ತಂದೆ, ತಾಯಿ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು; ನ್ಯಾಯಾಧೀಶರಾದ : ಎಸ್. ಎಚ್. ಪುಷ್ಪಾಂಜಲಿ ದೇವಿ

Source: SO News | By Laxmi Tanaya | Published on 21st December 2023, 10:30 PM | State News | Don't Miss |

ಬಳ್ಳಾರಿ : 21ನೇ ಶತಮಾನಕ್ಕೆ ಕಾಲಿಟ್ಟರೂ ಕೂಡ ಇನ್ನೂ ಬಾಲ್ಯ ವಿವಾಹ ಮತ್ತು ದೇವದಾಸಿ ಪದ್ಧತಿಯಿಂದ ಹೆಣ್ಣು ಮಕ್ಕಳು ನೋವನ್ನು ಅನುಭವಿಸುತ್ತಿದ್ದಾರೆ. ಇದಕ್ಕೆ ಮೂಲ ಕಾರಣ ಶಿಕ್ಷಣ, ತಂದೆ ತಾಯಿ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು. ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಕಾನೂನು ಜಾರಿಗೆ ಆದರೂ ಇನ್ನೂ ಕೂಡ ಬಾಲ್ಯವಿವಾಹಗಳು ನಡೆಯುತ್ತಿರುವುದು ತುಂಬಾ ಬೇಸರದ ಸಂಗತಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎಚ್.ಪುಷ್ಪಾಂಜಲಿ ದೇವಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ರೀಡ್ಸ್ ಸಂಸ್ಥೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಸಿಎಸಿಎಲ್ ಕರ್ನಾಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎ ಫುಟ್‍ಬಾಲ್ ಮೈದಾನ ವೇದಿಕೆ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಾಲ್ಯವಿವಾಹ ಮತ್ತು ದೇವದಾಸಿ ಪದ್ಧತಿಯ ತಡೆಗಟ್ಟುವಲ್ಲಿನ ಸವಾಲುಗಳು ಮತ್ತು ಪರಿಹಾರ ಕುರಿತ ಎರಡನೆ ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

2016 ಕರ್ನಾಟಕ ತಿದ್ದುಪಡಿ ಕಾಯ್ದೆ ಪ್ರಕಾರ ಬಾಲ್ಯವಿವಾಹ ಮಾಡಿದರೆ ಹೆಣ್ಣು  ಮಕ್ಕಳಿಗೂ ಶಿಕ್ಷೆ ಇದೆ. ಕನಿಷ್ಠ ಒಂದು ವರ್ಷ ಜೈಲು ಶಿಕ್ಷೆ. ಸಂಬಂಧಪಟ್ಟ ಪೊಲೀಸ್  ಇಲಾಖೆ ಅಧಿಕಾರಿಗಳು  ಸುಮೋಟೋ ಕೇಸ್ ದಾಖಲಿಸಿಕೊಳ್ಳಬಹುದು ಎಂದರು.

2018  ರಿಂದ ಈಚೆ ಆದ ಪ್ರತಿಯೊಂದು ಬಾಲ್ಯವಿವಾಹ ಅನೂರ್ಜಿತ, ಅಸಿಂಧು, ಸರ್ಕಾರ ಮತ್ತು ಸ್ವಯಂ ಸೇವಾ ಸಂಸ್ಥೆಗಳು ಸಮುದಾಯದ ಜನರಿಗೆ, ಮಕ್ಕಳಿಗೆ, ಯುವ ಜನರಿಗೆ, ಹಿರಿಯರಿಗೆ ಅರಿವು ಮೂಡಿಸಿ ಈ ಪದ್ಧತಿಗಳನ್ನು ತಡೆಗಟ್ಟಲು  ಸಹಕರಿಸಬೇಕು ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜೇಶ್ ಎನ್.ಹೊಸಮನಿ ಅವರು ಮಾತನಾಡಿ, ಬಾಲ್ಯ ವಿವಾಹದಿಂದ ಆಗುವ ತಾಯಿ ಮರಣ, ಶಿಶು ಮರಣ, ರಕ್ತ ಹೀನತೆ, ಅಪೌಷ್ಟಿಕತೆ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ದೇವದಾಸಿ ಸಮರ್ಪಣಾ ನಿಷೇಧ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಕುರಿತು ಮಾಜಿ ದೇವದಾಸಿಯರಿಗೆ ಮತ್ತು ಅವರ ಮಕ್ಕಳಿಗೆ ಪುನರ್ವಸತಿ ಯೋಜನೆಗಳ ಬಗ್ಗೆ ಮಾಹಿತಿ ಸಹ ನೀಡಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು ಮಾತನಾಡಿ, ಸರಕಾರ ಮತ್ತು ಜನರ ಮಧ್ಯೆ ಸೇತುವೆಯಾಗಿ ಸ್ವಯಂಸೇವಾ ಸಂಸ್ಥೆಗಳು ಕೆಲಸ ಮಾಡುವುದು ಶ್ಲಾಘನೀಯ, ಸತತ ಪ್ರಯತ್ನದಿಂದ ಬಾಲ್ಯ ವಿವಾಹ ಮತ್ತು ದೇವದಾಸಿ ಪದ್ಧತಿಯನ್ನು ತಡೆಗಟ್ಟಬಹುದು ಎಂದರು.

ಈ ಸಂದರ್ಭದಲ್ಲಿ ರೀಡ್ಸ್ ಸಂಸ್ಥೆಯ ನಿರ್ದೇಶಕರು ಹನುಮಂತರೆಡ್ಡಿ, ರೀಡ್ಸ್ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕರು ಸಿ.ತಿಪ್ಪೇಶಪ್ಪ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿಕಟ ಪೂರ್ವ ಸದಸ್ಯ ಎಚ್.ಸಿ.ರಾಘವೇಂದ್ರ, ಬಾಲಕಾರ್ಮಿಕ ಯೋಜನೆ ಯೋಜನಾ ನಿರ್ದೇಶಕರು ಮೌನೇಶ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ವಿಜಯಕ್ಷ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ವಿಜಯ್ ಕುಮಾರ್ ಹಾಗೂ ರೀಡ್ಸ್ ಸಂಸ್ಥೆಯ ಸಿಬ್ಬಂದಿ ವರ್ಗದವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...