ಭಟ್ಕಳದಲ್ಲಿ ಕೋವಿಡ್-19 ವ್ಯಾಕ್ಸಿನ್ ಲಸಿಕೆಯ ನೀಡಲು ಶನಿವಾರದಿಂದಲೇ ಆರಂಭ

Source: S.O. News Service | By MV Bhatkal | Published on 15th January 2021, 9:00 PM | Coastal News | Don't Miss |

ಭಟ್ಕಳ: ದೇಶದೆಲ್ಲೆಡೆಯಲ್ಲಿ ಕೋವಿಡ್-19 ವ್ಯಾಕ್ಸಿನ್ ಹಂಚಿಕೆ ಮಾಡುವಂತೆಯೇ ಭಟ್ಕಳದಲ್ಲಿಯೂ ಕೂಡಾ ಲಸಿಕೆಯನ್ನು ನೀಡಲು ಎಲ್ಲಾ ತಯಾರಿ ಮಾಡಿಕೊಂಡಿದ್ದು ಜ.16ರ ಶನಿವಾರದಿಂದಲೇ ವ್ಯಾಕ್ಸಿನ್ ನೀಡಲು  ಆರಂಭಿಸಲಾಗುವುದು ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ. ಮೂರ್ತಿರಾಜ ಭಟ್ಟ ಹೇಳಿದರು. 

ಅವರು ಇಲ್ಲಿನ ತಾಲೂಕಾ ಆಸ್ಪತ್ರೆಯಲ್ಲಿ ಕೋವಿಡ್ ವ್ಯಾಕ್ಸಿನ್ ಹಂಚಿಕೆಯ ಸಂಪೂರ್ಣ ತಯಾರಿಯನ್ನು ಮಾಡಿಕೊಂಡು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. 

ಪ್ರಥಮವಾಗಿ ಶನಿವಾರದಂದು  ಈ ಮೊದಲೇ ನೋಂದಣೀಯಾಗಿರುವ 100 ಜನರಿಗೆ ವ್ಯಾಕ್ಸಿನ್ ಕೊಡುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರತಿಯೋರ್ವರಿಗೂ ಎರಡು ಡೋಸ್‍ಗಳನ್ನು ನೀಡಲಾಗುವುದು ಅಲ್ಲದೇ ಆಧಾರ್ ಸಂಖ್ಯೆಗೆ ವಾಕ್ಸಿನೇಶನ್ ಆಗಿರುವ ಕುರಿತು ಲಿಂಕ್ ಮಾಡುವ ವ್ಯವಸ್ಥೆ ಕೂಡಾ ಇದೆ ಎಂದರು. ವಾಕ್ಸಿನೇಶನ್ ಮಾಡಲು ವ್ಯಕ್ತಿಯ ಹೆಸರು ಮೊದಲೇ ನೋಂದಣಿಯಾಗಿರಬೇಕು ಹಾಗೂ ಆ ಕುರಿತು ಕೂಲಂಕುಷವಾಗಿ ಪರಿಶೀಲಿಸಿದ ನಂತರವೇ ವಾಕ್ಸಿನೇಶನ್ ಮಾಡಲಾಗುವುದು ಎಂದೂ ಅವರು ಹೇಳಿದರು. 

ತಾಲೂಕಿನಲ್ಲಿ 1259 ಜನರನ್ನು ಕೋವಿಡ್ ಲಸಿಕೆಗಾಗಿ ಗುರುತಿಸಲಾಗಿದೆ. ಲಸಿಕೆ ನೀಡುವಾಗ  ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತದೆ. ತಾಲೂಕಿನ 13 ಕಡೆಗಳಲ್ಲಿ ಕೋವಿಡ್ ಲಸಿಕೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದ ಅವರು ಲಸಿಕೆ ಸುರಕ್ಷಿತವಾಗಿಡಲು ಈಗಾಗಲೇ ಎಲ್ಲಾ ರೀತಿಯ ಸಿದ್ದತೆ ಕೈಗೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಆಯುಕ್ತ ಭರತ್ ಅವರು ಕೋವಿಡ್ ಲಸಿಕೆ ನೀಡುವಿಕೆಯು ಮೂರು ಹಂತದಲ್ಲಿ ನಡೆಯುತ್ತದೆ.  ಪ್ರಥಮವಾಗಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು. ಎರಡನೆಯದಾಗಿ ಫ್ರಂಟ್‍ಲೈನ್ ಕೊರೊನಾ ವಾರಿಯರ್ಸ್ ಪುರಸಭೆ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಅಗತ್ಯ ಸೇವೆ ನೀಡುವವರಿಗೆ ಹಾಘೂ ಮೂರನೇ ಹಂತದಲ್ಲಿ 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಎಂದರು. 

ಈ ಸಂದರ್ಭದಲ್ಲಿ ತಹಸೀಲ್ದಾರ ರವಿಚಂದ್ರ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ಮುಂತಾದವರಿದ್ದರು.  

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...