ಲಾಠಿಚಾರ್ಜ್‌ನಲ್ಲಿ ಗಾಯಗೊಂಡಿದ್ದ ರೈತ ಸಾವು

Source: VB news | By I.G. Bhatkali | Published on 30th August 2021, 2:13 PM | National News | Don't Miss |

ಚಂಡಿಗಡ: ಕರ್ನಾಲ್‌ನಲ್ಲಿ ಪೊಲೀಸರ ಲಾಠಿ ಪ್ರಹಾರದಿಂದ ಗಾಯಗೊಂಡಿದ್ದ ರೈತ ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಬಿಕೆಯು ಹಿರಿಯ ನಾಯಕ ಗುರ್ನಾವರ್ ಸಿಂಗ್ ಚಾದುನಿ ಹೇಳಿದ್ದಾರೆ. ಒಂದೂವರೆ ಎಕರೆ ಭೂಮಿ ಹೊಂದಿದ್ದ ರೈತ ಸುಶೀಲ್ ಕಾಜಲ್ ಕಳೆದ 9 ತಿಂಗಳಿಂದ ನಡೆಯುತ್ತಿರುವ ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕರ್ನಾಲ್ ಟೋಲ್ ಪ್ಲಾಝಾದಲ್ಲಿ ಶನಿವಾರ ನಡೆದ ಪ್ರತಿಭಟನೆ ಸಂದರ್ಭ ಪೊಲೀಸರ ಲಾಠಿ ಪ್ರಹಾರದಿಂದ ಅವರು ಗಂಭೀರ ಗಾಯಗೊಂಡಿದ್ದರು. ಚಿಂತಾ ಜನಕ ಸ್ಥಿತಿಯಲ್ಲಿದ್ದ ಅವರು ಅಂದೇ ರಾತ್ರಿ ಹೃದಯಾಘಾತದಿಂದ ಮೃತಪಟ್ಟರು. ರೈತ ಸಮುದಾಯ ಅವರ ಬಲಿದಾನವನ್ನು ಯಾವತ್ತೂ ನೆನಪಿಸಿಕೊಳ್ಳಲಿದೆ ಎಂದು ಚಾದುನಿ ರವಿವಾರ ಟೀಟ್ ಮಾಡಿದ್ದಾರೆ.

Read These Next

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ

ಹೈದರಾಬಾದ್: ಹೈದರಾಬಾದ್ ಆರ್ ಜಿ ಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಫೇಸ್ ಕ್ರೀಮ್ ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ...

ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಜಿಲ್ಲೆಯಾದ್ಯಂತ ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...