ಬಿಜೆಪಿ ಗೆ ಬಿಗ್ ಶಾಕ್; ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸಿದ ಮಾಜಿ ಸಿಎಂ

Source: SOnews | By Staff Correspondent | Published on 16th April 2023, 12:33 AM | State News |

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ (BJP) ಹೈಕಮಾಂಡ್‌ ಸೂಚಿಸಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.

ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ವರಿಷ್ಠರ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಈ ನಿರ್ಧಾರ ಪ್ರಕಟಿಸಿದರು. 

''ನಾಳೆ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಬಳಿಕ ನನ್ನ ಮುಂದಿನ ನಿಲುವು ಏನೆಂದು ಹೇಳುತ್ತೇನೆ'' ಎಂದು ತಿಳಿಸಿದರು. 

''ರಾಜ್ಯದಲ್ಲಿ ಲಿಂಗಾಯತ ನಾಯಕರನ್ನು ಟಾರ್ಗೆಟ್ ಮಾಡಿದ್ದು, ನನ್ನ ಮೇಲೆ ಯಾವುದೇ ಭ್ರಷ್ಟಾಚಾರದ ಆರೋಪ ಇಲ್ಲದಿದ್ದರೂ, ನನಗೆ ಟಿಕೆಟ್ ಸಿಕ್ಕಿಲ್ಲ'' ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಇಂದು ರಾತ್ರಿ ಜಗದೀಶ್ ಶೆಟ್ಟರ್​ ಮನವೊಲಿಸುವ ಪ್ರಯತ್ನ ನಡೆಸಿದ್ದರು. 

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಸೇರಿದಂತೆ 12 ಕ್ಷೇತ್ರಗಳಿಗೆ ಬಿಜೆಪಿ ಇನ್ನಷ್ಟೇ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ. 

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...