ಹರಿಯಾಣದಿಂದ ಹರಿದು ಬರುತ್ತಿದೆ ರೈತ ಜನ ಸಾಗರ

Source: SO News | Published on 31st January 2021, 12:09 PM | National News |

ನವದೆಹಲಿ : ಗಣರಾಜ್ಯೋತ್ಸವದ ಘಟನೆಯ ಬಳಿಕ ರಾತ್ರೋರಾತ್ರಿ ದೆಹಲಿ ಪೊಲೀಸರು ಟಿಕ್ರಿ ಮತ್ತು ಗಾಝಿಪುರ ಗಡಿಯಲ್ಲಿರುವ ರೈತರನ್ನು ಒಕ್ಕಲೆಬ್ಬಿಸುವ ಯತ್ನ ಮಾಡಿದರು. ಮಾಧ್ಯಮಗಳು ರೈತರು ಮನೆಗೆ ಮರಳುತ್ತಿದ್ದಾರೆ ಎಂದು ಸುದ್ದಿ ಬಿತ್ತರಿಸಿದವು.  ಈ ಬೆಳವಣಿಗೆಗಳಿಂದ ನೊಂದ ನೆರೆಯ ರಾಜ್ಯದ ರೈತರು ಇಂದು ದೆಹಲಿಯತ್ತ ಸಾಗರೋಪಾದಿಯಲ್ಲಿ ಸಾಗಿ ಬರುತ್ತಿದ್ದಾರೆ. 

ಸರ್ಕಾರ ರೈತ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಅದಕ್ಕಾಗಿ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ಇದಕ್ಕೆ ಪ್ರತ್ಯುತ್ತರವಾಗಿ ರೈತರು ದೆಹಲಿಗೆ ತಂಡ ತಂಡವಾಗಿ ಆಗಮಿಸುತ್ತಿದ್ದು, ಗಡಿಯಲ್ಲಿರುವ ರೈತರು ಪುಷ್ಪವೃಷ್ಟಿ ಮಾಡಿ ಸ್ವಾಗತಿಸುತ್ತಿದ್ದಾರೆ.

ರಾಷ್ಟ್ರಧ್ವಜ, ಏಕ್ತಾ ಮೋರ್ಚಾದ ಧ್ವಜ ಹಾಗೂ ಹಸಿರು ಧ್ವಜವನ್ನು ಹಿಡಿದ ಅಸಂಖ್ಯ ರೈತರು ವಿವಿಧ ವಾಹನಗಳಲ್ಲಿ ಗಡಿಗಳತ್ತ ಆಗಮಿಸುತ್ತಿದ್ದು, ನಿನ್ನೆಯ ಘಟನೆಯ ಬಳಿಕ ಹೋರಾಟವನ್ನು ಮತ್ತಷ್ಟು ತೀವ್ರವಾಗಿ ರೂಪಿಸುವುದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜಮೆಯಾಗುತ್ತಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...