ಪ್ರವಾಹಭೀತಿ : ಮುನ್ನೆಚ್ಚರಿಕೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

Source: sonews | By Staff Correspondent | Published on 6th August 2019, 6:33 PM | Coastal News | Don't Miss |

ಕಾರವಾರ :  ಬೊಮ್ಮನಹಳ್ಳಿ, ಕೊಡಸಳ್ಳಿ ಹಾಗೂ ಕದ್ರಾ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆಯಾಗುತ್ತಿದ್ದು,  ಮೂರು ಜಲಾಶಯಗಳಿಂದಲೂ ನೀರು ಬಿಡಲಾಗುವುದು. ಈ ಭಾಗದ ನದಿಗಳು ಅಪಾಯ ಮಟ್ಟ ಮೀರಿ ಹರಿಯುವುದರಿಂದ ನದಿ ಪಾತ್ರದಲ್ಲಿ ವಾಸಿಸುವ ಜನರು ಎತ್ತರದ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ  ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಅವರು ಆದೇಶಿಸಿದ್ದಾರೆ. 
  
ಈಗಾಗಲೇ ಸಮೀಪದ ಶಾಲೆ, ಅಂಗನವಾಡಿ ಮತ್ತು ಇತರಡೆ ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರು ಸ್ಥಳಾಂತರಗೊಂಡು, ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಕೋರಿದ್ದಾರೆ. 
  
ಅಲ್ಲದೇ ಡಂಗೂರ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದ್ದರೂ ಸಹ ಕೆಲವರು ಸ್ಥಳಾಂತರಗೊಂಡಿರುವದಿಲ್ಲ. ಈ ಕೂಡಲೆ ಅಪಾಯದಲ್ಲಿರುವ ಎಲ್ಲರೂ ಗಂಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ. 
  
ಕದ್ರಾ ಜಲಾಶಯದಿಂದ 1.4 ಲಕ್ಷ ಕ್ಯೂಸೆಕ್ಸ್ ನೀರು ಬಿಡಲಾಗುತ್ತಿದ್ದು, ಕಾರವಾರದ ವರೆಗೆ ನದಿಗಳು ಅಪಾಯ ಮಟ್ಟ ಮೀರಿ ಹರಿಯಲಿವೆ ಎಂದು ಅವರು ತಿಳಿಸಿದ್ದಾರೆ. 
 
Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...