ಜಿಲ್ಲಾ ಆಸ್ಪತ್ರೆಗೆ ಸೌಲಭ್ಯಗಳನ್ನು ಕಲ್ಪಿಸಲಾಗುವುದು - ಕೆ . ಶ್ರೀನಿವಾಸಗೌಡ.

Source: sonews | By Staff Correspondent | Published on 3rd August 2020, 6:00 PM | Coastal News | Don't Miss |

ಕೋಲಾರ:  ಎಸ್.ಎನ್.ಆರ್ ಆಸ್ಪತ್ರೆಗೆ ಅವಶ್ಯಕ ಇರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಕೋಲಾರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ.ಶ್ರೀನಿವಾಸಗೌಡ ಅವರು ಹೇಳಿದರು.

ಇಂದು ನಗರದ ಜಿಲ್ಲಾಸ್ಪತ್ರೆಗೆ ಬೇಟಿ ನೀಡಿ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಸಚಿವರಾಗಿದ್ದಾಗ 250 ಹಾಸಿಗೆಗಳುಳ್ಳ ಆಸ್ಪತ್ರೆಯನ್ನು 450 ಹಾಸಿಗೆಗಳಿಗೆ ಏರಿಸಿದೆ. ಎಸ್.ಎನ್.ಆರ್. ಆಸ್ಪತ್ರೆಯನ್ನು ಧರ್ಮಾಸ್ಪತ್ರೆ ಎಂತಲೂ ಕರೆಯುತ್ತಾರೆ. ಈ ಆಸ್ಪತ್ರೆಯಲ್ಲಿ ಪ್ರತಿಯೊಂದು ಕಾಯಿಲೆಗೂ ವೈದ್ಯರು ವೈದ್ಯರು ಚಿಕಿತ್ಸೆ ರೋಗಿಗಳನ್ನುಗುಣಮುಖರಾನ್ನಾಗಿಸುತ್ತಾರೆ. ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವೈದ್ಯರಿಗೆ ಅಧಿಕಾರಿಗಳಿಗೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ನೀಡಿ ಇದಕ್ಕೂ ಮೊದಲು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ -19 ಸೋಂಕಿತರ ಹಾಗೂ ಹೊರ ರೋಗಿಗಳ ಯೋಗಕ್ಷೇಮವನ್ನು ವಿಚಾರಿಸಿದರು . ವಿಧಾನಪರಿಷತ್ ಸದ್ಯಸರಾದ ಗೋವಿಂದರಾಜು ಅವರು ಮಾತನಾಡಿ , ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಪ್ರಮಾಣವು ಕಡಿಮೆ ಇದೆ . ಕೋವಿಡ್ -19 ಗೆ ತುತ್ತಾಗಿರುವ ಸೋಂಕಿತರಿಗೆ ವೈದ್ಯರು ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡುತ್ತಿದಾರೆ ಎಂದರು .

ಜಿಲ್ಲೆಯ ಜನಸಂಖ್ಯೆಗೆ ಹೋಲಿಸಿದರೆ ಜಿಲ್ಲಾಸ್ಪತ್ರೆಯು ಸಾಕಾಗುತ್ತಿಲ್ಲ, ಸಾಧ್ಯವಾದರೆ ಸರ್ಕಾರದ ಜತೆ ಚರ್ಚಿಸಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಪ್ರಯತ್ನ ಮಾಡಲಾಗುವುದು. ಕೋವಿಡ್ -19 ಸಂಕ್ರಾಮಿಕ ರೋಗವು ಮುಂದಿನ ದಿನಗಳಲ್ಲಿ ಹೆಚ್ಚಾಗುವ ಸಂಭವವಿದ್ದು ಆಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ವಿಜಯಕುಮಾರ್ ಅವರು ಮಾತನಾಡಿ, ಕೋವಿಡ್-19 ಸೋಂಕಿಗೆ ತುತ್ತಾಗಿ ಜಿಲ್ಲಾಸ್ಪತ್ರೆಗೆ ದಾಖಲಾದ ಸೋಂಕಿರನ್ನು ಉತ್ತಮ ಚಿಕಿತ್ಸೆಯನ್ನು ನೀಡುವುದರ ಮೂಲಕ ಗುಣಮುಖರನ್ನಾಗಿ ಮಾಡಲಾಗುತ್ತಿದೆ. ಜಿಲ್ಲಾಸ್ಪತ್ರೆಗೆ ದಾಖಲಾದ ಕೋವಿಡ್ -19 ಸೋಂಕಿತರಲ್ಲಿ ಇದುವರೆಗೂ ಮರಣ ಹೊಂದಿರುವುದಿಲ್ಲ ಎಂದು ಮಾಹಿತಿ ನೀಡಿದರು. ಕೋವಿಡ್ -19 ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ 300 ಹಾಸಿಗೆಗಳು ಸಂಭ್ರಮ್ ಆಸ್ಪತ್ರೆಯಲ್ಲಿ 500 ಹಾಸಿಗೆಗಳು ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಹಾಸಿಗೆಗಳನ್ನು ಮೀಸಲಿಡಲಾಗಿದೆ. ಜಿಲ್ಲೆಯ ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ 50 ಹಾಸಿಗೆಗಳನ್ನು ಕಾಯ್ದಿರಿಸಿ, ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ಕೆಲವು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಕೋವಿಡ್ ಕೇರ್ ಸೆಂಟರ್‌ಗಳನ್ನಾಗಿ ಪರಿವರ್ತಿಸಿ ಅಲ್ಲಿಯು ಚಿಕಿತ್ಸೆ ನೀಡಲಾಗುತ್ತಿದೆ ಎಂದರು . ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ . ನಾರಾಯಣಸ್ವಾಮಿ ಅವರು ಮಾತನಾಡಿ, 6 Body Cold Storage Mortuary Cabinate ಮತ್ತು 100 ಕೆ.ಜಿ ಸಾಮಾರ್ಥ್ಯವುಳ್ಳ Loundry Washing Extractor ಅವಶ್ಯಕವಾಗಿದ್ದು, ತಮ್ಮ ನಿಧಿಯಿಂದ ನೀಡುವಂತೆ ಶಾಸಕರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ನಗರಸಭೆ ಸದ್ಯಸರಾದ ರಾಕೇಶ್, ವೈದ್ಯರಾದ ನಾರಾಯಣಸ್ವಾಮಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಯವರು ಉಪಸ್ಥಿತರಿದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...