ಭಟ್ಕಳ: ಕೊರೋನಾ ಹೋರಾಟದಲ್ಲಿ ನಿರತ ಪೊಲೀಸ್ ಪೇದೆಯೊಬ್ಬರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆ ಕ್ವಾರೆಂಟೈನ್ ನಲ್ಲಿಡಲಾಗಿದೆ ಎಂದು ತಿಳಿದು ಬಂದಿದೆ.
ಇಲ್ಲಿನ ಶಮ್ಸುದ್ದೀನ್ ವೃತ್ತದಲ್ಲಿ ಕಾರ್ಯನಿತರ ಪೊಲೀಸ್ ಪೇದೆ ಜ್ವರದಿಂದ ಬಳಲುತ್ತಿದ್ದ ಕಾರಣ ಅವರ ಗಂಟಲು ದ್ರವ ಮಾದರಿಯನ್ನು ಕೋವಿಡ್-19 ಪರೀಕ್ಷೆಗಾಗಿ ಕಳುಹಿಸಲಾಗಿದೆ. ಯಾವುದೇ ಭಯಪಡುವ ಅವಶ್ಯಕತೆಯಿಲ್ಲ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.