ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

Source: SO News | By Laxmi Tanaya | Published on 11th September 2020, 10:11 PM | State News | Don't Miss |

ಧಾರವಾಡ :  ಅರಣ್ಯ ನಾಶದಿಂದ ಅಭಿವೃದ್ಧಿ ಕುಂಠಿತವಾಗುತ್ತದೆ. ನೈಸರ್ಗಿಕ ಸಂಪತ್ತಿನ ಅಸಮತೋಲನದಿಂದಾಗಿ ನಿಸರ್ಗದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. 

ಶುಕ್ರವಾರ ಅವರು, ಅರಣ್ಯ ಇಲಾಖೆಯ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. 

ಅರಣ್ಯ ಸಂಪತ್ತು, ವನ್ಯಜೀವಿಗಳು ಮಾನವ ಕುಲದ ಒಂದು ಭಾಗ. ಪರಸ್ಪರ ಪೂರಕವಾಗಿ ಬದುಕಿದರೆ ಮಾತ್ರ ಮಾನವ ಜೀವಿಗಳಿಗೆ ಉಳಿಗಾಲವಿದೆ. ಅರಣ್ಯ ನಾಶದಿಂದ ಮಣ್ಣು, ನೀರು ಹಾಗೂ ವಾಯು ಮಲಿನವಾಗಿ ನಾಶವಾಗುತ್ತವೆ. ಇದರಿಂದ ಅತಿವೃಷ್ಟಿ, ಅನಾವೃಷ್ಟಿ ಸಂಭವಿಸುತ್ತವೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು. 

ಅಕಾಲಿಕ ಮಳೆಗೆ ನಿಸರ್ಗದ ಅಸಮತೋಲನ ಕಾರಣವಾಗಿದೆ. ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲ ಉದ್ಯಮಗಳು ಸಂಕಷ್ಟಕ್ಕೆ ಸಿಲುಕಿವೆ. ಪ್ರತಿಯೊಬ್ಬ ನಾಗರಿಕ ತನ್ನ ಸುತ್ತಲಿನ ಪರಿಸರ ರಕ್ಷಣೆ, ಅರಣ್ಯ ನಾಶ ತಡೆಯುವುದು, ಮಳೆ ನೀರು ಸಂಗ್ರಹ, ಜಲ ಮರುಪೂರ್ಣದಂತಹ ಕಾರ್ಯಗಳನ್ನು ತನ್ನ ಕರ್ತವ್ಯಗಳೆಂದು ಭಾವಿಸಿ, ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು. 

ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಅಡಿಗ ಮಾತನಾಡಿ, ಮನುಷ್ಯನ ಸ್ವಾರ್ಥ ನಿಲ್ಲಬೇಕು. ಉತ್ತಮ ಆಹಾರ, ಒಳ್ಳೆಯ ಗಾಳಿ, ಫಲವತ್ತಾದ ಮಣ್ಣು ದೊರಕಲು ಅರಣ್ಯವೆ ಕಾರಣ. ಅರಣ್ಯವನ್ನು ನಾವು ಕಾಪಾಡಿದರೆ ಮಾತ್ರ ಅದು ನಮ್ಮನ್ನು ಕಾಪಾಡುತ್ತದೆ ಎಂದು ಹೇಳಿದರು. 

ಎಲೆ ಮರೆಯ ಕಾಯಿಯಂತೆ ಅರಣ್ಯ ಇಲಾಖೆ ಸಿಬ್ಬಂದಿ ಶ್ರಮಿಸುತ್ತಾರೆ. ಅರಣ್ಯಕ್ಕಾಗಿ ಬಲಿದಾನ ಮಾಡಿದ ಮಹನೀಯರು ಧನ್ಯರು. ದೇಶದ ಪ್ರಜೆಗಳಾಗಿ ನಾವು ಅರಣ್ಯ ರಕ್ಷಕರೊಂದಿಗೆ ಅರಣ್ಯ ಕಾಪಾಡಲು ಕೈ ಜೋಡಿಸಿ, ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು. 

ಅರಣ್ಯ ಸಂಪತ್ತಿನ ಸಂರಕ್ಷಣೆಗಾಗಿ ಮಡಿದ, ಅರಣ್ಯ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರಧಾನ ನ್ಯಾಯಾಧೀಶರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಸಕ್ತ ಸಾಲಿನಲ್ಲಿ ಮಡಿದ ಧಾರವಾಡ ಅರಣ್ಯ ವಿಭಾಗದ ಓರ್ವ ಸಿಬ್ಬಂದಿ ಸೇರಿದಂತೆ ರಾಜ್ಯದ ಒಟ್ಟು 44 ಸಿಬ್ಬಂದಿಗಳಿಗೆ ಪುಷ್ಪ ಹಾಗೂ ನುಡಿ ನಮನ ಸಲ್ಲಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧಾರವಾಡ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ವಹಿಸಿದ್ದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ ಕ್ಷೀರಸಾಗರ  ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ಅರಣ್ಯ ಸೇವೆ ಅಧಿಕಾರಿಗಳಾದ ಕೆ.ಟಿ ಹನಮಂತಪ್ಪ, ಕೃಷ್ಣ ಭಾಜಪೇಯಿ, ದೀಪಿಕಾ ಭಾಜಪೇಯಿ, ಸೋನಲ್ ವೃಷ್ಣಿ , ಉಪ ಪೊಲೀಸ್ ಆಯುಕ್ತ ಕೃಷ್ಣಕಾಂತ ಜಿ, ಉಪವಿಭಾಗಾಧಿಕಾರಿ ಡಾ.ಗೋಪಾಲ ಕೃಷ್ಣ ಬಿ. ಸೇರಿದಂತೆ ಅರಣ್ಯ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು, ನಿವೃತ್ತ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳ ಸಂಘದ ಪದಾಧಿಕಾರಿಗಳು, ಅರಣ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...