ನಾಗಾಲ್ಯಾಂಡ್ ನ ಮಾಜಿ ರಾಜ್ಯಪಾಲ ಅಶ್ಚನಿ ಕುಮಾರ್ ಆತ್ಮಹತ್ಯೆ

Source: sonews | By Staff Correspondent | Published on 7th October 2020, 10:01 PM | National News |

ಹೊಸದಿಲ್ಲಿ: ಸಿಬಿಐನ ಮಾಜಿ ನಿರ್ದೇಶಕ ಹಾಗೂ ನಾಗಾಲ್ಯಾಂಡ್ ನ ಮಾಜಿ ರಾಜ್ಯಪಾಲ ಅಶ್ಚನಿ ಕುಮಾರ್ ಶಿಮ್ಲಾದಲ್ಲಿರುವ ತಮ್ಮ ಮನೆಯಲ್ಲಿ ಬುಧವಾರ ರಾತ್ರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು,  ಅವರಿಗೆ 69 ವರ್ಷ ವಯಸ್ಸಾಗಿತ್ತು.

ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೋಹಿತ್ ಚಾವ್ಲಾ ಘಟನೆಯನ್ನು ಖಚಿತಪಡಿಸಿದ್ದು, ಅಶ್ವನಿ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೊಂದು ಆಘಾತಕಾರಿ ಬೆಳವಣಿಗೆ ಎಂದು ಅವರು ಹೇಳಿದ್ದಾಗಿ ಸುದ್ದಿಸಂಸ್ಥೆ ಎಎನ್ ಐ ತಿಳಿಸಿದೆ.

ಕುಮಾರ್ ಅವರು ಕೆಲವು ವಾರಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಪೊಲೀಸರು ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪೊಲೀಸ್ ಅಧಿಕಾರಿಗಳ ತಂಡ, ಶಿಮ್ಲಾ ಇಂದಿರಾಗಾಂಧಿ ಮೆಡಿಕಲ್ ಕಾಲೇಜಿನ ಓರ್ವರು ಕುಮಾರ್ ಅವರ ನಿವಾಸಕ್ಕೆ ಧಾವಿಸಿ ಬಂಧಿದ್ದರು  

ಹಿಮಾಚಲಪ್ರದೇಶ ಕೇಡರ್ ನ ನಿವೃತ್ತ ಐಪಿಎಸ್ ಅಧಿಕಾರಿಯಾಗಿದ್ದ ಅಶ್ವನಿ ಕುಮಾರ್ 2008ರಿಂದ 2010ರ ತನಕ ಎರಡು ವರ್ಷಗಳ ಅವಧಿಗೆ ಸಿಬಿಐನ ನಿರ್ದೇಶಕರಾಗಿ ಸೇವೆ ಸಲ್ಲಿಸುವ ಮೊದಲು 2006 ಹಾಗೂ 2008ರ ನಡುವೆ ಹಿಮಾಚಲಪ್ರದೇಶ ರಾಜ್ಯದ ಡಿಜಿಪಿ ಆಗಿದ್ದರು.

2013 ಹಾಗೂ 2014ರಲ್ಲಿ ನಾಗಾಲ್ಯಾಂಡ್ ನ ರಾಜ್ಯಪಾಲರಾಗಿದ್ದರು. ಈ ಅವಧಿಯಲ್ಲಿ ಸ್ವಲ್ಪ ಸಮಯ ಮಣಿಪುರದ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದರು

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...