ಜಿಲ್ಲೆಯ ಮದುವೆ ಹಾಗೂ ಇತರೆ ಸಮಾರಂಭಗಳ ಆಯೋಜನೆಗೆ ಪಾಸ್ ಕಡ್ಡಾಯ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ್

Source: SO News | By Laxmi Tanaya | Published on 20th April 2021, 9:13 AM | State News | Don't Miss |

ಧಾರವಾಡ : ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆ ಉಲ್ಬಣವಾಗಿದ್ದು, ನಿಯಂತ್ರಣ ಕಾರ್ಯ ಅತ್ಯವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜರುಗುವ ಮದುವೆ ಹಾಗೂ ಇತರೆ ಸಭೆ ಸಮಾರಂಭಗಳಿಗೆ ಏ. 16 ರಂದು ಹೊರಡಿಸಿದ ಸರ್ಕಾರದ ಸುತ್ತೋಲೆಯಲ್ಲಿ ಸೂಚಿಸಿರುವಂತೆ ಸೇರಬಹುದಾದ ಸಂಖ್ಯೆಗನುಗುಣವಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಎಲ್ಲ ವಲಯ ಆಯುಕ್ತರು ಹಾಗೂ ಜಿಲ್ಲೆಯಲ್ಲಿ ಎಲ್ಲ ತಹಶೀಲ್ದಾರವರು ‘’ಪಾಸ್’’ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಿದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.   

ಎಪ್ರಿಲ್ 17 ರಂದು ಜಿಲ್ಲಾಧಿಕಾರಿಗಳೊಂದಿಗೆ ಜರುಗಿದ ವಿಡಿಯೋ ಸಂವಾದದಲ್ಲಿ ಗೃಹ ಸಚಿವರು ನೀಡಿದ ನಿರ್ದೇಶನದಂತೆ ಪಾಸ್ ವಿತರಿಸುವ ಮೊದಲು ಪೊಲೀಸ್ ಇಲಾಖೆಯಿಂದ ನಿರಾಪೇಕ್ಷಣ ಪತ್ರವನ್ನು ಪಡೆದ ನಂತರ ‘’ಪಾಸ್’’ ನೀಡಬೇಕು.  ಒಂದು ವೇಳೆ ಪಾಸ್ ಪಡೆಯದೇ ತಮ್ಮ ವಲಯ ಹಾಗೂ ತಾಲ್ಲೂಕು ವ್ಯಾಪ್ತಿಯಲ್ಲಿ ಮದುವೆ ಹಾಗೂ ಇತರೆ ಸಭೆ ಸಮಾರಂಭಗಳು ಜರುಗುತ್ತಿದ್ದಲ್ಲಿ ಅಂತಹವರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಹಾಗೂ ಅಂತಹ ಸಭೆ ಸಮಾರಂಭಗಳು ಜರುಗುವ ಕಲ್ಯಾಣ ಮಂಟಪ ಹಾಗೂ ಇತರೆ ಸಭಾಂಗಣಗಳನ್ನು ‘’ಸೀಜ್’’ ಮಾಡಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಬೇಕು.  ಪಾಸ್ ನೀಡಿದ ಸಮಾರಂಭಗಳಲ್ಲಿ ನಿಗದಿತ ಸಂಖ್ಯೆಯನ್ನು ಮೀರಿ ಜನರು ಸೇರಿದ್ದಲ್ಲಿ ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು, ಧಾರವಾಡ ಉಪವಿಭಾಗಾಧಿಕಾರಿಗಳು ಮತ್ತು ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರರು ಅಂತಹ ಸಭೆ, ಸಮಾರಂಭಗಳನ್ನು ತಕ್ಷಣ ಸ್ಥಗಿತಗೊಳಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶಿಸಿದ್ದಾರೆ.

ಸಭೆ ಸಮಾರಂಭಗಳಲ್ಲಿ ಜನಮಿತಿಗೊಳಿಸಿ ಎ.16 ರಂದು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳು :  ಕೋವಿಡ್ 2ನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರ್ಚ್ 24 ರಂದು ಸಭೆ ಸಮಾರಂಭಗಳಲ್ಲಿ ಜನ ಸೇರುವ ಮಿತಿ ಮತ್ತು ದಂಡ ವಿಧಿಸುವ ಬಗ್ಗೆ ಆದೇಶ ಹೊರಡಿಸಿತ್ತು.   ಮತ್ತೇ  ಏಪ್ರಿಲ್ 16 ರಂದು ಕೆಲವು ಅಂಶಗಳನ್ನು ಪರಿಷ್ಕರಿಸಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಅದರನ್ವಯ ಸಭೆ ಸಮಾರಂಭಗಳಲ್ಲಿ ಸೇರುವ ಜನಸಂಖ್ಯೆ ಮಿತಿ ಮತ್ತು ದಂಡ ವಿಧಿಸುವ ಬಗ್ಗೆ ಆದೇಶ ಹೊರಡಿಸಿದೆ.

 ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯಲ್ಲಿ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಕಾಪಾಡದಿದ್ದಲ್ಲಿ ಪಾಲಿಕೆಯ ಮಾರ್ಷಲ್‍ಗಳು, ಪೊಲೀಸ್ ಸಿಬ್ಬಂದಿ, ಮುನ್ಸಿಪಲ್ ಕಾರ್ಪೊರೇಶನ್‍ಗಳ ಹೆಲ್ತ್ ಇನ್ಸ್‍ಪೆಕ್ಟರ್‍ಗಳು ಹಾಗೂ ಬಿಲ್ ಕಲೆಕ್ಟರ್‍ಗಳು 250/- ರೂ. ದಂಡ ವಿಧಿಸುತ್ತಾರೆ. ಮುನ್ಸಿಪಲ್ ಕಾರ್ಪೊರೇಶನ್‍ಗಳನ್ನು ಹೊರತುಪಡಿಸಿ ಇತರ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿ, ನಗರ ಸ್ಥಳೀಯ ಸಂಸ್ಥೆಗಳ ಹೆಲ್ತ್ ಇನ್ಸ್‍ಪೆಕ್ಟರ್‍ಗಳು, ನಗರ ಸ್ಥಳೀಯ ಸಂಸ್ಥೆಗಳ ಬಿಲ್ ಕಲೆಕ್ಟರ್‍ಗಳು ಮತ್ತು ಗ್ರಾಮೀಣ ಭಾಗದಲ್ಲಿ ಪೊಲೀಸ್ ಸಿಬ್ಬಂದಿ, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗ್ರಾ.ಪಂ.ಕಾರ್ಯದರ್ಶಿಗಳು, 100/- ರೂ.ಗಳನ್ನು  ದಂಡ ವಿಧಿಸಬಹುದು.

ಮದುವೆ ಸಮಾರಂಭ: ತೆರೆದ ಪ್ರದೇಶದಲ್ಲಿ 200 ಜನ ಮೀರದಂತೆ ಹಾಗೂ ಕಲ್ಯಾಣ ಮಂಟಪ, ಸಭಾಂಗಣ ಹಾಲ್ ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 100 ಜನ ಮೀರದಂತೆ ಭಾಗವಹಿಸಲು ಅನುಮತಿ ನೀಡಲಾಗಿದೆ.

ಜನ್ಮದಿನ ಹಾಗೂ  ಇತರೆ ಆಚರಣೆಗಳು : ತೆರೆದ ಪ್ರದೇಶಗಳಲ್ಲಿ 50 ಜನ ಮೀರದಂತೆ ಸಭಾಂಗಣಗಳು, ಹಾಲ್ ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನ ಮೀರದಂತೆ ಭಾಗವಹಿಸಬಹುದು.

ನಿಧನ ಮತ್ತು ಶವ ಸಂಸ್ಕಾರ ಕಾರ್ಯ: ತೆರೆದ ಪ್ರದೇಶಗಳಲ್ಲಿ 50 ಜನ ಮೀರದಂತೆ ಸಭಾಂಗಣಗಳು, ಹಾಲ್‍ಗಳು ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನ ಮೀರದಂತೆ ಭಾಗವಹಿಸಬಹುದು

ಅಂತ್ಯಕ್ರಿಯೆ: ಅಂತ್ಯಕ್ರಿಯೆಯಲ್ಲಿ 25 ಜನ ಮೀರದಂತೆ ಭಾಗವಹಿಸಬಹುದು.

 ಧಾರ್ಮಿಕ ಆಚರಣೆ ಹಾಗೂ ಸಮಾರಂಭಗಳನ್ನು ನಿಷೇಧಿಸಲಾಗಿದೆ. ರಾಜಕೀಯ ಆಚರಣೆಗಳು ಮತ್ತು ಸಮಾರಂಭಗಳಲ್ಲಿ 200 ಜನರಿಗೆ ಮೀರದಂತೆ ಅವಕಾಶ ಕಲ್ಪಿಸಲಾಗಿದೆ. ಇತರೆ ಸಮಾರಂಭಗಳಲ್ಲಿ ಹಾಲ್‍ನ ವಿಸ್ತೀರ್ಣಕ್ಕೆ ಅನುಗುಣವಾಗಿ 50 ಜನ ಮೀರದಂತೆ ಪಾಲ್ಗೊಳ್ಳಬಹುದು.  

 ಮೇಲೆ ತಿಳಿಸಿದ ಎಲ್ಲ ಸಂದರ್ಭಗಳಲ್ಲಿ ಜನರು ಕಡ್ಡಾಯವಾಗಿ ಭಾರತ ಸರ್ಕಾರ ಮತ್ತು ರಾಜ್ಯಸರ್ಕಾರದ ಸಂಬಂಧಪಟ್ಟ ಇಲಾಖೆಗಳು ಹೊರಡಿಸಿರುವ ಪ್ರಮಾಣಿತ ಕಾರ್ಯವಿಧಾನ (ಎಸ್‍ಓಪಿ) ವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮತ್ತು ಸಭಾಂಗಣ, ಕಲ್ಯಾಣ ಮಂಟಪ, ಸಿನಿಮಾ ಮಂದಿರ, ಹಾಲ್‍ಗಳು ಮತ್ತು ಆಚರಣೆಗಾಗಿ ಜನ ಸೇರುವ ಇತ್ಯಾದಿ ಪ್ರದೇಶಗಳ ಉಸ್ತುವಾರಿ ಹೊಂದಿದವರು ಕಡ್ಡಾಯವಾಗಿ ಸ್ಯಾನಿಟೈಝೇಷನ್ ಕ್ರಮಗಳನ್ನು ಅನುಸರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಮತ್ತು ಆದೇಶ ಪಾಲನೆಯಲ್ಲಿ ಲೋಪವೆಸಗುವಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದದ ಇತರ ಕಾನೂನು ಉಪಬಂಧಗಳ ಅನುಸಾರ ಸರ್ಕಾರದ  ಮಾರ್ಗಸೂಚಿಗಳನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಿದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.   
 

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...