ಯಲ್ಲಾಪುರದಲ್ಲಿ ಧಾರುಣ ಘಟನೆ. ಧರೆಯ ಮಣ್ಣು ಕುಸಿದು ನಾಲ್ವರು ಭೂ ಸಮಾಧಿ.

Source: SO News | By Laxmi Tanaya | Published on 8th March 2021, 7:53 PM | State News |

ಯಲ್ಲಾಪುರ : ತೋಟದಲ್ಲಿ ಕೆಲಸ ಮಾಡುತ್ತಿರುವ ವೇಳೆ ಗುಡ್ಡದ ಮಣ್ಣು  ಕುಸಿದು ನಾಲ್ವರು ಸಾವನ್ನಪ್ಪಿದ ಧಾರುಣ ಘಟನೆ  ಯಲ್ಲಾಪುರ ತಾಲ್ಲೂಕಿನ ಇಡಗುಂದಿಯಲ್ಲಿ ನಡೆದಿದೆ.

ತಾಲೂಕಿನ ಕಿರವತ್ತಿ  ಗೌಳಿವಾಡದ ನಿವಾಸಿಗಳಾದ ಸಂತೋಷ್ ಡೋಯಿಪಡೆ (18), ಭಾಗ್ಯಶ್ರೀ ಎಡಗೆ (21), ಲಕ್ಷ್ಮೀ ಡೋಯಿಪಡೆ (38)  ಹಾಗೂ ಮಾಳು ಡೋಯಿಪಡೆ (21) ಮೃತ ದುರ್ದೈವಿಗಳಾಗಿದ್ದಾರೆ. ಘಟನೆಯಲ್ಲಿ
ತಗ್ಗಿಬಾಯಿ, ಸೋನಿ ಹಾಗೂ ಬೀರು ಎನ್ನುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  

ಇಡಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂತೇಬೈಲ್ ನ ಮಂಜುನಾಥ ಭಟ್ಟ ಎಂಬುವವರ  ತೋಟದಲ್ಲಿ‌ ಒಟ್ಟು  ಏಳು ಮಂದಿ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದರು. ಧರೆ ಅಗೆದು ತೋಟಕ್ಕೆ ಮಣ್ಣು ಹಾಕುತ್ತಿದ್ದ ವೇಳೆಗೆ ಮಣ್ಣು ಕುಸಿದು  ಕಾರ್ಮಿಕರ ಮೇಲೆ ಬಿದ್ದಿದರಿಂದ ಸಮಾಧಿಯಾಗಿದ್ದಾರೆ. 

   ಯಲ್ಲಾಪುರ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಶವವನ್ನ ಮೇಲಕ್ಕೆ ತೆಗೆದಿದ್ದಾರೆ.   ಯಲ್ಲಾಪುರ  ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗಿದೆ.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...