ಸೋಲಿನ ಭೀತಿಯಲ್ಲಿರುವ ಬಿಜೆಪಿಯಿಂದ 'ತೆರಿಗೆ ಭಯೋತ್ಪಾದನೆ'; ಸಿದ್ದರಾಮಯ್ಯ

Source: VB | Published on 31st March 2024, 11:33 AM | State News |

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಬಿಜೆಪಿ, ಆದಾಯ ತೆರಿಗೆ ಇಲಾಖೆ(ಐಟಿ), ಜಾರಿ ನಿರ್ದೇಶನಾಲಯ (ಈ.ಡಿ.), ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಶನಿವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ಧ 'ತೆರಿಗೆ ಭಯೋತ್ಪಾದನೆ'ಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಆ ಪಕ್ಷದ ಭ್ರಮೆ ಎಂದು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಮೇಲೆ ವರಮಾನ ತೆರಿಗೆ ಪಾವತಿ ಮಾಡದೆ ಇರುವ ಆರೋಪ ಹೊರಿಸಿ 1,823 ಕೋಟಿ ರೂ. ಪಾವತಿಸುವಂತೆ ಐಟಿ ಇಲಾಖೆ ನೋಟಿಸ್ ನೀಡಿದೆ. 2017-18ರಲ್ಲಿ ಬಿಜೆಪಿ ಹೆಸರೇ ಇಲ್ಲದ 92 ದಾನಿಗಳಿಂದ 4.5 ಲಕ್ಷ ರೂ. ಮತ್ತು ವಿಳಾಸವೇ ಇಲ್ಲದ 1,297 ದಾನಿಗಳಿಂದ 42 ಕೋಟಿ ರೂ. ದೇಣಿಗೆ ಪಡೆದಿರುವುದನ್ನು ನಮ್ಮ ಪಕ್ಷದ ನಾಯಕರು ಬಯಲಿಗೆಳೆದಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದಾರೆ.

ನಮ್ಮ ಪಕ್ಷಕ್ಕೆ ಅನ್ವಯಿಸಿದ ಮಾನದಂಡವನ್ನೇ ಅನ್ವಯಿಸಿದರೆ ಬಿಜೆಪಿ ಕಳೆದ ಏಳು ವರ್ಷಗಳಲ್ಲಿ ನಡೆಸಿರುವ ತೆರಿಗೆ ಉಲ್ಲಂಘನೆಗಾಗಿ 4,263 ಕೋಟಿ ರೂ. ಪಾವತಿಸಬೇಕಾಗಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅತಿಕ್ರಿಯಾಶಾಲಿಯಾಗಿರುವ ಐಟಿ ಇಲಾಖೆ ಟಿಎಂಸಿ, ಸಿಪಿಐ ಸೇರಿದಂತೆ ಬೇರೆ ವಿರೋಧ ಪಕ್ಷಗಳ ಮೇಲೆಯೂ ತೆರಿಗೆ ಭಯೋತ್ಪಾದನೆಯ ಅಸ್ತ್ರ ಪ್ರಯೋಗ ಮಾಡಿದೆ ಎಂದು ಅವರು ಟೀಕಿಸಿದ್ದಾರೆ.

ವಿರೋಧ ಪಕ್ಷಗಳ ಮೇಲೆ ಮುಗಿಬಿದ್ದಿರುವ ಐಟಿ ಇಲಾಖೆ ಬಿಜೆಪಿಯ ತೆರಿಗೆ ಉಲ್ಲಂಘನೆ ಬಗ್ಗೆ ಮಾತ್ರ ಕುರುಡಾಗಿದೆ. ಐಟಿ ಇಲಾಖೆಯ ಕಣ್ಣಿಗೆ ಬಟ್ಟೆ ಕಟ್ಟಿರುವವರು ಯಾರು ಎನ್ನುವುದನ್ನು ಮುಗಿಬಿದ್ದಿರುವ

ತಿಳಿಯದಷ್ಟು ದೇಶದ ಜನತೆ ದಡ್ಡರಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಕೆಲವು ನಾಯಕರ ಡೈರಿಗಳೆಂದು ಹೇಳಲಾದ ದಾಖಲೆಪತ್ರಗಳನ್ನು ಮುಂದಿಟ್ಟುಕೊಂಡು ತೆರಿಗೆ ಉಲ್ಲಂಘನೆಯ ಆರೋಪ ಮಾಡುತ್ತಿರುವ ಐಟಿ ಇಲಾಖೆಗೆ, ಕರ್ನಾಟಕದಲ್ಲಿಯೇ ಬಯಲಾಗಿದ್ದ ລ ಯಡಿಯೂರಪ್ಪ ಡೈರಿಗಳಾಗಲಿ, ಮೋದಿಯವರೂ ಫಲಾನುಭವಿ ಎಂದು ಆರೋಪಿಸಲಾಗಿರುವ 'ಬಿರ್ಲಾ-ಸಹಾರಾ' ಡೈರಿಯಾಗಲಿ ಯಾಕೆ ಕಣ್ಣಿಗೆ ಬಿದ್ದಿಲ್ಲ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಐಟಿ, ಈ.ಡಿ. ಮತ್ತು ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣಾ ಬಾಂಡ್ಗಳ ಮೂಲಕ ಸಾವಿರಾರು ಕೋಟಿ ರೂ.ಗಳನ್ನು ಆಡಳಿತಾರೂಢ ಬಿಜೆಪಿ ಸುಲಿಗೆ ಮಾಡಿರುವುದು ಜಗಜ್ಜಾಹೀರಾಗಿದೆ. ಬಯಲಾಗಿರುವ ಈ ಹಗರಣದಿಂದ ಜನರ ಗಮನ ಬೇರೆ ಕಡೆ ಸೆಳೆಯುವಜೊತೆಯಲ್ಲಿ ವಿರೋಧ ಪಕ್ಷಗಳನ್ನೂ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುರ ದುರುದ್ದೇಶ ದಿಂದಲೇ ಬಿಜೆಪಿಸರಕಾರ ವರಮಾನ ತೆರಿಗೆ ವಂಚನೆಯ ಸುಳ್ಳು ಆರೋಪಗಳನ್ನು ಮಾಡುತ್ತಿದೆ ಎಂದು ಅವರು ದೂರಿದ್ದಾರೆ.

