ಭಟ್ಕಳ ನ್ಯೂ ಇಂಗ್ಲೀಷ್ ಕಾಲೇಜಿನಲ್ಲಿ ಕಾರ್ಯಕ್ರಮ. ಸೋಲನ್ನ ತಿದ್ದಿಕೊಳ್ಳದಿದ್ದರೇ ವೈಫಲ್ಯವಾಗುತ್ತದೆ : ಪ್ರಸಾದ ಜಿ ಬಿ.

Source: SO News | By Laxmi Tanaya | Published on 12th October 2021, 9:53 PM | Coastal News | Don't Miss |

ಭಟ್ಕಳ : ಇತಿಹಾಸದಲ್ಲಿ ಆದ ಸೋಲನ್ನು ಅನುಭವಿಸಿ ಅಥವಾ ಓದಿ ಅದನ್ನು ತಿದ್ದಿಕೊಳ್ಳದೆ ಹೋದರೆ ಅದು ನಮ್ಮ ವೈಫಲ್ಯವಾಗುತ್ತದೆ ಎಂದು ಅಂಜುಮಾನ್ ಇಂಜಿನೀಯರಿಂಗ್ ಕಾಲೇಜಿನ ಉಪನ್ಯಾಸಕ ಪ್ರಸಾದ್ ಜಿ.ಬಿ. ಹೇಳಿದರು.

 ಅವರು ಭಟ್ಕಳದ ದಿ ನ್ಯೂ ಇಂಗ್ಲಿಷ್ ಪಿ ಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಸ್ವಾಗತಿಸುವ ‘ಸಮಾಗಮ-2021’  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ, ಹಿಂದಿನ ತರಗತಿಗಳಲ್ಲಿ ನಿಮ್ಮ ತಪ್ಪಿನಿಂದ ಒಂದು ವೇಳೆ ಕಡಿಮೆ ಅಂಕಗಳನ್ನು ತೆಗೆದುಕೊಂಡಿದ್ದರೆ ಈಗ ಪಿಯುಸಿ ಓದುವಾಗ ಈ ಹಿಂದೆ ಆದ ತಪ್ಪನ್ನು ತಿದ್ದಿಕೊಂಡು ಹೆಚ್ಚಿನ ಅಂಕ ಪಡೆದು ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಹೇಳಿದರು.   

ಭಟ್ಕಳ ಏಜುಕೇಶನ್ ಟ್ರಸ್ಟಿನ ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ್ ಎಸ್.ಎಸ್.ಎಲ್.ಸಿ. ಯಲ್ಲಿ 90% ಕ್ಕಿಂತ ಹೆಚ್ಚು ಅಂಕ ಪಡೆದು ದಿ ನ್ಯೂ ಇಂಗ್ಲಿಷ್ ಪಿ ಯು ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು. 

ಭಟ್ಕಳ ಏಜುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುರೇಶ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಡಾ. ವಿರೇಂದ್ರ ವಿ. ಶಾನಭಾಗ ಉಪಸ್ಥಿತರಿದ್ದರು. 
ವಿದ್ಯಾರ್ಥಿಗಳಾದ ಪ್ರಿಯಾಂಕ ಮತ್ತು ಸಂಗಡಿಗರು ಪ್ರಾರ್ಥಿಸಿದರು, ಸಹನಾ ಪೈ ಸ್ವಾಗತಿಸಿದರು, ಚಂದನ ನಾಯ್ಕ ವಂದಿಸಿದರು, ಸಂಧ್ಯಾ ಬೈಂದೂರು ಮತ್ತು ಪ್ರಜ್ಞಾ ಗೋಳಿ ನಿರೂಪಿಸಿದರು. ನಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮ ನಡೆಯಿತು

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...