ಭಟ್ಕಳದಲ್ಲಿ ಮತ್ತೇ ಹುಚ್ಚುನಾಯಿ ದಾಳಿ; ಮಗು ಸೇರಿದಂತೆ ನಾಲ್ವರು ಗಾಯ

Source: sonews | By Staff Correspondent | Published on 14th September 2018, 5:50 PM | Coastal News | State News | Incidents | Don't Miss |

ಭಟ್ಕಳ: ಕಳೆದ ಎರಡು ದಿನಗಳ ಹಿಂದಷ್ಟೆ ಮಟ್ಟಳ್ಳಿ ಪಂಚಾಯತ್ ವ್ಯಾಪ್ತಿಯಲ್ಲಿ  ನಾಲ್ವರ ಮೇಲೆ ಹುಚ್ಚು ನಾಯಿ ನಡೆಸಿದ್ದ ಘಟನೆ ಮಾಸುವ ಮುನ್ನವೇ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ 10 ವರ್ಷದ ಬಾಲಕ ಸೇರಿದಂತೆ ನಾಲ್ಕು ಜನರಿಗೆ ಹುಚ್ಚು ನಾಯಿ ಕಡಿದು ಗಾಯಗೊಳಿಸಿದ ಘಟನೆ ಗುರುವಾರ ಸಂಜೆ ವರದಿಯಾಗಿದೆ. 

ಹುಚ್ಚು ನಾಯಿ ಕಡಿತಕ್ಕೊಳಗಾದವರನ್ನು ಉಮ್ಮೆ ಸಲ್ಮಾ(31), ಶಬಾನಾ (27), ಶಬ್ಬಿರ್ (49) ಹಾಗೂ ರಯ್ಯಾನ್(10) ಎಂದು ಗುರುತಿಸಲಾಗಿದ್ದು ಭಟ್ಕಳ ತಾಲೂಕಾಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. 

ಭಟ್ಕಳದ ಹಲವೆಡೆ ಸಮರ್ಪಕ ಕಸವಿಲೆವಾರಿ ಇಲ್ಲದ ಕಾರಣ ಅಲ್ಲಲ್ಲಿ ರಸ್ತೆ ಬದಿಯಲ್ಲೇ ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿ ಬೀಸಾಡುತ್ತಿದ್ದು ಇದನ್ನು ತಿನ್ನಲು ತಂಡೋಪತಂಡವಾಗಿ ಬರುವ ನಾಯಿಗಳು ದಾರಿಹೋಕರ ಮೇಲೆ ದಾಳಿ ಮಾಡುತ್ತಿವೆ. ನಗರ ವ್ಯಾಪ್ತಿಯಲ್ಲಿ ಕಸವಿಲೇವಾರಿ ಮಾಡುತ್ತಿರುವ ಪುರಸಭೆಯವರು ಈ ಕಾರ್ಯವನ್ನು ಇನ್ನಷ್ಟು ಸಮರ್ಪಕವಾಗಿ ಮಾಡಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಅಲ್ಲದೆ ಜಾಲಿ ಪಟ್ಟಣ ಪಂಚಾಯತ್, ಹೆಬಳೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಸವಿಲೆವಾರಿ ಮಾಡಲು ಸಮರ್ಪಕ ವ್ಯವಸ್ಥೆ ಇಲ್ಲದೆ ಇರುವುದರಿಂದಾಗಿ ಜಾಲಿ ಪ.ಪಂ. ವ್ಯಾಪ್ತಿಯ ಆಜಾದ್ ನಗರ, ಹೆಬಳೆ ಪಂಚಾಯತ್ ವ್ಯಾಪ್ತಿಯ ಹನಿಫಾಬಾದ್, ಮದಿನಾ ಕಾಲೋನಿ, ಜಾಮಿಯಾಬಾದ್ ರಸ್ತೆಯ ತುಂಬೆಲ್ಲಾ ಕಸದ ರಾಶಿಯನ್ನು ಹಾಕಲಾಗಿದ್ದು ಇದರಿಂದಾಗಿ ಹಲವು ರೋಗರುಜಿನಗಳು ಹರಡಲು ಕಾರಣವಾಗಿದೆ. ಅಲ್ಲದೆ ಇತ್ತಿಚೆಗೆ ಭಟ್ಕಳದಲ್ಲಿ ಇಲಿಜ್ವರ ತೀವ್ರಸ್ವರೂಪದಲ್ಲಿ ಕಾಣಿಸಿಕೊಂಡಿದ್ದು ಈ  ಇಲಿ ಜ್ವರಕ್ಕೆ ಓರ್ವ ಮಹಿಳೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದ್ದು ಸೂಕ್ತ ಆರೋಗ್ಯಕ್ರಮ ಜರಗಿಸಲು ಅದು ಸೂಚಿಸಿದೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...