ಜುಲೈ 18ರಿಂದ ಐದು ದಿನ ಮಳೆ ಭಾರೀ ಸಾಧ್ಯತೆ; ಮುಂಜಾಗ್ರತೆಗೆ ಸೂಚನೆ

Source: S.O. News Service | By MV Bhatkal | Published on 17th July 2019, 6:59 PM | Coastal News | Don't Miss |

ಕಾರವಾರ: ಜುಲೈ18ರಿಂದ 22ರವರೆಗೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು,  ಮೀನುಗಾರರು, ಪ್ರವಾಸಿಗರು ಅಗತ್ಯ ಮುಂಜಾಗ್ರತೆ ವಹಿಸುವಂತೆ ಅಪರ ಜಿಲ್ಲಾಧಿಕಾರಿ ನಾಗರಾಜ್ ಸಿಂಗ್ರೇರ್ ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದು ಜುಲೈ 18ರಿಂದ 22ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು, ಜಿಲ್ಲೆಯ ಪ್ರವಾಸದಲ್ಲಿರುವ ಪ್ರವಾಸಿಗರು ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್‍ರೂಮ್ ದೂರವಾಣಿ ಸಂಖ್ಯೆ 1077 ಅಥವಾ ವಾಟ್ಸ್‍ಆಪ್ ಸಂಖ್ಯೆ 9483511015 ಇಲ್ಲಿಗೆ ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ.

Read These Next

ಜೆಡಿಎಸ್ ಮತ ಬುಟ್ಟಿಗೆ ’ಕೈ’ ಹಾಕಿದ ಅಂಜಲಿ ತಾಯಿ ; ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮ ಗೌಡರ ಮನೆಗೆ ಭೇಟಿ

ಅಂಕೋಲಾ: ಉ.ಕ ಲೋಕಸಭಾ ಕ್ಷೇತ್ರದ ಅಂಕೋಲಾ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಹಾಲಕ್ಕಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿನ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...