ನಿರ್ಗಮಿತ ಡಿಸಿ ನಕುಲ್ ಗೆ ಬೀಳ್ಕೊಡುಗೆ, ನೂತನ ಡಿಸಿ ಮಾಲಪಾಟಿಗೆ ಸ್ವಾಗತ.

Source: SO News | By Laxmi Tanaya | Published on 14th January 2021, 7:15 AM | State News | Don't Miss |

ಬಳ್ಳಾರಿ :  ಜಿಲ್ಲೆಯಲ್ಲಿ ಅತ್ಯುತ್ತಮ ತಂಡದ ಜತೆಗೆ ಕೆಲಸ ನಿರ್ವಹಿಸಿದ ಹೆಮ್ಮೆ ನನಗೆ ಇದೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಹೇಳಿದರು.

ಜಿಲ್ಲಾಡಳಿತ ಮತ್ತು ಜಿಲ್ಲೆಯ ಸಾರ್ವಜನಿಕರಿಂದ ನಗರದ ಬಿಡಿಎಎ ಫುಟ್ಬಾಲ್ ಸಭಾಂಗಣದಲ್ಲಿ ಸೋಮವಾರ ಸಂಜೆ ಏರ್ಪಡಿಸಿದ್ದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಜಿಲ್ಲೆಗೆ ನೂತನವಾಗಿ ಆಗಮಿಸಿದ ಜಿಲ್ಲಾಧಿಕಾರಿ ಪವನ್ ಕುಮಾರ ಮಾಲಪಾಟಿ ಅವರ ಸ್ವಾಗತ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಬಳ್ಳಾರಿಯ ಮೇಲೆ ವಿಶೇಷ ಪ್ರೀತಿ ಹಾಗೂ ಹಳೆಯ ನಂಟಿರುವುದನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಅವರು ನನ್ನ ಸುಪುತ್ರ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಹುಟ್ಟಿದ್ದಾನೆ. ಈ ಜಿಲ್ಲೆಯಲ್ಲಿ ಮಾಡಿದ ಕೆಲಸಗಳು ಹಾಗೂ ಇಲ್ಲಿ ಸಲ್ಲಿಸಿದ ಸೇವೆಯನ್ನು ಸದಾ ಸ್ಮರಿಸುವುದಾಗಿ ಅವರು ತಿಳಿಸಿದರು.

ಕೋವಿಡ್ ಸಂದರ್ಭದಲ್ಲಿ ಅತ್ಯುತ್ತಮ ತಂಡದ ಜೊತೆಗೆ ಕೆಲಸ ನಿರ್ವಹಿಸಿದ ಹೆಮ್ಮೆ ನನಗಿದೆ. ಬಳ್ಳಾರಿಯಲ್ಲಿ ಕೆಲಸ ಮಾಡಿದ್ದು ಮನಸ್ಸಿಗೆ ತೃಪ್ತಿ ನೀಡಿದೆ;ಜಿಲ್ಲೆಯಲ್ಲಿ ಅತ್ಯಂತ ಸಂಯಮದಿಂದ ಕೆಲಸ ನಿರ್ವಹಿಸಲು ನಮ್ಮ ಕುಟುಂಬದ ಬೆಂಬಲ,ಸಹಕಾರವೇ ಕಾರಣ ಎಂದರು.

ಕೋವಿಡ್ ಸಂದರ್ಭದಲ್ಲಿ ಅದೆಷ್ಟೋ ಜನ ನಿರಾಶ್ರಿತರಿಗೆ, ಬಡವರಿಗೆ, ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ಪರಿಸ್ಥಿತಿಯಲ್ಲಿ ಬದುಕುತ್ತಿದ್ದವರಿಗೆ ಆಹಾರದ ಕಿಟ್‍ಗಳನ್ನು ವಿತರಿಸುವ ಮೂಲಕ ಅವರಿಗೆ ನೆರವು ನೀಡುವಲ್ಲಿ ಎನ್‍ಜಿಒಗಳು ನಿರ್ವಹಿಸಿದ ಕಾರ್ಯ ಅತ್ಯಂತ ಅನುಪಮವಾಗಿದೆ ಎಂದು ಹೇಳಿದ ನಿರ್ಗಮಿತ ಜಿಲ್ಲಾಧಿಕಾರಿ ನಕುಲ್ ಅವರು ಕೋವಿಡ್ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಎನ್‍ಜಿಒಗಳು ಆಹಾರ ಕಿಟ್ ಹಾಗೂ ಧಾನ್ಯಗಳ ಸರಬರಾಜು ವಿಷಯದಲ್ಲಿ ತೋರಿದ ಗಮನಾರ್ಹತೆಯನ್ನು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಗುರುತಿಸಿದ್ದು, ಇದೇ ಮಾದರಿಯನ್ನು ಬೇರೆಡೆ ಅನುಸರಿಸುವಂತೆ ಸೂಚಿಸಿರುವುದು ನಮ್ಮ ಜಿಲ್ಲೆಯ ಹೆಮ್ಮೆಯ ಸಂಗತಿ ಎಂದರು.

