ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಶೇ.81.47 ರಷ್ಟು ಮತದಾನ

Source: sonews | By Staff Correspondent | Published on 28th October 2020, 8:20 PM | State News |

ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಶೇ.81.47 ರಷ್ಟು ಮತದಾನವಾಗಿದೆ. ಬೆಳಿಗ್ಗೆ ನೀರಸವಾಗಿ ಪ್ರಾರಂಭವಾದ ಮತದಾನ, ಮಧ್ಯಾಹ್ನದ ಹೊತ್ತಿಗೆ ಚುರುಕು ಪಡೆದುಕೊಂಡಿತು. ಮತದಾರರು ಉದ್ದನೆಯ ಸಾಲುಗಳಲ್ಲಿ ನಿಂತು ಮತದಾನ ಮಾಡಿದರು.

ತಾಲ್ಲೂಕಿನಲ್ಲಿ ಒಟ್ಟು 4739 ಮತದಾರರಿದ್ದು, ಆ ಪೈಕಿ 3861 ಮತದಾರರು ಮತ ಚಲಾಯಿಸಿದ್ದಾರೆ. 3095 ಪುರುಷ ಮತದಾರರ ಪೈಕಿ 2547 ಹಾಗೂ 1644 ಮಹಿಳಾ ಮತದಾರರ ಪೈಕಿ 1314 ಮತದಾರರು ಮತದಾನ ಮಾಡಿದ್ದಾರೆ.

ಉಪ ವಿಭಾಗಾಧಿಕಾರಿ ವಿ.ಸೋಮಶೇಖರ್‌, ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌, ಉಪ ತಹಶೀಲ್ದಾರ್ ಮಲ್ಲೇಶ್‌, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೊರೊನಾ ವೈರಾಣು ಹರಡದಂತೆ ಅಗತ್ಯ ಕ್ರಮ ಕೈಗೊಂಡಿದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...