ಕಲಘಟಗಿ ತಾಲೂಕಿನ 28 ಗ್ರಾಮ ಪಂಚಾಯತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತ: ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ

Source: SO News | By Laxmi Tanaya | Published on 15th January 2021, 9:10 PM | State News | Don't Miss |

ಧಾರವಾಡ : ರಾಜ್ಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ  ಕಲಘಟಗಿ ತಾಲೂಕಿನ 28 ಗ್ರಾಮ ಪಂಚಾಯತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು  ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಶುಕ್ರವಾರ ಕಲಘಟಗಿ ಪಟ್ಟಣದ ಗುಡ್ ನ್ಯೂಜ್ ಕಾಲೇಜ ಸಭಾಭವನದಲ್ಲಿ ಇಂದು ಬೆಳಿಗ್ಗೆ ಗ್ರಾಮಪಂಚಾಯತ್ ನೂತನ ಸದಸ್ಯರ ಸಭೆ ಜರುಗಿಸಿ, ಅವರ ಸಮ್ಮುಖದಲ್ಲಿಯೇ ಮೀಸಲಾತಿ ನಿಗದಿಪಡಿಸಿ ಪ್ರಕಟಿಸಿದರು. 

ಗ್ರಾಮಪಂಚಾಯತಿಗಳ ಅಧ್ಯಕ್ಷ, ಉಪಾಧ್ಯಕ ಸ್ಥಾನಗಳ ಮೀಸಲಾತಿ ನಿಗದಿಪಡಿಸುವ ಕಾರ್ಯದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ತಹಶೀಲ್ದಾರ ಅಶೋಕ ಶಿಗ್ಗಾಂವಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಎಸ್. ಮೇಟಿ, ಜಿಲ್ಲಾಧಿಕಾರಿ ಕಚೇರಿಯ ಚುನಾವಣೆ ಶಾಖೆಯ ತಹಸಿಲ್ದಾರ ಎಚ್.ಎನ್.ಬಡಿಗೇರ, ಡಿ.ಎನ್. ಕಸಮಳಗಿ, ವರುಣ ನಾಯ್ಕ, ರುದ್ರೇಶ ಎಮ್., ಜಿಲ್ಲಾ ಎನ್‍ಐಸಿ ಅಧಿಕಾರಿ ಮೀನಾಕುಮಾರಿ, ಸಹಾಯಕ ಅಧಿಕಾರಿ ರಾಜು ಸೇರಿದಂತೆ ಇತರರು ಭಾಗವಹಿಸಿ ಕರ್ತವ್ಯ ನಿರ್ವಹಿಸಿದರು.
 
 ಕಲಘಟಗಿ ತಾಲೂಕಿನ 28 ಗ್ರಾಮ ಪಂಚಾಯತ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿ ವಿವರ:
ಬೋಗೆನಗರಕೊಪ್ಪ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ, ಬೆಲವಂತರ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ದೇವಿಕೊಪ್ಪ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಹಿರೇಹೊನ್ನಿಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಬ’ ವರ್ಗ, ದಾಸ್ತಿಕೊಪ್ಪ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಬಮ್ಮಿಗಟ್ಟಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ತಾವರಗೇರಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಸೂರಶೆಟ್ಟಿಕೊಪ್ಪ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮಹಿಳೆ, ತಂಬೂರ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಬ’ ವರ್ಗ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ದುಮ್ಮವಾಡ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಪಂಗಡ ಮಹಿಳೆ, ಮುತ್ತಗಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ  ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ  ಸಾಮಾನ್ಯ ಮಹಿಳೆ,  ಕುರುವಿನಕೊಪ್ಪ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ,  ಜಿ-ಬಸವನಕೊಪ್ಪ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಗ್ನಿಕೇರಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಜಿ-ಹುಲಿಕಟ್ಟಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಬಿರವಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮಹಿಳೆ,  ಮುಕ್ಕಲ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಸೂಳಿಕಟ್ಟಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ, ಗಂಭ್ಯಾಪೂರ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ದೇವಲಿಂಗಿಕೊಪ್ಪ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ, ಬೇಲೂರ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಗಂಜಿಕಟ್ಟಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ, ಜಿನ್ನೂರ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ, ಸಂಗಮೇಶ್ವರ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ, ಗಳಗಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಬ’ ವರ್ಗ ಮಹಿಳೆ, ಮಿಶ್ರಿಕೋಟಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ, ಮದಕಿಹೊನ್ನಿಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ತಬಕದಹೊನ್ನಿಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಪಂಗಡ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ವರ್ಗಕ್ಕೆ ಮೀಸಲಾತಿಯನ್ನು ನಿಗದಿಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಕಟಿಸಿದ್ದಾರೆ. 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...