ಮೀನುಗಾರಿಕೆಗೆ ತೆರಳಿದ ಬೋಟ್ ಮುಳುಗಡೆ : 7 ಜನ ಮೀನುಗಾರರ ರಕ್ಷಣೆ..!

Source: so news | By Manju Naik | Published on 11th April 2019, 12:07 AM | Coastal News | National News |

ಉಡುಪಿ:ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ ಬೋಟಿನ ಅಡಿ ಭಾಗಕ್ಕೆ ಡಿಕ್ಕಿಯಾಗಿ,ಬೋಟ್ ಮುಳುಗಿ ಅದರಲ್ಲಿ ಇದ್ದ ಜನರನ್ನು ರಕ್ಷಿಸಿದ್ದಾರೆ. ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ ಬೋಟ್‌ವೊಂದು ಮಹಾರಾಷ್ಟ್ರದ ದೇವಗಡ ಸಮೀಪ ಸೋಮವಾರ ತಡರಾತ್ರಿ ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
ಪಡುತೋನ್ಸೆ ಬೆಂಗ್ರೆ ಹೂಡೆಯ ದಿನೇಶ್‌ ತಿಂಗಳಾಯ ಎಂಬುವವರಿಗೆ ಸೇರಿದ ‘ಶಿವರಕ್ಷ’ ಹೆಸರಿನ ಆಳಸಮುದ್ರ ಸ್ಟೀಲ್‌ಬೋಟ್‌ ಮುಳುಗಡೆಯಾಗಿದ್ದು, ಬೋಟಿನಲ್ಲಿದ್ದ ಭಟ್ಕಳದ ಮೀನುಗಾರರಾದ ಸುನೀಲ್‌ ಮಂಜುನಾಥ್‌, ಸುರೇಶ್‌ ಮಂಜುನಾಥ್‌, ಜಗನ್ನಾಥ ರಾಮ, ಪ್ರಶಾಂತ್‌ ಮೂಡಗಿ, ಗಜೇಂದ್ರ ಪಾಂಡುರಂಗ, ಕೃಷ್ಣ ಮೊಗೇರ, ಲೋಹಿತ್‌ ಧರ್ಮ ಅವರನ್ನು ರಕ್ಷಿಸಲಾಗಿದೆ.
ಎ. 6ರಂದು ರಾತ್ರಿ ಮಲ್ಪೆ ಬಂದರಿನಿಂದ ತೆರಳಿದ ಬೋಟ್‌ ಮಹಾರಾಷ್ಟ್ರದ ರತ್ನಾಗಿರಿ ಸಮೀಪ ಸುಮಾರು 42 ಮಾರು ಅಳದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದು, ಈ ವೇಳೆ ಬೋಟಿನ ಅಡಿಭಾಗಕ್ಕೆ ಯಾವುದೋ ವಸ್ತು ಡಿಕ್ಕಿಯಾಗಿ ಬೋಟ್‌ನೊಳಗೆ ನೀರು ತುಂಬಿಕೊಂಡಿತು. ತಕ್ಷಣವೇ ಎಚ್ಚೆತ್ತುಕೊಂಡ ಮೀನುಗಾರರು ಸಮೀಪದಲ್ಲಿರುವ ಬೋಟ್‌ನವರಿಗೆ ಮಾಹಿತಿ ನೀಡಿದರು. ಕೂಡಲೇ ಘಟನಾ ಸ್ಥಳಕ್ಕಾಗಮಿಸಿದ ಶಿವತೇಜಸ್‌ ಬೋಟಿನವರು 7 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.
ಆ ನಂತರ ಶಿವತೇಜಸ್‌, ವರಸಿದ್ದಿ, ಹನುಮ ಸಾನಿಧ್ಯ ಮತ್ತು ರಾಧಾಂಬಿಕ ಹೆಸರಿನ ಬೋಟ್‌ಗಳ ಸಹಾಯದಿಂದ ಮುಳುಗಡೆಯಾಗುತ್ತಿದ್ದ ಶಿವರಕ್ಷ ಬೋಟನ್ನು ಎಳೆದು ತರಲಾಯಿತು. ಆದರೆ ಸುಮಾರು 34ಮಾರು ಆಳದೂರದಲ್ಲಿ ದೇವಗಡ ಸಮೀಪ ಎಳೆದು ತರುತ್ತಿದ್ದಾಗ ಬೋಟ್‌ ಸಂಪೂರ್ಣ ಮುಳುಗಡೆಗೊಂಡಿತು ಎನ್ನಲಾಗಿದೆ. ಇದರಿಂದ ಬೋಟನಲ್ಲಿದ್ದ ೮ಸಾವಿರ ಲೀ. ಡಿಸೇಲ್‌, ಬಲೆ, ಜಿಪಿಎಸ್‌, ಹಿಡಿದ ಮೀನುಗಳು ಸೇರಿದಂತೆ ಒಟ್ಟು 90 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ

 

Read These Next

ತಾಲೂಕು ಮಟ್ಟ ದಸರಾ ಕ್ರೀಡಾಕೂಟದಲ್ಲಿ ನ್ಯೂ ಇಂಗ್ಲಿಷ್ ಪಿಯು ಕಾಲೇಜ್ ವಿದ್ಯಾರ್ಥಿಗಳ ಸಾಧನೆ

ಭಟ್ಕಳ: ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಯುವ ಸಬಲಿಕರಣ ಹಾಗೂ ಕ್ರೀಡಾ ಇಲಾಖೆ, ಉ.ಕ., ತಾಲೂಕಾ ಪಂಚಾಯತ್  ಭಟ್ಕಳ ಮತ್ತು ತಾಲೂಕಾ ಯುವ ...

ಶರಾವತಿ ಅಭಯಾರಣ್ಯಕ್ಕೆ ಅರಣ್ಯ ಪ್ರದೇಶ ಸೇರ್ಪಡೆ ವಿರೋಧಿಸಿ ಅ.೧೦ ರಂದು ಬೃಹತ್ ಪ್ರತಿಭಟನೆಗೆ ನಿರ್ಧಾರ

ಭಟ್ಕಳ: ಶರಾವತಿ ಅಭಯಾರಣ್ಯಕ್ಕೆ ಭಟ್ಕಳ ತಾಲೂಕಿನ ಅರಣ್ಯ ಪ್ರದೇಶವನ್ನು ಸೇರ್ಪಡಿಸಿದ್ದನ್ನು ಖಂಡಿಸಿ ಹಾಗೂ ಸೇರ್ಪಡೆಗೊಂಡ ...

ಬ್ಯಾಂಕುಗಳ ವಿಲೀನ ಉನ್ಮಾದ

ವಾಸ್ತವಗಳು ಬ್ಯಾಂಕುಗಳ ಗಾತ್ರ ಮತ್ತು ದಕ್ಷತೆಯ ನಡುವಿನ ಸಂಬಂಧಗಳ ಒದಗಿಸುವ ತಿಳವಳಿಕೆಗಳಿಗೆ ಪೂರಕವಾಗಿಯೇನೂ ಇಲ್ಲ. ಉದಾಹರಣೆಗೆ ...