ಸಮಗ್ರ ಕೃಷಿ ಅಭಿಯಾನವು ರೈತರಲ್ಲಿ ಆತ್ಮವಿಶ್ವಾಸ ತುಂಬಲಿ : ಜಿಲ್ಲಾಧಿಕಾರಿ ದೀಪಾ ಚೋಳನ್

Source: so news | By MV Bhatkal | Published on 21st June 2019, 12:07 AM | State News | Don't Miss |

ಧಾರವಾಡ: ಬರಗಾಲ, ಕೃಷಿ ಚಟುವಟಿಕೆಗಳಿಗೆ ನೀರಿನ ಕೊರತೆ, ಹವಾಮಾನ ವೈಪರಿತ್ಯದಿಂದಾಗಿ ಕೃಷಿಕರು ಸಂಕಷ್ಟದಲ್ಲಿದ್ದಾರೆ. ಸಮಗ್ರ ಕೃಷಿ ಅಭಿಯಾನದ ಮೂಲಕ ಅವರಲ್ಲಿ ಇಲಾಖೆ ಯೋಜನೆಗಳ ಮೂಲಕ ಕೃಷಿಕರೊಂದಿಗೆ ನಾವು ಇದ್ದೆವೆ ಎಂಬ ವಿಶ್ವಾಸ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ “ಸಮಗ್ರ ಕೃಷಿ ಅಭಿಯಾನ”ವನ್ನು ಜಿಲ್ಲೆಯಲ್ಲಿ ಆಯೋಜಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಕೃಷಿಯನ್ನು ಹೆಚ್ಚು ಲಾಭದಾಯಕವಾಗಿ ಮಾಡಲು ಮತ್ತು ಹೆಚ್ಚುತ್ತಿರುವ ಜನಸಂಖ್ಯೆಗೆ ಆಹಾರ ಭದ್ರತೆ ಒದಗಿಸಲು ಲಭ್ಯವಿರುವ ಸಾಗುವಳಿ ಜಮೀನಿನಲ್ಲಿ ಗರಿಷ್ಟ ಕೃಷಿ ಉತ್ಪಾದನೆಯನ್ನು ಪಡೆಯುವುದು ಅವಶ್ಯವಾಗಿದೆ. ಇದಕ್ಕಾಗಿ ಕೃಷಿ ಮತ್ತು ತೋಟಗಾರಿಕೆಯೊಂದಿಗೆ ಪೂರಕ ಉಪಕಸುಬುಗಳಾದ ಪಶುಸಂಗೋಪನೆ, ರೇಷ್ಮೆಕೃಷಿ, ಮೀನುಗಾರಿಕೆ ಮುಂತಾದ ಚಟುವಟಿಕೆಗಳನ್ನು ರೈತರು ಅಳವಡಿಸಿಕೊಳ್ಳುವುದು ಅನಿವಾರ್ಯವಾಗಿದೆ.
ಕೃಷಿ ವಲಯದ ಪ್ರಸ್ತುತ ಪರಿಸ್ಥಿತಿಯನ್ನು ಮನಗಂಡು ಉತ್ಪಾದಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ತಂತ್ರಜ್ಞಾನವನ್ನು ತಲುಪಿಸಲು, ಏಕಗವಾಕ್ಷಿ ವಿಸ್ತರಣಾ ಪದ್ಧತಿಯಲ್ಲಿ ಸಮಗ್ರ ಕೃಷಿ ಮಾಹಿತಿಯನ್ನು ರೈತರಿಗೆ ತಲುಪಿಸುವುದಕ್ಕಾಗಿ ವಿವಿಧ ಅಭಿವೃದ್ಧಿ ಇಲಾಖೆಗಳ ಸಮನ್ವಯದೊಂದಿಗೆ ಸಮೂಹ ಜಾಗೃತಿ ಕಾರ್ಯಕ್ರಮವಾಗಿ ಸಮಗ್ರ ಕೃಷಿ ಅಭಿಯಾನ ರೂಪಿಸಲಾಗಿದೆ.
ಹೋಬಳಿ ಮಟ್ಟದ ಅಧಿಕಾರಗಳೊಂದಿಗೆ ಕೃಷಿ, ತೋಟಗಾರಿಕಾ ತಜ್ಞರು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಗ್ರಾಮಮಟ್ಟದಲ್ಲಿ ತಮ್ಮ ಇಲಾಖೆ ಯೋಜನೆಗಳ ಕುರಿತು ಕೃಷಿಕರಿಗೆ ಮಾಹಿತಿ ನೀಡಿ, ಜನಜಾಗೃತಿ ಮೂಡಿಸಲಿದ್ದಾರೆ. ಗ್ರಾಮ ಪಂಚಾಯತಗಳಲ್ಲಿ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರಿರೊಂದಿಗೆ ಕೃಷಿ ಚಟುವಟಿಕೆಗಳ ಕುರಿತು ಅಭಿಯಾನದಲ್ಲಿ ರೈತ ಸಂವಾದಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕೃಷಿ ಅಭಿಯಾನದಲ್ಲಿ ರೈತರಿಗೆ ಪ್ರಧಾನಮಂತ್ರಿ ಕೃಷಿ ಸಮ್ಮಾನ ಯೋಜನೆ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮೆ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್.ರುದ್ರೆÃಶಪ್ಪ ಅವರು ಪ್ರಾಸ್ತಾವಿಕವಾಗಿ ಮತನಾಡಿ, ಕೃಷಿ ಮತ್ತು ಕೃಷಿಗೆ ಪೂರಕವಾದ ಚಟುವಟಿಕೆಗಳನ್ನು ರೈತರು ಅಳವಡಿಸಿಕೊಳ್ಳಲು ಅಗತ್ಯ ಮಾಹಿತಿ ಮತ್ತು ಅವರನ್ನು ಕೃಷಿ ಚಟುವಟಿಕೆಗಳಿಗಾಗಿ ಪ್ರೊÃತ್ಸಾಹಿಸುವುದು ಸಮಗ್ರ ಕೃಷಿ ಅಭಿಯಾನದ ಮುಖ್ಯ ಉದ್ದೆÃಶವಾಗಿದೆ.
