ರೂರಲ್ ಐಟಿ ಕ್ವಿಜ್ ನಲ್ಲಿ ನ್ಯೂಶಮ್ಸ್ ಸ್ಕೂಲ್ ತಂಡಕ್ಕೆ ನಾಲ್ಕನೇ ಸ್ಥಾನ

Source: sonews | By Staff Correspondent | Published on 15th October 2019, 5:06 PM | Coastal News | Don't Miss |

ಭಟ್ಕಳ: ಧಾರಡಾದ ಜ್ಞಾನವಿಕಾಸ ತರಬೇತಿ ಸಂಸ್ಥೆಯಲ್ಲಿ ಮಂಗಳವಾರ ಜರಗಿದ ವಿಭಾಗೀಯ ರೂರಲ್ ಐಟಿ ಕ್ವಿಝ್ ಸ್ಪರ್ಧೆಯಲ್ಲಿ ಹೆಬಳೆ ಗ್ರಾ.ಪಂ.ವ್ಯಾಪ್ತಿಯ ತರಬಿಯತ್ ಎಜ್ಯುಕೇಶನ್ ಸೂಸೈಟಿಯ ನ್ಯೂ ಶಮ್ಸ್ ಶಾಲಾ ತಂಡವು ನಾಲ್ಕನೇ ಸ್ಥಾನ ಪಡದುಕೊಂಡಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ. 

ಗ್ರಾಮೀಣ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಟಿಸಿಎಸ್ ಸಂಸ್ಥೆಯು ಪ್ರತಿವರ್ಷ ಶಾಲಾ ಹಂತದಿಂದ ರಾಜ್ಯಮಟ್ಟದ ವರೆಗೆ ರೂರಲ್ ಐಟಿ ಕ್ವಿಜ್ ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದು  ಮಂಗಳವಾರ ನಡೆದ ಧಾರವಾಡ ವಿಭಾಗೀಯ ಮಟ್ಟದ ರೂರಲ್ ಐಟಿ ಕ್ವಿಜ್-2019 ರ ಸ್ಪರ್ಧೆಯಲ್ಲಿ 255 ತಂಡಗಳು ಭಾಗವಹಿಸಿದ್ದು ಎರಡು ಹಂತದಲ್ಲಿ ನಡೆದ ಸ್ಪರ್ಧೆಯಲ್ಲಿ ಭಟ್ಕಳದ ನ್ಯೂ ಶಮ್ಸ್ ಸ್ಕೂಲ್ ತಂಡದ ಸಯೀಫ್ ಸಿದ್ದಿಆಹ್ಮದ್ ಹಾಗೂ ವಖಾಸ್ ಕರಿಣಿಯವರ ತಂಡವು ಟಾಪ್ 6 ನಲ್ಲಿ ಸ್ಥಾನ ಪಡೆದು ಅಂತಿವi ಸುತ್ತಿನಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...