೇಟಿ ಮಾಡಿದ್ದರು ಎಂದು ತೃಣಮೂಲ ಕಾಂಗ್ರೆಸ್ ಮೂಲಗಳು ತಿಳಿಸಿವೆ. 2014ರ ಮತ್ತು 2019ರ ಸಾರ್ವತ್ರಿಕ ಚುನಾವಣೆಗಳಲ್ಲಿ ಬಿಜೆಪಿ ಹೊರತುಪಡಿಸಿ ಬೇರೆ ಪಕ್ಷಗಳ ಬಗ್ಗೆ ಫೇಸ್ ಬುಕ್ ನಲ್ಲಿ ನಕಾರಾತ್ಮಕ ವರದಿಗಳು, ಪ್ರಚಾರಗಳು ಹೆಚ್ಚು ಆಗುತ್ತಿದ್ದವು, ಇದು ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ ಎಂದು ಓಬ್ರಿಯನ್ ಮೊನ್ನೆ ಆಗಸ್ಟ್ 31ರಂದು ಮಾರ್ಕ್ ಝುಕರ್ ಬರ್ಗ್ ಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.
ಇನ್ನು ಕೆಲ ತಿಂಗಳಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ನಡೆಯಲಿದ್ದು ನಮ್ಮ ರಾಜ್ಯದಲ್ಲಿ ಫೇಸ್ ಬುಕ್ ಪೇಜ್ ಗಳನ್ನು ಮತ್ತು ಅಕೌಂಟ್ ನ್ನು ತಡೆಹಿಡಿದಿರುವುದರ ಹಿಂದೆ ಬಿಜೆಪಿ ಕೈವಾಡವಿದೆ. ಫೇಸ್ ಬುಕ್  ಸಂಸ್ಥೆಯ ಹಿರಿಯ ಅಧಿಕಾರಿಗಳು ಮತ್ತು ಬಿಜೆಪಿ ಸರ್ಕಾರದ ನಡುವೆ ಸಾಕಷ್ಟು ಒಪ್ಪಂದಗಳು, ವ್ಯವಹಾರಗಳು ನಡೆಯುತ್ತಿವೆ ಎಂಬುದಕ್ಕೆ ಬಹಿರಂಗವಾಗಿ ಸಾಕಷ್ಟು ಪುರಾವೆಗಳು ಸಿಗುತ್ತವೆ ಎಂದು ರಾಜ್ಯಸಭಾ ಸದಸ್ಯರಾಗಿರುವ ಓಬ್ರಿಯನ್ ಹೇಳಿದ್ದಾರೆ

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...