ಸಾಲ ಮರುಪಾವತಿ ಕುರಿತು ಅಂತಿಮ ನಿರ್ಧಾರಕ್ಕೆ ಬನ್ನಿ: ಕೇಂದ್ರ ಸರ್ಕಾರಕ್ಕೆ 2ವಾರಗಳ ಅಂತಿಮ ಗಡುವು ನೀಡಿದ ಸುಪ್ರೀಂ ಕೋರ್ಟ್!

Source: PTI | Published on 11th September 2020, 12:13 AM | National News | Don't Miss |

 

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ಲಾಕ್ ಡೌನ್ ಹಿನ್ನಲೆಯಲ್ಲಿ ಸಾಲ ಮರುಪಾವತಿಸಲಾಗದ ಗ್ರಾಹಕರ ವಿಚಾರಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಧಾರಕ್ಕೆ ಬನ್ನಿ ಎಂದು ಸುಪ್ರೀಂ ಕೋರ್ಟ್ 2 ವಾರಗಳ ಅಂತಿಮ ಗಡುವು ನೀಡಿದೆ.
ಕೊರೋನಾವೈರಸ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸಾಲಗಾರರ ಮೇಲಿನ ಆರ್ಥಿಕ ಹೊರೆ ಸರಾಗಗೊಳಿಸುವ ಸಲುವಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪರಿಚಯಿಸಿದ ಮೊರಟೋರಿಯಂ ಅವಧಿಯಲ್ಲಿ ಮುಂದೂಡಲ್ಪಟ್ಟ ಇಎಂಐಗಳ ಮೇಲಿನ ಬಡ್ಡಿ ಮನ್ನಾ ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್  ವಿಚಾರಣೆ ನಡೆಸುತ್ತಿದೆ. 
ಈ ಕುರಿತಂತೆ ಇಂದು ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಕುರಿತಂತೆ ಮಾತನಾಡಿದ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಸಾಲ ಮರುಪಾವತಿಸಲಾಗದ ಗ್ರಾಹಕರ ವಿಚಾರಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಧಾರಕ್ಕೆ ಬನ್ನಿ. ಸಂಕಷ್ಟದಲ್ಲಿರುವ ಗ್ರಾಹಕರಿಗೆ ಅನುಕೂಲವಾಗುವಂತೆ ಮತ್ತು ಇಎಂಐ ಕುರಿತ  ಸಮಸ್ಯೆ ನಿವಾರಿಸಿ ಎಂದು ಹೇಳಿದೆ. ''ಈ ಎರಡು ವಾರಗಳಲ್ಲಿ ಏನಾಗಲಿದೆ? ... ನಾವು ಕೇಂದ್ರ ಸರ್ಕಾರಕ್ಕೆ ಮತ್ತೆ ಸಮಯ ನೀಡುತ್ತಿದ್ದೇವೆ, ಆದರೆ ದೃಢ ಮತ್ತು ಸೂಕ್ತ ನಿರ್ಧಾರ ತೆಗೆದುಕೊಳ್ಳಿ. ಇದು ಕೇಂದ್ರ ಸರ್ಕಾರ ಮತ್ತು ಆರ್ ಬಿಐಗೆ ಕೊನೆಯ ಅವಕಾಶವಾಗಿದ್ದು, ಮತ್ತೆ ಪ್ರಕರಣವನ್ನು ಮುಂದೂಡಲು ಸಾಧ್ಯವಿಲ್ಲ  ಎಂದೂ ಹೇಳಿದೆ.
ಈ ಹಿಂದಿನ ವಿಚಾರಣೆಯಲ್ಲಿ ಸಾಲ ಮರುಪಾವತಿಸಲಾಗದ ಗ್ರಾಹಕರಿಗೆ ಬ್ಯಾಂಕುಗಳು ದಂಡ ವಿಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದ ಸುಪ್ರೀಂ ಕೋರ್ಟ್, ಈ ಕುರಿತಂತೆ ಸ್ಪಷ್ಟ ನಿಲುವು ತಳೆಯುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...