ಜಾಮೀನು ನೀಡುವಾಗ ಆರೋಪಿಯ ಇತಿಹಾಸ ತಿಳಿದುಕೊಳ್ಳಿ: ಸುಪ್ರೀಂ

Source: PTI | By MV Bhatkal | Published on 12th September 2021, 7:20 PM | National News | Don't Miss |

ನವದೆಹಲಿ: ಜಾಮೀನಿನ ಮೇಲೆ ಆರೋಪಿಯೊಬ್ಬ ಬಿಡುಗಡೆಯಾದರೆ ಆತ ಆ ಅವಧಿಯಲ್ಲಿ ಗಂಭೀರ ಅಪರಾಧಗಳನ್ನು ನಡೆಸಬಹುದೇ ಎಂಬುದನ್ನು ಅಂದಾಜಿಸಲಿಕ್ಕಾಗಿ ಅಂತಹ ವ್ಯಕ್ತಿಯ ಇತಿಹಾಸ ತಿಳಿಯುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್ ಕೊಲೆ ಆರೋಪಿಯೊಬ್ಬನಿಗೆ ಜಾಮೀನು ನೀಡಿದ್ದ ಆದೇಶವೊಂದನ್ನು ರದ್ದುಪಡಿಸಿದ ವೇಳೆ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಮತ್ತು ಎಂ.ಆರ್.ಷಾ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.

‘ಜಾಮೀನು ಅರ್ಜಿಗಳನ್ನು ನಿರ್ಧರಿಸುವಾಗ ಆರೋಪದ ಗಹನತೆ ಮತ್ತು ಸಾಕ್ಷ್ಯಗಳೂ ಪ್ರಮುಖವಾಗುತ್ತವೆ. ಆರೋಪ ಸಾಬೀತಾದ ಸಂದರ್ಭದಲ್ಲಿ ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸುವಲ್ಲಿಯೂ ಇದು ಮುಖ್ಯವಾಗುತ್ತದೆ’ ಎಂದು ಪೀಠ ಹೇಳಿತು.

ಈ ಹಿಂದಿನ ನಿರ್ಧಾರಗಳನ್ನು ಉಲ್ಲೇಖಿಸಿದ ಪೀಠ, ಜಾಮೀನು ನಿರಾಕರಿಸುವ ಮೂಲಕ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವುದು ಶಿಕ್ಷೆಯ ಉದ್ದೇಶಕ್ಕಾಗಿ ಅಲ್ಲ, ಬದಲಿಗೆ ನ್ಯಾಯದಾನದಲ್ಲಿನ ಹಲವು ಹಿತಾಸಕ್ತಿಗಳನ್ನು ಈಡೇರಿಸುವುದಕ್ಕಾಗಿರುತ್ತದೆ ಎಂದು ತಿಳಿಸಿತು.

ಯಾವುದೇ ಆರೋಪಿಗೆ ಜಾಮೀನು ನೀಡುವುದಕ್ಕೆ ಮೊದಲು ಆತ ಎಂತಹ ಅಪರಾಧ ಎಸಗಿದ್ದಾನೆ, ಒಂದು ವೇಳೆ ಆರೋಪ ಸಾಬೀತಾದರೆ ಎಂತಹ ಶಿಕ್ಷೆ ಅನುಭವಿಸಬಹುದು, ಪೂರಕ ಸಾಕ್ಷ್ಯಗಳ ಲಕ್ಷಣಳೇನು, ಸಾಕ್ಷ್ಯಗಳನ್ನು ನಾಶಪಡಿಸುವ ಅಥವಾ ತಿರುಚುವ ಸಾಧ್ಯತೆಗಳಿವೆಯೇ, ಕಕ್ಷಿದಾರನಿಗೆ ಬೆದರಿಕೆ ಒಡ್ಡಬಹುದಾದ ಸಾಧ್ಯತೆಗಳಿವಯೇ ಮೊದಲಾದ ವಿಚಾರಗಳನ್ನು ಗಮನಕ್ಕೆ ತೆಗೆದುಕೊಳ್ಳಬೇಕಾಗುತ್ತದೆ ಎಂದು ಪೀಠ ಹೇಳಿತು.

Read These Next

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ

ಹೈದರಾಬಾದ್: ಹೈದರಾಬಾದ್ ಆರ್ ಜಿ ಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಫೇಸ್ ಕ್ರೀಮ್ ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ...

ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಜಿಲ್ಲೆಯಾದ್ಯಂತ ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...