ಬಂಟ್ವಾಳ: ಪೊಲೀಸರು ಗುಂಡು ಹಾರಿಸಿರುವ ಪ್ರಕರಣ ಮತ್ತೆ ಡಿ ಗ್ಯಾಂಗ್‌ನ ನಾಲ್ವರು ಆರೋಪಿಗಳ ಬಂಧನ, 1 ಏಳಕೇರಿದ ಬಂಧಿತರ ಸಂಖ್ಯೆ, 2 ಪಿಸ್ತೂಲ್, ಸಜೀವ ಗುಂಡು, ನಾಡ ಬಂದೂಕು ವಶ

Source: VB | By S O News | Published on 6th April 2021, 9:09 PM | Coastal News |

ಬಂಟ್ವಾಳ: ಕೇರಳ ಮತ್ತು ಕರ್ನಾಟಕ ಪೊಲೀಸರು ಗುಂಡು ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೇರಳದ ಕುಖ್ಯಾತ 'ಡಿ ಗ್ಯಾಂಗ್'ನ ಪ್ರಮುಖ ಸೇರಿ ಮತ್ತೆ ನಾಲ್ಕು ಮಂದಿ ಆರೋಪಿಗಳನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದು, ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಡಿ ಗ್ಯಾಂಗ್‌ನ ಮುಖ್ಯಸ್ಥ ಎ೦ದು ಗುರುತಿಸಿಕೊಂಡಿರುವ ಕೇರಳ ಕಾಸರಗೋಡು ಜಿಲ್ಲೆಯ ಮೀಯಪದವು ಮೂಡಂಬೈಲು ನಿವಾಸಿ ಅಬ್ದುಲ್ ರಹ್ಮಾನ್ ಯಾನೆ ರಹೀಂ(25), ಮಹಾರಾಷ್ಟ್ರ ಜಲಗಾವ್ ಮುಕುಂದ ನಗರ ನಿವಾಸಿ ರಾಕೇಶ್ ಕಿಶೋರ್ ಬಾವಿಸ್ಕರ್ ಯಾನೆ ರಾಕಿ ಯಾನೆ ರಾಕಿ ಬಾಯ್ (27), ಡಿ ಗ್ಯಾಂಗ್ ಸದಸ್ಯರಾದ ಕಡಂಬಾರು ಬಟ್ಯಪದವು ನಿವಾಸಿ ಮುಹಮ್ಮದ್ ಫಯಾಝ್ ಯಾನೆ ಕೂವ ಫಯಾಝ್ (22), ಮಂಗಲ್ಪಾಡಿ ಸೋಂಕಾಳ್ ನಿವಾಸಿ ಹೈದರ್ ಅಲಿ ಯಾನೆ ಹೈದರ್‌ (20) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ ಮೂರು 7.65 ಎಂಎಂ ಪಿಸ್ತೂಲ್, ಒಂದು ನಾಡ ಕೋವಿ, 13 ಸಜೀವ ಮದ್ದುಗುಂಡು, 1 ಕಾರನ್ನು ವಶಪಡೆದುಕೊಳ್ಳಲಾಗಿದೆ. ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಫಯಾಝಝ್ ವಿರುದ್ಧ ಕೇರಳದ ಮಂಜೇಶ್ವರ ಠಾಣೆಯಲ್ಲಿ ಹಲ್ಲೆ, ದೊಂಬಿ, ಕೊಲೆಯತ್ನ, ಅಕ್ರಮ ಶಸ್ತ್ರಾಸ್ತ್ರ ಬಳಕೆ, ಕುಂಬಳೆಯಲ್ಲಿ ಕೊಲೆಯತ್ನ, ಆಂಧ್ರ ಪ್ರದೇಶದಲ್ಲಿ ಗಾಂಜಾ ಪ್ರಕರಣ ಸೇರಿ 11 ಪ್ರಕರಣಗಳು ಇವೆ. ಈತ ಹೊರ ರಾಜ್ಯದ ಪೊಲೀಸರಿಗೆ ಬೇಕಾಗಿದ್ದ ಆರೋಪಿಯಾಗಿದ್ದಾನೆ.

