ಎಫ್.ಡಿ.ಎ. ಎಸ್.ಡಿ.ಎ. ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತ ಕಾರ್ಯಾಗಾರ ಯಶಸ್ವಿ

Source: sonews | By Staff Correspondent | Published on 24th February 2020, 5:43 PM | Coastal News | Don't Miss |

ಭಟ್ಕಳ: ಸ್ಪಂದನ ಹಾಗೂ ಅಚೀವರ್ಸ ಕೋಚಿಂಗ್ ಅಕಾಡೆಮಿ ಶಿವಮೊಗ್ಗ ಇವರ ಸಹಯೋಗದಲ್ಲಿ ಎಫ್.ಡಿ.ಎ. ಎಸ್.ಡಿ.ಎ.ಕಾರ್ಯಾಗಾರವು ಅತ್ಯಂತ ಯಶಸ್ವಿಯಾಗಿ ನೆರವೇರಿತು. 

ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಗುರುಮಠದ ಅಧ್ಯಕ್ಷ ಹಾಗೂ ಭಟ್ಕಳ ಅರ್ಬನ್ ಬ್ಯಾಂಕ್‍ನ ಉಪಾಧ್ಯಕ್ಷ ಎಂ.ಆರ್.ನಾಯ್ಕ, ಉದ್ಯೋಗಾಕಾಂಕ್ಷಿಗಳಿಗೆ ಆಯೋಜಿಸಲಾದ ಕಾರ್ಯಾಗಾರದ ಉಪಯೋಗವನ್ನು ಎಲ್ಲ ಪರೀಕ್ಷಾರ್ಥಿಗಳು ಸಮರ್ಪಕವಾಗಿ ಬಳಸಿಕೊಂಡು ಪರಿಶ್ರಮ ಮತ್ತು ಶೃದ್ಧೆಯಿಂದ ಪರೀಕ್ಷೆಗೆ ಸೂಕ್ತ ತಯಾರಿ ಮಾಡಿಕೊಂಡಲ್ಲಿ ಉತ್ತಮ ಅಂಕ ಗಳಿಸಿ ಉದ್ಯೋಗ ಪಡೆದುಕೊಳ್ಳಲು ಸಾಧ್ಯ. ಅದಕ್ಕಾಗಿ ಸೂಕ್ತ ಮಾರ್ಗದರ್ಶನ ಹಾಗೂ ತರಬೇತಿ ಕಾರ್ಯಾಗಾರ ಆಯೋಜಿಸಿದ ಸ್ಪಂದನ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ನುಡಿದರು. 

ಅಧ್ಯಕ್ಷತೆ ವಹಿಸಿದ್ದ ಸ್ಪಂದನ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ನಾಯ್ಕ ಮಾತನಾಡಿ ಸಾಮಾಜಿಕ ಮತ್ತು ಶೈಕ್ಷಣಿಕ ಸೇವಾ ಕಾರ್ಯಗಳನ್ನು ಮಾಡುವ ಸದುದ್ದೇಶದಿಂದ ಸ್ಪಂದನ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಶಿಕ್ಷಣ ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಮಾರ್ಗದರ್ಶನ, ತರಬೇತಿ ಒದಗಿಸಿ ಉದ್ಯೋಗವನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಶಿವಮೊಗ್ಗಾದ ಅಚೀವರ್ಸ ಕೋಚಿಂಗ್ ಅಕಾಡೆಮಿಯ ಸಹಯೋಗದಲ್ಲಿ ಈ ಕಾರ್ಯಗಾರವನ್ನು ಆಯೋಜಿಸಲಾಗಿದೆ.  ಆಸಕ್ತ ಉದ್ಯೋಗಾಕಾಂಕ್ಷಿಗಳಿಗೆ ಸಂಸ್ಥೆಯ ಮೂಲಕ ಸಾಧ್ಯವಾಗುವ ಎಲ್ಲ ಸಹಕಾರವನ್ನು ಒದಗಿಸುವ ಪ್ರಯತ್ನವನ್ನು ಮಾಡುತ್ತೇವೆ. ಕಾರ್ಯಾಗಾರದ ಸದುಪಯೊಗ ಪಡೆದುಕೊಂಡು ಉದ್ಯೋಗ ಪಡೆದುಕೊಂಡು ಕುಟುಂಬಕ್ಕೆ ಆಧಾರವಾಗಬೇಕು ಮಾತ್ರವಲ್ಲ ತಾವು ಉದ್ಯೋಗ ಪಡೆದ ನಂತರ ಸಮಾಜದಲ್ಲಿನ ಅಸಹಾಯಕರಿಗೆ ನಮ್ಮಿಂದಾದ ಸಹಾಯ ಹಸ್ತವನ್ನು ನೀಡುವ ಮೂಲಕ ಸಮಾಜದೆಡೆಗಿನ ನಮ್ಮ ಕರ್ತವ್ಯವನ್ನು ನಿರ್ವಹಿಸಬೇಕೆಂದು ಕರೆ ನೀಡಿದರು. 

