ಅರಣ್ಯ ಇಲಾಖಾ ಸೇವೆ ಎಲೆಮರೆ ಕಾಯಿಯಂತೆ: ಜಿಲ್ಲಾಧಿಕಾರಿ

Source: so news | Published on 12th September 2019, 12:19 AM | State News | Don't Miss |

ಹಾಸನ: ಅರಣ್ಯ ಇಲಾಖೆಯ ಸೇವೆ ಎಲೆಮರೆ ಕಾಯಿಯಂತೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದರು.
ಅರಣ್ಯ ಇಲಾಖೆ ವತಿಯಿಂದ ಜಿಲ್ಲಾ ಅರಣ್ಯ ಭವನದ ಆವರಣದಲ್ಲಿಂದು ಆಯೋಜಿಸಲಾಗಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು ಅದನ್ನು ಮುಂದಿನ ಪೀಳಿಗೆಗಾಗಿ ಉಳಿಸಿ ಬೆಳಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಅರಣ್ಯ ಸಂರಕ್ಷಣೆಯ ಜೊತೆಗೆ ತಮ್ಮ ಪ್ರಾಣವನ್ನು ಲೆಕ್ಕಿಸದೆ ವನ್ಯ ಜೀವಿಗಳಿಂದ ಜನರನ್ನು ರಕ್ಷಿಸುವ ಕೆಲಸವನ್ನು ಅರಣ್ಯ ಇಲಾಖೆ ಅಧಿಕಾರಿಗಳು ನಿರ್ವಹಿಸುತ್ತಿದ್ದು, ಇಂತಹ ನಿಸ್ವಾರ್ಥ ಹಾಗೂ ತ್ಯಾಗಮಯ ಕಾರ್ಯವೈಖರಿಯಲಿ ಜಿಲ್ಲೆಯ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿರುವುದು ಶ್ಲಾಘನೀಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆಯ ಕಾರ್ಯಚಟುವಟಿಕೆಯ ಬಗ್ಗೆ ಅರಿವು ಅಗತ್ಯ ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಇಲಾಖೆ ಗಮನ ಹರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಕಾರ್ಯಕ್ರಮದಲ್ಲಿ ನೆರೆದಿದ್ದ ಗಣ್ಯರೆಲ್ಲರೂ ಹುತಾತ್ಮ ಸ್ಥಂಭಕ್ಕೆ ಹೂ ಗುಚ್ಛ ಅರ್ಪಿಸುವ ಮೂಲಕ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಾ ಹುತಾತ್ಮರಾದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಗೌರವ ಸಮರ್ಪಣೆ ಮಾಡಿದರು.
ಹಾಸನ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಆರ್. ನಟೇಶ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ಕೆ ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ರಾಮ್ ನಿವಾಸ್ ಸೆಪೆಟ್, ಕೆ.ಎಸ್.ಆರ್.ಪಿ. 11ನೇ ಬೆಟಾಲಿಯನ್‍ನ ಅಸಿಸ್ಟೇಂಟ್ ಕಮಾಂಡೆಂಟ್ ಮಹದೇವನ್, ಜಿಲ್ಲಾ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ. ಸಿವರಾಂ ಬಾಬು, ಸಾಮಾಜಿಕ ಅರಣ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜೆ.ಜಿ. ರವಿ, ಜಿಲ್ಲಾ ಅರಣ್ಯ ಸಂಚಾರಿ ದಳ ಹಾಗೂ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆಚ್. ಅನುಪಮ ಭಾಗವಹಿಸಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...