ಉ.ಕ.ಜಿಲ್ಲೆಯಲ್ಲಿ ಆರು ಹೊಸ ಸೋಂಕಿತರ ಸೇರ್ಪಡೆ; ಸಿದ್ಧಾಪುರದಲ್ಲಿ ಖಾತೆ ತೆರೆದ ಕೊರೋನಾ

Source: sonews | By Staff Correspondent | Published on 27th May 2020, 3:50 PM | Coastal News | Don't Miss |

75ಕ್ಕೇರಿದ ಸೋಂಕಿತರ ಸಂಖ್ಯೆ

 

ಭಟ್ಕಳ:  ಉತ್ತರಕನ್ನಡ ಜಿಲ್ಲೆಯಲ್ಲಿ ಮಂಗಳವಾರ 5ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾದರೆ ಬುಧವಾರ ಮತ್ತೆ 6ಮಂದಿ ಕೊರೋನಾ ಸೋಂಕಿತರಾಗಿದ್ದು ಇದರಿಂದಾಗಿ ಈ ವರೆಗೆ ಜಿಲ್ಲೆಯ ಕೊರೋನಾ ಸೋಂಕಿತರ ಸಂಖ್ಯೆ 75 ಆಗಿದೆ.

ಸಿದ್ದಾಪುರ ತಾಲೂಕಿನ 52 ವರ್ಷದ ವ್ಯಕ್ತಿ ಸೋಂಕಿತನಾಗಿದ್ದು , ಹೊನ್ನಾವರದ 24 ವರ್ಷದ ಯುವಕ,  ಯಲ್ಲಾಪುರದ 4 ಹಾಗೂ 9 ವರ್ಷದ ಬಾಲಕರು, 12 ವರ್ಷದ ಬಾಲಕಿ ಹಾಗೂ 26 ವರ್ಷದ ಯುವಕನಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು  ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ಮಾಹಿತಿ ನೀಡಿದೆ.

ಎಲ್ಲರೂ ಒಂದು ವಾರದ ಹಿಂದೆ ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದಿದ್ದು, ಎಲ್ಲರನ್ನೂ ಸಾಂಸ್ಥಿಕ ಕ್ವಾರಂಟೈನ್ ನಲ್ಲಿಡಲಾಗಿತ್ತು. ಇಷ್ಟು ದಿನದವರೆಗೆ ಸಿದ್ದಾಪುರ ತಾಲೂಕಿಗೆ ಕೊರೋನಾ ಕಾಲಿಟ್ಟಿರಲಿಲ್ಲ. ಇದೀಗ ಸಿದ್ದಾಪುರ ಮೂಲದ ವ್ಯಕ್ತಿಯಲ್ಲೂ ಸೋಂಕು ದೃಢಪಡುವ ಮೂಲಕ ಜಿಲ್ಲೆಯ ಸೋಂಕಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಯಾಗಿದೆ.

ಸದ್ಯ ಅಂಕೋಲಾ, ಹಳಿಯಾಳ ಹೊರತುಪಡಿಸಿ ಜಿಲ್ಲೆಯ 10 ತಾಲೂಕುಗಳಲ್ಲೂ ಸೋಂಕಿತರು ಪತ್ತೆಯಾದಂತಾಗಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 75 ಮಂದಿ ಸೋಂಕಿತರಿದ್ದು, 37 ಮಂದಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿ 38 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...