ಬೆಂಗಳೂರು: ಸಂಘಟಿತ ಹೋರಾಟದಿಂದಷ್ಟೇ ರೈತರಿಗೆ ಜಯ: ಟಿಕಾಯತೆ, ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ, ಮಾ.26ಕ್ಕೆ ಕರ್ನಾಟಕ ಬಂದ್ ಘೋಷಣೆ

Source: VB | By S O News | Published on 24th March 2021, 6:34 PM | State News | National News |

ಬೆಂಗಳೂರು: ಕೇಂದ್ರ ಸರಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಾ.26 ರಂದು 'ಕರ್ನಾಟಕ ಬಂದ್' ಚಳವಳಿಗೆ ಕರೆ ನೀಡಲಾ ಗಿದ್ದು, ನೂರಾರು ಸಂಘಟನೆಗಳು ಇದಕ್ಕೆ ಸಮ್ಮತಿ ನೀಡಿವೆ ಎಂದು ಸಂಯುಕ್ತಹೋರಾಟ ಕರ್ನಾಟಕ ತಿಳಿಸಿದೆ.

ಸೋಮವಾರ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು, ಬಳಿಕ ಮೈದಾನದಲ್ಲಿ ಜಮಾವಣೆಗೊಂಡು ಸಮಾವೇಶ ನಡೆಸಿದರು. ಈ ವೇಳೆ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರಲ್ಲಿ ಪ್ರಮುಖರಾದ ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ರೈತ ಮುಖಂಡರು ಕರ್ನಾಟಕ ಬಂದ್ ಘೋಷಿಸಿ, ಭಿತ್ತಿಪತ್ರ ಪ್ರದರ್ಶಿಸಿದರು.

ಅನಂತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಕೇಶ್ ಟಿಕಾಯತ್, ರೈತ ಸಂಕುಲಕ್ಕೆ

ಮುಖ್ಯಮಂತ್ರಿಯೊಂದಿಗೆ ಚರ್ಚಿಸುತ್ತೇನೆ: ಬಿ.ಸಿ.ಪಾಟೀಲ್

ಸಮಾವೇಶದಲ್ಲಿ ಪಾಲ್ಗೊಂಡ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು ಮನವಿ ಪತ್ರ ಸಲ್ಲಿಸಿದರು. ಬಳಿಕ ಪ್ರತಿಕ್ರಿಯಿಸಿದ ಸಚಿವರು, ರೈತರ ಯಾವುದೇ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರಕಾರ ಬದ್ಧವಾಗಿದ್ದು, ಈ ಕುರಿತು ರೈತರೊಂದಿಗೆ ಸಭೆ ನಡೆಸುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಭರವಸೆ ನೀಡಿದರು.

ಮಾರಕವಾದ ಕೃಷಿ ಕಾಯ್ದೆಗಳ ವಿರುದ್ಧ ಎಲ್ಲ ರೈತರು ಸಂಘಟಿತವಾಗಿ ಹೋರಾಟ ಮಾಡಿದರೆ ಯಶಸ್ಸು ಸಿಗುತ್ತದೆ. ಎಂದು ಅದಕ್ಕಾಗಿ ಎಲ್ಲ ರೈತ ಮುಖಂಡರೂ ಭಿನ್ನಾಭಿಪ್ರಾಯ ಮರೆತು ಒಂದೇ ವೇದಿಕೆಯಡಿ ಹೋರಾಟ ಆರಂಭಿಸಲು ನಿರ್ಧರಿಸಿದ್ದು, ಅದರಂತೆ ಹೋರಾಟದ ಹಾದಿ ಇಡೀ ದೇಶ ತಲುಪಿದೆ ಎಂದರು. ಕೇಂದ್ರ ಸರಕಾರ ಎಲ್ಲ ಕ್ಷೇತ್ರದಲ್ಲೂ ನೂತನ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಬಡವರನ್ನು ರೈತರನ್ನು  ಶೋಷಿಸುತ್ತಿದೆ. ಕೇಂದ್ರ ಸರಕಾರದ ಎಲ್ಲ ಕಾನೂನು ಕಾಯ್ದೆಗಳು ಉಳ್ಳವರ ಹಾಗೂ ಬಂಡವಾಳ ಶಾಹಿಗಳ ಪರವಾಗಿಯೇ ಇವೆ. ಇದೇ ಕಾರಣಕ್ಕೆ ಕಳೆದ ನಾಲ್ಕು ತಿಂಗಳಿಂದ ರೈತರು ದಿಲ್ಲಿಯಲ್ಲಿ ಹೋರಾಟ ನಡೆಸುತ್ತಿ ದ್ದಾರೆ ಎಂದರು. ಯುವಜನತೆಗೆ ಸತ್ಯ ಏನೆಂಬುದು ಈಗ ಅರ್ಥವಾಗುತ್ತಿದೆ. ಹೀಗಾಗಿ ಯುವಜನ ರೊಚ್ಚಿಗೆದ್ದು ತಾವೇ ಆಯ್ಕೆ ಮಾಡಿದ ಕೇಂದ್ರ ಸರಕಾರವನ್ನು ಹಿಂಪಡೆಯುವುದರ ಒಳಗೆ ಕೇಂದ್ರ ಸರಕಾರವೇ ಎಚ್ಚೆತ್ತು ಈ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಲಿ ಎಂದು ಟಿಕಾಯತ್ ಆಗ್ರಹಿಸಿದರು.