ಐದು ವರ್ಷಗಳ ಅವಧಿಯಲ್ಲಿ ವಿಜಯ್ ಮಲ್ಯ, ನೀರವ್ ಮೋದಿ ಮೊದಲಾದ ಬ್ಯಾಂಕ್ ವಂಚಕರ 10.09 ಲಕ್ಷ ಕೋಟಿ ರೂ.ನಷ್ಟು ಬ್ಯಾಂಕ್ ಸಾಲವನ್ನು ಮನ್ನಾ ಮಾಡಿರುವ ಬಿಜೆಪಿ ಸರಕಾರ ಅವರಿಂದ ಪಡೆದಿರುವ ಕಮಿಷನ್ ಹಣ ಎಷ್ಟು ಎನ್ನುವುದನ್ನು ದೇಶದ ಜನತೆಗೆ ತಿಳಿಸಬೇಕಾಗುತ್ತದೆ. ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ ಹಣದ ಬಲ ಅಲ್ಲ, ಜನ ಬಲ. ಬಿಜೆಪಿಯಲ್ಲಿ ಹಣ ಬಲ ಇದ್ದರೆ ನಮ್ಮಲ್ಲಿ ಜನಬಲ ಇದೆ. ತೆರಿಗೆ ವಂಚಕರು, ಬ್ಯಾಂಕ್ ಗಳನ್ನು ಮುಳುಗಿಸಿದವರು, ಗಣಿ ಲೂಟಿಕೋರರು, ಕಾಳಸಂತೆಕೋರರು, ಕಳ್ಳ-ಖದೀಮರೇ ಬಿಜೆಪಿಯ ಬಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಅಂದ್ರೆ ಭ್ರಷ್ಟರ ಹಣವನ್ನು ನುಂಗಿ ಅವರಿಗೆ ಪ್ರಾಮಾಣಿಕತೆಯ ಸರ್ಟಿಫಿಕೇಟ್ ನೀಡುವ ವಾಷಿಂಗ್ ಮೆಶಿನ್ ಆಗಿದೆ. ಭ್ರಷ್ಟರು ತಾವು ಮಾಡಿದ ಮಹಾಪಾಪಗಳ ಮೇಲಿನ ತನಿಖೆಯಿಂದ ತಪ್ಪಿಸಿಕೊಳ್ಳಬೇಕಾದರೆ, ಶಿಕ್ಷೆಯಿಂದ ಪಾರಾಗಬೇಕಾದರೆ ಬಿಜೆಪಿ ಸೇರಿಕೊಂಡರೆ ಸಾಕು, ಪಾಪಗಳೆಲ್ಲವೂ ತನ್ನಿಂತಾನೆ ಶುದ್ಧವಾಗುತ್ತದೆ ಎಂದು ಅವರು ಹೇಳಿದ್ದಾರೆ. ಬಿಜೆಪಿಯಲ್ಲಿದ್ದುಕೊಂಡು ಎಷ್ಟು ಬೇಕಾದರೂ ಭ್ರಷ್ಟಾಚಾರ ಮಾಡಬಹುದು, ಜನರ ಹಣ ಲೂಟಿ ಮಾಡಬಹುದು. ಅವರ ಮೇಲೆ ಯಾವ ಕೇಸೂ ದಾಖಲಾಗುವುದಿಲ್ಲ. ಯಾವ ತನಿಖಾ ಸಂಸ್ಥೆಯೂ ಹುಡುಕಿಕೊಂಡು ಬರುವುದಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಮತ್ತು ಅಧಿಕಾರವನ್ನು ಉಳಿಸಿಕೊಂಡಿದ್ದೇ ಇಂತಹ ಕಳ್ಳ-ಖದೀಮರ ಲೂಟಿಯ ಹಣದಿಂದ. ಇದಕ್ಕೆ ಉತ್ತಮ ಉದಾಹರಣೆ ಕರ್ನಾಟಕದಲ್ಲಿ ನಡೆಸುತ್ತಾ ಬಂದ ಆಪರೇಷನ್ ಕಮಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

 

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...