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಿರಾಲಿ ಸಾರದಹೊಳೆಯ ಹಳಕೋಟೆ ಹನುಮಂತ ದೇವಾಲಯದ ಅಧ್ಯಕ್ಷ ಸುಬ್ಯಾಯ ನಾಯ್ಕ ಸ್ಪಂದನ ಸಂಸ್ಥೆಯ ಲಾಂಛನ ಬಿಡುಗಡೆ ಗೊಳಿಸಿದರು. 

ವೇದಿಕೆಯಲ್ಲಿ ಉಪಸ್ಥಿತರಿದ್ದ ಗುರುಸುಧೀಂದ್ರ ಕಾಲೇಜಿನ ಪ್ರಾಂಶುಪಾಲ ಶ್ರೀನಾಥ್ ಪೈ, ವೆಂಕಟೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೆ.ಆರ್.ನಾಯ್ಕ ಮಾತನಾಡಿದರು. 

ಇದೇ ಸಂದರ್ಭದಲ್ಲಿ ಅರ್ಬನ್ ಬ್ಯಾಂಕ್ ನ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಂ.ಆರ್.ನಾಯ್ಕ, ಅಚೀವರ್ಸ ಕೋಚಿಂಗ್ ಅಕಾಡೆಮಿಯ ಮುಖ್ಯಸ್ಥರಾದ ಶಿವಕುಮಾರ ಹಾಗೂ ವಿನಯ್ ಇವರನ್ನು ಸನ್ಮಾನಿಸಲಾಯಿತು. 

ಸ್ಪಂಧನ ಸಂಸ್ಥೆಯ ಸದಸ್ಯ ಗಂಗಾಧರ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಪಾಂಡುರಂಗ ನಾಯ್ಕ ಸ್ವಾಗತಿಸಿದರು. ನೇಹಾ ಮತ್ತು ಅನನ್ಯ ಪ್ರಾರ್ಥಿಸಿದರು.ಪರಮೇಶ್ವರ ನಾಯ್ಕ ನಿರ್ವಹಿಸಿದರೆ ಮಹೇಶ ನಾಯ್ಕ ವಂದಿಸಿದರು. 

ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಭವಾನಿಶಂಕರ ನಾಯ್ಕ, ಸದಸ್ಯರಾದ ಭಾಸ್ಕರ ನಾಯ್ಕ, ಶಿವಾನಂದ ನಾಯ್ಕ, ಈಶ್ವರ ನಾಯ್ಕ, ಶಿಕ್ಷಕ ವೆಂಕಟೇಶ ನಾಯ್ಕ, ಮಹೇಶ ನಾಯ್ಕ, ರಾಜೇಶ ನಾಯ್ಕ, ಉಪನ್ಯಾಸಕ ರವಿ ನಾಯ್ಕ, ಚಂದ್ರು ನಾಯ್ಕ ಹಾಗೂ ಉದ್ಯೋಗಾಕಾಂಕ್ಷಿಗಳು ಉಪಸ್ಥಿತರಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...