ವಿಧಾನಸೌಧದಮುಂದೆಮಾರಾಟ: ರೈತರುಎಪಿಎಂಸಿ ಮಾರುಕಟ್ಟೆ ಮಾತ್ರವಲ್ಲದೆ, ಹೊರಗಡೆಯೂ ತರಕಾರಿ ಇನ್ನಿತರ ವಸ್ತುಗಳನ್ನು ಮಾರಾಟ ಮಾಡಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಾರೆ. ಹಾಗಾಗಿ, ಕರ್ನಾಟಕದ ರೈತರು ನಾಳೆಯಿಂದಲೇ ವಿಧಾನಸೌಧದ ಮುಂದೆ ತರಕಾರಿ ಮಾರಾಟ ಮಾಡಿ, ಯಾರಾದರೂ ಪ್ರಶ್ನಿಸಿದರೆ ಮೋದಿ ಹೇಳಿದ್ದಾರೆಂದು ಉತ್ತರಿಸಿ ಎಂದು ನುಡಿದರು.

ರೈತರಿಗೆ ಜಯ

ರೈತ ನಾಯಕ ಯುದ್ಧವೀರ್ ಸಿಂಗ್ ಮಾತನಾಡಿ, ಕರ್ನಾಟಕದಲ್ಲಿ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಆದರೆ, ಈ ಹೆಣ್ಣು ಮಗಳು ಮಾಡಿದ ತಪ್ಪಾದರೂ ಏನು? ಸರಕಾರ, ಸರ್ವಾಧಿಕಾರಿಗಳ ವಿರುದ್ಧ ಧ್ವನಿಗೂಡಿಸಿದರೆ ಹತ್ಯೆಗೈಯುವ ಹಂತಕ್ಕೆ ಹೋಗುತ್ತಾರಾ? ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟೀಕೆಗಳೆಂದರೆ ಆಗುವುದಿಲ್ಲ. ಹೀಗಾಗಿಯೇ ಬೆಂಗಳೂರಿನ ದಿಶಾ ರವಿ ಅನ್ನು ಬಂಧಿಸಿದರು ಎಂದು ವಾಗ್ದಾಳಿ ನಡೆಸಿದರು.

ಚಿಂತಕ, ನಟ ಚೇತನ್, ರೈತ ಮುಖಂಡ ಬಡಗಲಪುರ ನಾಗೇಂದ್ರ, ರೈತ ಸಂಘದ ನಾಯಕಿ ಚುಕ್ಕಿ ನಂಜುಂಡಸ್ವಾಮಿ ಮೊದಲಾದವರು ಮಾತನಾಡಿದರು. ಸಮಾವೇಶದಲ್ಲಿ ರೈತರ ಮುಖಂಡರಾದ ಡಾ.ದರ್ಶನ್ ಪಾಲ್, ಕೋಡಿಹಳ್ಳಿ ಚಂದ್ರಶೇಖರ್, ಸಾಮಾಜಿಕ ಚಿಂತಕ ಎಸ್.ಆರ್. ಹಿರೇಮಠ, ಹೋರಾಟಗಾರ್ತಿ ವರಲಕ್ಷ್ಮೀ, ಚಾಮರಸ ಮಾಲಿ ಪಾಟೀಲ್, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ, ಚಿಂತಕ ನೂರ್ ಶ್ರೀಧರ್,  ಡಾ.ಎಚ್.ವಿ.ವಾಸು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...