ಮುರುಡೇಶ್ವರದಲ್ಲಿ ಸಮುದ್ರದಲೆಗಳಿಗೆ ಕೊಚ್ಚಿ ಹೋಗುತ್ತಿದ್ದ ನಾಲ್ವರು ಪ್ರವಾಸಿಗರ ರಕ್ಷಣೆ!

Source: so news | Published on 8th October 2019, 11:59 PM | Coastal News | Don't Miss |

 

ಭಟ್ಕಳ: ಕಡಲ ತೀರದಲ್ಲಿ ಈಜಾಡುತ್ತಿರುವಾಗ ಅಲೆಗಳ ರಭಸಕ್ಕೆ ಸಿಕ್ಕಿ ಕೊಚ್ಚಿ ಹೋಗುತ್ತಿದ್ದ ನಾಲ್ವರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ.ಚಿತ್ರದುರ್ಗದಿಂದ ಪ್ರವಾಸಕ್ಕೆಂದು ಒಟ್ಟು ಎಂಟು ಮಂದಿ ಮುರುಡೇಶ್ವರಕ್ಕೆ ಬಂದಿದ್ದರು. ನಂತರ ಅಲ್ಲಿನ ಕಡಲ ತೀರಕ್ಕೆ ಈಜಾಡಲೆಂದು ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ಒಟ್ಟು ಎಂಟು ಮಂದಿಯಲ್ಲಿ ಕಾವ್ಯ, ಪಲ್ಲವಿ, ಚಂದ್ರಶೇಖರ ಹಾಗೂ ಬಸವರಾಜ್ ಎಂಬುವವರು ಅಲೆಗಳ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದರು. ಈ ವೇಳೆ ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ನಾಲ್ವರು ನೀರುಪಾಲಾಗುವ ಹಂತದಲ್ಲಿದ್ದರು. ತಕ್ಷಣವೇ ಕರ್ತವ್ಯದಲ್ಲಿದ್ದ ಲೈಫ್ ಗಾರ್ಡ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ರಕ್ಷಣೆ ಮಾಡಿದ್ದಾರೆ. ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲೈಫ್ ಗಾರ್ಡ್ ಸಿಬ್ಬಂದಿ ಜೈರಾಮ್, ಶ್ರೀಕಾಂತ್, ರವಿ, ಚಂದ್ರಶೇಖರ್ ಹಾಗೂ ಪ್ರವಾಸಿ ಮಿತ್ರ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ರಕ್ಷಣೆ ಮಾಡಿದ್ದು, ಈ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...