ಮಾಜಿ ಸಚಿವ ಜಸ್ವಂತ್ ಸಿಂಗ್ ನಿಧನ

Source: sonews | By Staff Correspondent | Published on 27th September 2020, 3:41 PM | National News |

ಹೊಸದಿಲ್ಲಿ:ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ದಿಲ್ಲಿಯಲ್ಲಿ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.

ರಾಜಸ್ಥಾನದ ಬರ್ಮರ್ ಜಿಲ್ಲೆಯಲ್ಲಿ ರಜಪೂತ್ ಕುಟುಂಬದಲ್ಲಿ 1938ರಲ್ಲಿ ಜನಿಸಿದ್ದ ಜಸ್ವಂತ್ ಸಿಂಗ್ ಅವರು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರಕಾರದದಲ್ಲಿ ವಿದೇಶಾಂಗ ಸಚಿವ,ರಕ್ಷಣಾ ಸಚಿವ ಹಾಗೂ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 1950-60ರ ದಶಕದಲ್ಲಿ ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಿದ್ದರು. ಸೇನೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಪ್ರವೇಶಿಸಿದ್ದರು.

ಜಸ್ವಿಂತ್ ಸಿಂಗ್ ಇಂದು ಬೆಳಗ್ಗೆ 6:55ರಸುಮಾರಿಗೆ ದಿಲ್ಲಿಯ ಆರ್ಮಿ ಆಸ್ಪತ್ರೆ(ರಿಸರ್ಚ್ ಹಾಗೂ ರೆಫೆರಲ್)ನಲ್ಲಿ ಹೃದಯಾಘಾತದಿಂದ ನಿಧನರಾದರು. ಜೂನ್ 25 ರಂದು ಈ ಆಸ್ಪತ್ರೆಗೆ ದಾಖಲಾಗಿದ್ದರು.

ಬಿಜೆಪಿಯ ಹಿರಿಯ ನಾಯಕ ಜಸ್ವಂತ್ ಸಿಂಗ್ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂತಾಪವ್ಯಕ್ತಪಡಿಸಿದ್ದು, ಭಾರತೀಯ ಸೇನೆ ಹಾಗೂ ರಾಜಕಾರಣದಲ್ಲಿ ಅವರ ಕೊಡುಗೆಯನ್ನು ಕೊಂಡಾಡಿದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...