ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ಮೃತ್ಯು

Source: Vb | By I.G. Bhatkali | Published on 1st May 2024, 9:13 AM | Coastal News | National News |

ಕಾಸರಗೋಡು: ಕಾರು ಮತ್ತು ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂಭತ್ತು ವರ್ಷದ ಬಾಲಕ ಸಹಿತ ಕಾಸರಗೋಡಿನ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಕಣ್ಣೂರು ಜಿಲ್ಲೆಯ ಚೆರುಕುನ್ನು ಸಮೀಪದ ಪುನ್ನಚ್ಚೇರಿ ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

ನೀಲೇಶ್ವರ ಕಾಲಿಚ್ಚಿನಡ್ಕದ ಶಾಸ್ತ್ರಂಪಾರ ನಿವಾಸಿ ಕೆ.ಎನ್. ಪದ್ಮಕುಮಾರ್(59), ಕರಿವೆಳ್ಳೂರು ಕೊಯಮ್ಮಲ್ ನಿವಾಸಿ ಕೃಷ್ಣನ್(65), ಅವರ ಪುತ್ರಿ ಅಜಿತಾ(35), ಅಜಿತಾರ ಪತಿ ಚಿತ್ತಾರಿಕಲ್ ಚೂರಿಕ್ಕಾಡ್ ನಿವಾಸಿ ಸಿ.ಸುಧಾಕರನ್ (52) ಮತ್ತು ಅಜಿತಾಳ ಸಹೋದರ ಪುತ್ರ ಆಕಾಶ್ (9) ಮೃತಪಟ್ಟವರು ಎಂದು ತಿಳಿದುಬಂದಿದೆ.

ಸೋಮವಾರ ರಾತ್ರಿ 10:45ರ ಸುಮಾರಿಗೆ ಪುನ್ನಚ್ಚೇರಿಯ ಪೆಟ್ರೋಲ್ ಬಂಕ್ ಬಳಿ ಈ ಅಪಘಾತ ಸಂಭವಿಸಿದೆ. ಪದ್ಮಕುಮಾರ್‌ರ ಪುತ್ರ ಗೌರವ್‌ ಕೋಝಿಕ್ಕೋಡ್‌ನ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಿಎಗೆ ಪ್ರವೇಶಾತಿ ದೊರೆತಿದ್ದು, ಸೋಮವಾರ ಆತನನ್ನು ಹಾಸ್ಟೆಲ್‌ಗೆ ದಾಖಲಿಸಲು ಕುಟುಂಬ ಸಮೇತ ತೆರಳಿದ್ದರು. ಗೌರವನನ್ನು ಹಾಸ್ಟೆಲ್‌ಗೆ ಸೇರಿಸಿ ಊರಿಗೆ ಹಿಂದಿರುಗುತ್ತಿದ್ದವೇಳೆ ಈ ಅಪಘಾತ ನಡೆದಿದೆ.

ಪದ್ಮಕುಮಾ‌ರ್ ಚಲಾಯಿಸುತ್ತಿದ್ದ ಕಾರಿಗೆ ಪುನ್ನಚ್ಚೇರಿ ಬಳಿ ಲಾರಿಯೊಂದು ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಇದೇ ವೇಳೆ ವಿರುದ್ಧ ದಿಕ್ಕಿನಲ್ಲಿ ಮಂಗಳೂರು ಕಡೆಯಿಂದ ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ಬರುತ್ತಿದ್ದಲಾರಿಗೆ ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಆಕಾಶ್ ಆಸ್ಪತ್ರೆಗೆ ಕರೆದೊಯ್ಯುವ ದಾರಿಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಅಪಘಾತದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ದೆ. ಲಾರಿ ಚಾಲಕ ಕೂಡಾ ಗಾಯಗೊಂಡಿದ್ದಾನೆ.

ಅಪಘಾತಕ್ಕೆ ಕಾರಣವಾದ ಎರಡು ಲಾರಿಗಳನ್ನು ಹಾಗೂ ಅವುಗಳ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಕಣ್ಣಾಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಅಕ್ರಮ ಗಣಿಗಾರಿಕೆ; ಬಂಧಿತ ರೌಡಿಶೀಟ‌ರ್ ಬಿಡುಗಡೆ ಮಾಡಲು ಪೊಲೀಸರಿಗೆ ಬೆದರಿಕೆ; ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಅಕ್ರಮ ಕಲ್ಲಿನಕೋರೆ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ವೇಳೆ ಠಾಣೆಗೆ ಬಂದು ಪೊಲೀಸರಿಗೆ ಬೆದರಿಕೆ ಹಾಕಿ ...

ಕುಂದಾಪುರ: ತಾಯಿಯ ಕೊಳೆತ ಮೃತದೇಹದೊಂದಿಗೆ 3 ದಿನ ಕಳೆದ ವಿಕಲಚೇತನ ಮಗಳು – ಆಸ್ಪತ್ರೆಯಲ್ಲಿ ನಿಧನ

ಮನೆಯಲ್ಲೇ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿದ್ದ ತಾಯಿಯ ಮೃತದೇಹದ ಜೊತೆ ಅನ್ನಾಹಾರ ಇಲ್ಲದೇ ಮೂರು ನಾಲ್ಕು ದಿನ ಕಳೆದ 32ರ ಹರೆಯದ ...

ರಸ್ತೆಯಲ್ಲಿ ಕಸ ಎಸೆಯುವುದನ್ನು ತಪ್ಪಿಸಲು ಹೆಬಳೆ ಪಂಚಾಯತ್ ವ್ಯಾಪ್ತಿಯಲ್ಲಿ ಸಿಸಿಟಿವಿ ಕ್ಯಾಮರಾ ಕಣ್ಗಾವಲು

ಸ್ಥಳೀಯ ಜನರ ಸಹಕಾರದಿಂದ ಹನೀಫಾಬಾದ್ ರಸ್ತೆಯಲ್ಲಿ ಮೂರು, ಜಾಮಿಯಾಬಾದ್ ರಸ್ತೆಯಲ್ಲಿ ಮೂರು, ಮಿನಾ ರಸ್ತೆಯಲ್ಲಿ ಒಂದು ಕ್ಯಾಮೆರಾ ...

ತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್ ಸರ್ವಾಧಿಕಾರದಿಂದ ದೇಶವನ್ನು ರಕ್ಷಿಸಬೇಕಿದೆ: ದಿಲ್ಲಿ ಸಿಎಂ

ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಬಳಿಕ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರು ಶುಕ್ರವಾರ ತಿಹಾರ್ ಜೈಲಿನಿಂದ ...

ಕೇಜ್ರವಾಲ್‌ಗೆ ಜೂ.1ರವರೆಗೆ ಮಧ್ಯಂತರ ಜಾಮೀನು; ಮುಖ್ಯಮಂತ್ರಿ ಕಚೇರಿಗೆ ಹೋಗಬಾರದು: ಸುಪ್ರೀಂ ಕೋರ್ಟ್

ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದಿಲ್ಲಿ ಮುಖ್ಯಮಂತ್ರಿ ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...