ತಾವು ಜಿಲ್ಲಾಧಿಕಾರಿಗಳಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದಿದ್ದ ವಿವಿಧ ಯೋಜನೆಗಳನ್ನು ಇದೇ ಸಂದರ್ಭದಲ್ಲಿ ನೆನಪಿಸಿಕೊಂಡು ನಿರ್ಗಮಿತ ಜಿಲ್ಲಾಧಿಕಾರಿ ನಕುಲ್ ಅವರು  ಕೊರೊನಾ ಮಹಾಮಾರಿ ಜನರನ್ನು ಕಾಡತೊಡಗಿದಾಗ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಅತ್ಯುತ್ತಮವಾಗಿ ಕೆಲಸ ಮಾಡಿವೆ ಎಂದರು.
ಬಳ್ಳಾರಿ ಜಿಲ್ಲೆಗೆ ನೂತನವಾಗಿ ಆಗಮಿಸಿದ ಪವನಕುಮಾರ್ ಮಾಲಪಾಟಿ ಕೂಡ ಒಬ್ಬ ಒಳ್ಳೆಯ ಅಧಿಕಾರಿಗಳು, ಉತ್ತಮವಾಗಿ ಕಾರ್ಯನಿರ್ವಹಿಸಲಿದ್ದಾರೆ. ಅವರಿಗೆ ನನಗೆ ನೀಡಿದಂತೆ ಅವರಿಗೂ ಉತ್ತಮ ಸಹಕಾರ ನೀಡಿ ಎಂದರು.

ಸನ್ಮಾನ ಸ್ವೀಕರಿಸಿದ ನೂತನ ಜಿಲ್ಲಾಧಿಕಾರಿ ಪವನ್ ಕುಮಾರ ಮಾಲಪಾಟಿ ಅವರು ಮಾತನಾಡಿ, ಬಳ್ಳಾರಿ ಜಿಲ್ಲೆಯಲ್ಲಿ ಎಲ್ಲವನ್ನು ಅತ್ಯುತ್ತಮವಾಗಿ ನಿರ್ವಹಿಸಿಕೊಂಡು ಹೋಗಿದ್ದ ಖ್ಯಾತಿ ಎಸ್.ಎಸ್.ನಕುಲ್ ಅವರದ್ದಾಗಿದೆ. ನಕುಲ್ ಅವರು ಇಡೀ ದೇಶದಲ್ಲಿರುವ ಕೆಲವೇ ಕೆಲವು ಮಾದರಿ ಅಧಿಕಾರಿಗಳಲ್ಲಿ ಅವರು ಒಬ್ಬರು. ಅವರು ಯಾವುದೇ ಇಲಾಖೆಗಳ ಅಧಿಕಾರಿಗಳ ಬಗ್ಗೆಯೂ ನೆಗೆಟಿವ್ ನನಗೆ ತಿಳಿಸಲಿಲ್ಲ. ಎಲ್ಲ ಇಲಾಖೆಗಳ ಅಧಿಕಾರಿಗಳು ಚೆನ್ನಾಗಿಯೇ ಕೆಲಸ ಮಾಡುತ್ತಿದ್ದಾರೆ ಅಂತ ತಿಳಿಸಿದ್ದಾರೆ ಎಂದರು.

ಎಸ್ಪಿ ಸೈದುಲು ಅಡಾವತ್, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೊಟ್, ಪ್ರೋಬೆಷನರಿ ಐಎಎಸ್ ಅಧಿಕಾರಿ ರಾಹುಲ್ ಸಂಕನೂರು, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ ಮಾತನಾಡಿದರು.

ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ನಿರ್ಗಮಿತ ಜಿಲ್ಲಾಧಿಕಾರಿಗಳೊಂದಿಗೆ ಕೆಲಸ ನಿರ್ವಹಿಸಿದ ಅನುಭವಗಳನ್ನು ಸಮಾರಂಭದಲ್ಲಿ ಹಂಚಿಕೊಂಡರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...