ರಹೀಂ ವಿರುದ್ಧಮಂಜೇಶ್ವರ ಠಾಣೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಬಳಕೆ, ಗಾಂಜಾ, ಕೊಲೆ ಯತ್ನ ಅಪಹರಣ, ಚಿಕ್ಕಮಗಳೂರು ಠಾಣೆಯಲ್ಲಿ ಗಾಂಜಾ ಪ್ರಕರಣ ಸೇರಿ 11 ಪ್ರಕರಣಗಳು ಇವೆ ಎಂದು ಪೊಲೀಸರು ಮಾಹಿತಿ ನೀಡಿದರು.

ಮಾ.25ರಂದು ರಾತ್ರಿ ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳದ ಕ್ಲಬ್ ಒಂದರಲ್ಲಿ ಮತ್ತೊಂದು ತಂಡದೊಂದಿಗೆ ಕಾಳಗ ನಡೆಸಿದ ಕುಖ್ಯಾತ ಡಿ ಗ್ಯಾಂಗ್‌ನ ಸದಸ್ಯರು ಕ್ಲಬ್‌ನಲ್ಲಿ ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದರು. ಇವರನ್ನು ಬೆನ್ನತ್ತಿದ್ದ ಕೇರಳ ಪೊಲೀಸರತ್ತವೂ ಗುಂಡು ಹಾರಿಸಿ ಕರ್ನಾಟಕ ಗಡಿಯಾದ ವಿಟ್ಲಕ್ಕೆ ಬಂದಿದ್ದರು. ಈ ಬಗ್ಗೆ ಮಾಹಿತಿ ಪಡೆದ ವಿಟ್ಲ ಠಾಣಾ ಪೊಲೀಸರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಿದಾಗ ವಿಟ್ಲ ಪೊಲೀಸರ ಮೇಲೂ ಗುಂಡು ಹಾರಿಸಿದ್ದರು.

ಕಾರ್ಯಾಚರಣೆಯಲ್ಲಿ ಮಂಜೇಶ್ವರ ಮಂಗಲ್ಪಾಡಿ ಬೈತಿಲ ನಿವಾಸಿ ಅಬ್ದುಲ್ ಲತೀಫ್ ಯಾನೆ ಲತ್ತಿ ಯಾನೆ ಲತೀಫ್(23), ಮೀಂಜ ಮೀಯಪದವು ಬೆಚ್ಚಂಗಳ ನಿವಾಸಿ ಮಹಮ್ಮದ್ ಶಾಕೀರ್ ಯಾನೆ ಶಾಕೀರ್ (26), ಮೂಡಂಬೈಲು ಅಡ್ಡಂತಗುರಿ ನಿವಾಸಿ ಮಹಮ್ಮದ್ ಅಶ್ವಕ್ ಯಾನೆ ಅಶ್ಫಾಕ್(25)ರನ್ನು ಬಂಧಿಸಿದ್ದರು. ಈ ವೇಳೆ ಇಬ್ಬರು ಪರಾರಿಯಾಗಿದ್ದರು.

ಅಂದು ಬಂಧಿತರಿಂದ ಒಂದು ಕಾರು, ಒಂದು ಪಿಸ್ತೂಲ್, 13 ಸಜೀವ ಗುಂಡು, 1 ಡ್ರಾಗನ್, 1 ಕೊಡಲಿ, 1 ಚೂರಿ, ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾರ್ಗದರ್ಶನದಲ್ಲಿ ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜ್ ಅವರ ನಿರ್ದೇಶನದಂತೆ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರನ್ನೊಳಗೊಂಡ ವಿಟ್ಲ ಠಾಣೆಯ ಉಪ ನಿರೀಕ್ಷಕ ವಿನೋದ್ ರೆಡ್ಡಿ, ಎಎಸ್ಸೈ ಕರುಣಾಕರ್‌, ಸಿಬ್ಬಂದಿಯಾದ ಪ್ರಸನ್ನ, ಗಿರೀಶ್, ಪ್ರತಾಪ, ವಿನಾಯಕ, ಲೋಕೇಶ್, ಹೇಮರಾಜ್, ನಝೀರ್, ವಿವೇಕ್, ಪ್ರವೀಣ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...