ಶಿರಸಿಯಲ್ಲಿ ಕಂಪ್ಯೂಟರ್ ಅಂಗಡಿಗೆ ಬೆಂಕಿ.

Source: SO News | By Laxmi Tanaya | Published on 30th August 2020, 1:57 PM | Coastal News | Don't Miss |

ಶಿರಸಿ : ಶಿರಸಿಯ ಯಲ್ಲಾಪುರ ರಸ್ತೆ ಪಕ್ಕದಲ್ಲಿರುವ ಕಂಪ್ಯೂಟರ್ ಅಂಗಡಿಗೆ  ಆಕಸ್ಮಿಕ ಬೆಂಕಿ ತಗುಲಿ ಉಪಕರಣಗಳು  ಸುಟ್ಟು ಭಸ್ಮವಾದ ಘಟನೆ ನಡೆದಿದೆ. ರವಿವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಅಂಗಡಿಯಲ್ಲಿದ್ದ ಕಂಪ್ಯೂಟರ್ ಮತ್ತು ಮೊಬೈಲ್ಗಳು, ದುರಸ್ಥಿಗೆ ಸಂಬಂಧಪಟ್ಟ ಇತರೆ ಉಪಕರಣಗಳು  ಬೆಂಕಿಗಾಹುತಿಯಾಗಿದೆ. 

ಅಭಿ ಬಿಳಗಿ ಎಂಬುವವರಿಗೆ ಸೇರಿದ ನ್ಯೂ ಐಟಿ ಮಾರ್ಟ್ ಮಳಿಗೆಯಲ್ಲಿ ಶಾರ್ಟ್ ಉಂಟಾಗಿದ್ದು,  ಸರ್ಕ್ಯೂಟ್ ನಿಂದ  ಬೆಂಕಿ ತಗುಲಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದರು. ಶಿರಸಿ ಮಾರುಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...