ಬೆಂಗಳೂರು: ದೇವೇಗೌಡ ದಂಪತಿಗೆ ಕೊರೋನ ಪಾಸಿಟಿವ್

Source: VB | By S O News | Published on 3rd April 2021, 12:55 AM | National News |

ಬೆಂಗಳೂರು: ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷದ ವರಿಷ್ಠ ಹಾಗೂಮಾಜಿಪ್ರಧಾನಿ ಎಚ್.ಡಿ. ದೇವೇಗೌಡ ಮತ್ತವರ ಪತ್ನಿ ಚೆನ್ನಮ್ಮ ಅವರಿಗೆ ಕೋವಿಡ್-19 ಸೋಂಕು ತಗಲಿದ್ದು, ದಂಪತಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಪತ್ನಿ ಚೆನ್ನಮ್ಮ ಅವರಿಗೆ ಮನೆಯಲ್ಲೇ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ದೇವೇಗೌಡ ಅವರು ಟ್ವಿಟರ್ ಮೂಲಕ ದೃಢಪಡಿಸಿದ್ದಾರೆ. 'ನನ್ನ ಹೆಂಡತಿ ಚೆನ್ನಮ್ಮ ಮತ್ತು ನಾನು ಕೋವಿಡ್-19 ತಪಾಸಣೆಗೆ ಒಳಪಟ್ಟಾಗ ಸೋಂಕು ದೃಢಪಟ್ಟಿದೆ.
 

ಕೊರೋನ ಪಾಸಿಟಿವ್
ಆ ಕಾರಣಕ್ಕಾಗಿ ನಾವು ಇತರ ಕುಟುಂಬ ಸದಸ್ಯರೊಂದಿಗೆ ಸ್ವಯಂ-ಪ್ರತ್ಯೇಕಗೊಂಡಿರುತ್ತೇವೆ. ಕೆಲವು ದಿನಗಳಿಂದ ನಮ್ಮೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ತಮ್ಮನ್ನು ತಾವು ಪರೀಕ್ಷಿಸಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು ಭಯ-ಭೀತರಾಗದಂತೆ ನಾನು ವಿನಂತಿಸುತ್ತೇನೆ' ಎಂದು ದೇವೇಗೌಡ ತಮ್ಮ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥನೆ: ದೇವೇಗೌಡ ದಂಪತಿ ಕೋವಿಡ್ ಸೋಂಕಿಗೆ ತುತ್ತಾಗಿರುವ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ, ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದು, ಇಬ್ಬರೂ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...