ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ

Source: so news | By MV Bhatkal | Published on 17th June 2019, 5:49 PM | Coastal News | Don't Miss |

ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದಾದ್ಯಂತ ಪ್ರೌಢಶಾಲೆಗಳಲ್ಲಿ “ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆ ಕಾರ್ಯಕ್ರಮ” ಏರ್ಪಡಿಸುವ ಕುರಿತು ಯೋಜನೆಯನ್ನು ಹಮ್ಮಿಕೊಂಡಿದೆ. 
ಈ ಯೋಜನೆಯಡಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢ ಶಾಲೆಗಳು ತಮ್ಮ ತಮ್ಮ ಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆಯ ಕಾರ್ಯಕ್ರಮ ಏರ್ಪಡಿಸಬಹುದಾಗಿದೆ.
ಈ ಕಾರ್ಯಕ್ರಮವನ್ನು ನಡೆಸುವ ಸಲುವಾಗಿ ಪ್ರಾಧಿಕಾರವು ರೂ. 5 ಸಾವಿರ ಗರಿಷ್ಟ ಮಿತಿಯೊಳಗೆ ವೆಚ್ಚವನ್ನು ಭರಿಸುವುದು. ಆಯಾ ಶಾಲಾ ಮುಖ್ಯಸ್ಥರು ತಮ್ಮ ಶಾಲಾ ವಿವರಗಳೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಬಹುದಾದ ದಿನಾಂಕ, ಆಹ್ವಾನಿಸುವ ಇಬ್ಬರು ತೀರ್ಪುಗಾರರ ಹೆಸರು ಇತ್ಯಾದಿ ವಿವರಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿರುತ್ತದೆ. ಕಾರ್ಯಕ್ರಮದ ಮುನ್ನ ಪ್ರಾಧಿಕಾರದಿಂದ ಪೂರ್ವಾನುಮೋದನೆ ಪಡೆಯುವುದು ಕಡ್ಡಾಯ.
ಅರ್ಜಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002, ದೂರವಾಣಿ ಸಂಖ್ಯೆ 080-22484516, 22107704 ಇವರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಕಚೇರಿಯನ್ನು ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‍ಸೈಟ್ www.kannadapustakapradhikara.com ನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...