ಸಮಗ್ರ ಕೃಷಿ ಮಾಹಿತಿ ಘಟಕ, ಕೃಷಿ ವಸ್ತು ಪ್ರದರ್ಶನ ಮತ್ತು ರೈತ ಸಂವಾದ ಮೂಲಕ ಸಮಗ್ರ ಕೃಷಿ ಅಭಿಯಾನ ನಡೆಸಲಾಗುವುದು. ಜಿಲ್ಲೆಯ ಐದು ತಾಲೂಕಿನ ೧೪ ಹೊಬಳಿಗಳಲ್ಲಿ ಪ್ರತಿ ತಾಲೂಕಿಗೆ ಎರಡು ಪ್ರಚಾರವಾಹನ ಹಾಗೂ ಪ್ರತ್ಯೆÃಕವಾಗಿ ಅಧಿಕಾರಿಗಳ ತಂಡ ರಚಿಸಿ, ಕೃಷಿ ಅಭಿಯಾನ ಯಶಸ್ವಿಗೊಳಿಸಲು ಯೋಜಿಸಲಾಗಿದೆ.
ಆಯಾ ಹೋಬಳಿಯ ಗ್ರಾಮಗಳಲ್ಲಿ ಜನಜಾಗೃತಿ, ರೈತ ಸಂವಾದ ಮುಗಿದ ಬಳಿಕ ಹೊಬಳಿ ಮಟ್ಟದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸವಲತ್ತು ವಿತರಣೆ, ತಜ್ಞರಿಂದ ಉಪನ್ಯಾಸ, ಪ್ರಾತ್ಯಕ್ಷಿಕೆ ಹಾಗೂ ರೈತ ಸಂವಾದಗಳನ್ನು ಆಯೋಜಿಸಲಾಗುತ್ತದೆ ಎಂದು ಜಂಟಿ ನಿರ್ದೇಶಕ ಟಿ.ಎಸ್.ರುದ್ರೆÃಶಪ್ಪ ತಿಳಿಸಿದರು.
ಸಭೆ ಮುಗಿದ ನಂತರ ಜಿಲ್ಲಾಧಿಕಾರಿಗಳು ಸಮಗ್ರ ಕೃಷಿ ಅಭಿಯಾನದಲ್ಲಿ ಸಾರ್ವಜನಿಕರಿಗೆ ವಿತರಿಸಲು ಕೃಷಿ ಇಲಾಖೆಯಿಂದ ರೂಪಿಸಿರುವ ಕರಪತ್ರ, ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ನರ್ಬಾಡ್ ಜಿಲ್ಲಾ ವ್ಯವಸ್ಥಾಪಕಿ ಶೀಲಾ ಬಂಡಾರಕರ, ಲೀಡ ಬ್ಯಾಂಕನ ಪ್ರಿÃಯಾಂಕಾ ದೇಶಪಾಂಡೆ, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಡಾ.ರಾಮಚಂದ್ರ.ಕೆ.ಮಡಿವಾಳ, ಕೃಷಿ ವಿಜ್ಞಾನ ಕೇಂದ್ರದ ಡಾ.ಎಂ.ಗೋಪಾಲ ಸೇರಿದಂತೆ ಕೃಷಿ, ತೋಟಗಾರಿಕೆ, ರೇಷ್ಮೆ ಕೃಷಿ, ಪಶುಸಂಗೋಪನೆ, ಮಿನುಗಾರಿಕೆ, ಸಹಕಾರ, ಕೃಷಿಮಾರುಕಟ್ಟೆ, ಅರಣ್ಯ ಇಲಾಖೆ, ವಿಮಾ ಕಂಪನಿಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಕೃಷಿ ಅಭಿಯಾನ ಮತ್ತು ಫಸಲ್ ಬಿಮಾ ಯೋಜನೆ ಪ್ರಚಾರ ವಾಹನಗಳಿಗೆ ಚಾಲನೆ: ಸಭೆ ಪೂರ್ವದಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಜಿಲ್ಲೆಯಲ್ಲಿ ಕೃಷಿ ಮಾಹಿತಿ ತಲುಪಿಸಲು ಸಂಚರಿಸಲಿರುವ ಪ್ರಚಾರ ವಾಹನಗಳಿಗೆ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಮುಂಗಾರು ಹಂಗಾಮಿಗೆ ರೈತರು ವಿಮೆ ಮಾಡಿಸುವ ಕುರಿತು ಮಾಹಿತಿ ನೀಡುವ ಎಲ್.ಇ.ಡಿ ವ್ಯಾನ್‌ಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ವಿಮಾ ಕಂಪನಿ ಪ್ರತಿನಿಧಿಗಳು ಮತ್ತು ರೈತ ಪ್ರತಿನಿಧಿಗಳು ಉಪಸ್ಥಿತರಿದರು

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...