ಅಂಕೋಲಾ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಅಂತಿಮ ಅಧಿಸೂಚನೆ

Source: S O News service | By I.G. Bhatkali | Published on 3rd September 2021, 2:26 PM | Coastal News |

ಕಾರವಾರ : ನಾಗರಿಕ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಅಂಕೋಲಾ ತಾಲೂಕಿನ ಅಲಗೇರಿ ಹಾಗೂ ಭಾವಿಕೇರಿ ಗ್ರಾಮದ ಹಲವು ಪ್ರದೇಶಗಳನ್ನು  ಹೊಸ ಭೂಸ್ವಾಧೀನ ಕಾಯ್ದೆ 2013ರ ಕಲಂ 19(1)ರ ಅನ್ವಯ ಅಂತಿಮ ಅಧಿಸೂಚನೆ ಹೊರಡಿಸಲಾಗಿದ್ದು ಅಲ್ಲಿನ ಹಲವು ಪ್ರದೇಶಗಳನ್ನು ಸರ್ಕಾರ ಭೂಸ್ವಾಧಿನ ಪಡೆಸಿಕೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಭೂಸ್ವಾಧಿನಕ್ಕೆ ಒಳಪಡುವ ಜಮೀನುಗಳ ನಕ್ಷೆಯನ್ನು  ಅಲಿಗೇರಿ ನಾಗರಿಕ ವಿಮಾನ ನಿಲ್ದಾಣದ ವಿಶೇಷ ಭೂಸ್ವಾಧೀನ ಅಧಿಕಾರಿ ಹಾಗೂ ಕುಮಟಾದ ಸಹಾಯಕ ಆಯುಕ್ತರ ಉಪ ವಿಭಾಗದಲ್ಲಿ ಪರೀಶಿಲನೆಗೆ ಇಡಲಾಗಿದೆ. 

ಇದಕ್ಕೆ ಸಂಬಂಧಿಸಿದಂತೆ ಜಮೀನುಗಳ ಮಾಲೀಕರು, ಹಿತಾಸಕ್ತಿಯುಳ್ಳವರು ಅಧಿಸೂಚನೆ ಪ್ರಕಟವಾದ 30 ದಿನಗಳೊಗಾಗಿ ಕಲಂ 21(2)ರಂತೆ ಆಕ್ಷೇಪಣೆಗಳನ್ನು ಮಾಡುವುವರಿದ್ದರೆ ಅಲಿಗೇರಿ ನಾಗರಿಕ ವಿಮಾನ ನಿಲ್ದಾಣದ ವಿಶೇಷ ಭೂಸ್ವಾಧೀನ ಅಧಿಕಾರಿ ಹಾಗೂ ಕುಮಟಾದ ಸಹಾಯಕ ಆಯುಕ್ತರಿಗೆ ಸಲ್ಲಿಸಬಹುದಾಗಿರುತ್ತದೆ. 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...