60 ವರ್ಷ ದಾಟಿದವರಿಗೆ ಇನ್ನು ಮುಂದೆ ಪಿಂಚಣಿ ಸುಲಭ-ಆರ್. ಅಶೋಕ್

Source: uni | Published on 12th September 2020, 12:52 AM | State News | Don't Miss |

ತುಮಕೂರು: ಇನ್ನು ಮುಂದೆ 60 ವರ್ಷ ಮೀರಿದ ಎಲ್ಲರಿಗೂ ವೃದ್ಧಾಪ್ಯ ಪಿಂಚಣಿ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಪಿಂಚಣಿಗಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಇನ್ನು ಮುಂದೆ  60 ವರ್ಷ ಮೀರಿದವರು ಅರ್ಜಿ ಸಲ್ಲಿಸದೇ ಇದ್ದರೂ ಪಿಂಚಣಿ ಪಡೆಯುವ ಸೌಲಭ್ಯ ಕಲ್ಪಿಸಲಾಗುವುದು ಎಂದರು.
ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 60 ವರ್ಷ ವಯೋಮಿತಿ ಮೀರಿದವರ ದಾಖಲೆಗಳು ನಮ್ಮಲ್ಲಿಯೇ ಲಭ್ಯವಿದ್ದು, 60 ವರ್ಷ ಮೀರಿದವರು ಪಿಂಚಣಿ ಪಡೆಯಲು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲಾಗುವುದು ಎಂದು ಹೇಳಿದರು.
ಈ ದಿಸೆಯಲ್ಲಿ  ಉಡುಪಿ ಹಾಗೂ ಬಳ್ಳಾರಿಯಲ್ಲಿ ಈಗಾಗಲೇ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಅಳವಡಿಸಲಾಗಿದ್ದು, 10 ಸಾವಿರ ಮಂದಿಗೆ ಈ ರೀತಿ ಪಿಂಚಣಿ ನೀಡಲಾಗಿದೆ ಎಂದರು. 
ಇದೀಗ ತುಮಕೂರು ಜಿಲ್ಲೆಯಲ್ಲಿಯೂ ಸಹ ಈ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗುವುದು. ಮುಂದಿನ ಎರಡು ತಿಂಗಳೊಳಗೆ ಈ ಯೋಜನೆಯನ್ನು ರಾಜ್ಯವ್ಯಾಪಿ ಅನುಷ್ಠಾನಕ್ಕೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಇಂತಹ ಕ್ರಮಗಳಿಂದ ಪಿಂಚಣಿ ವ್ಯವಸ್ಥೆಯಲ್ಲಿ ಆಗುತ್ತಿರುವ ಗೊಂದಲಗಳನ್ನು ಬಗೆಹರಿಸಿಕೊಳ್ಳಬಹುದಾಗಿದ್ದು, ತ್ವರಿತವಾಗಿ ಸರ್ಕಾರಿ ಸೌಲಭ್ಯ ದೊರಕಿಸಿಕೊಡಲು ಸಹಕಾರಿಯಾಗಲಿದೆ ಎಂದು ಹೇಳಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...