ಕರಾವಳಿ ಜಿಲ್ಲೆಗಳ ಸಮಾಲೋಚನಾ ಸಭೆ; ಕರಾವಳಿಯಲ್ಲಿ ಮತ್ತೊಂದು ಹೊಸ ಬಂದರು ನಿರ್ಮಾಣ:ಮಂಕಾಳ ವೈದ್ಯ

Source: Vb | By I.G. Bhatkali | Published on 10th November 2023, 12:04 PM | Coastal News | State News |

ಬೆಂಗಳೂರು: ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆಯನ್ನು ಅಭಿವೃದ್ಧಿಪಡಿಸುವ ಸಲುವಾಗಿ ಕಾರವಾರ ಮತ್ತು ಮಂಗಳೂರಿನಲ್ಲಿ ಹೊಸದಾಗಿ ಬಂದರು ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಬಂದರು ಹಾಗೂ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕರಾವಳಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಇಲಾಖಾ ವಿಷಯಗಳ ಕುರಿತು ಸಮಾಲೋಚನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀನುಗಾರರಿಗೆ ವಿವಿಧ ಸವಲತ್ತುಗಳ ವಿತರಣೆ ಪ್ರಗತಿ, ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಬೋಟ್‌ಗಳ ನಿಲುಗಡೆಗೆ ಅವಕಾಶವೂ ಸೇರಿ ಪ್ರವಾಸೋದ್ಯಮ ಅಭಿವೃದ್ಧಿಗೂ ಆದ್ಯತೆ ನೀಡಿ ಕಾರವಾರ ಮತ್ತು ಮಂಗಳೂರಿನಲ್ಲಿ ಹೊಸದಾಗಿ ಬಂದರು ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದರು.

ಈ ವಿಸ್ತ್ರತ ಯೋಜನಾ ವರದಿ ಸಿದ್ದವಾದ ನಂತರ ಅಂದಾಜು ವೆಚ್ಚ ತಿಳಿಯಲಿದೆ. ಅಲ್ಲದೆ, ಬಂದರು ನಿರ್ಮಾಣ ಸಂಬಂಧ ಮೂರು ಜಿಲ್ಲೆಗಳಲ್ಲಿ ಒಟ್ಟು 13 ದ್ವೀಪಗಳನ್ನು ಗುರುತಿಸಲಾಗಿದೆ. ಪ್ರವಾಸೋದ್ಯಮಕ್ಕೆ ಪೂರಕವಾಗಿ ಖಾಸಗಿ-ಸಾರ್ವಜನಿಕ ಬಳಸಿಕೊಳ್ಳಲು ಸಹಭಾಗಿತ್ವದ ಚಿಂತನೆಯಿದ್ದು, ಅಂತಿಮವಾಗಿಲ್ಲ ಎಂದು ಮಾಹಿತಿ ನೀಡಿದರು. ನಿರಂತರ ಮನವಿ ಮಾಡಿದರೂ ಕೇಂದ್ರ ಸರಕಾರ ವಾರ್ಷಿಕ ಸೀಮೆ ಎಣ್ಣೆ ಹಂಚಿಕೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಮಾಸಿಕ 200 ಲೀಟರ್ ವೈಟ್ ಪೆಟ್ರೋಲನ್ನು ಲೀಟರ್‌ಗೆ 35 ರೂ.ನಂತೆ ಸಬ್ಸಿಡಿ ದರದಲ್ಲಿ 10 ತಿಂಗಳ ಕಾಲ ವಿತರಿಸಲಿದ್ದು, 300 ಲೀಟರ್ ವರೆಗೆ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...